ರಂಟಚಿಂತಲ (ಆಂಧ್ರ ಪ್ರದೇಶ):ಅಯೋಧ್ಯೆಗೆ ಹೊರಟ ಬೀದರ್‌ನ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಿನ್ನೆ ಭಾನುವಾರವಷ್ಟೇ ನಡೆದಿದೆ. ಇದರ ಬೆನ್ನಲ್ಲೇ ಇದೀಗ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿಯ ದರ್ಶನ ಪಡೆದು ವಾಪಸಾಗುತ್ತಿದ್ದ ವಾಹನ ಅಪಘಾತವಾಗಿದ್ದು ಏಳು ಮಂದಿ ಮೃತಪಟ್ಟಿದ್ದಾರೆ.
ಇಲ್ಲಿನ ರಂಟಚಿಂತಲ ಗ್ರಾಮದ ಕುಟುಂಬ ಸದಸ್ಯರು ಇದ್ದ ಟಾಟಾ ಏಸ್​ ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಹಲವಾರು ಮಂದಿಗೆ ಗಾಯಗಳಾಗಿವೆ. ಅಪಘಾತದ ರಭಸಕ್ಕೆ ಟಾಟಾ ಏಸ್​ ವಾಹನ ಪಲ್ಟಿಯಾಗಿದ್ದು, ವಾಹನದಲ್ಲಿದ್ದವರು ಒಬ್ಬರ ಮೇಲೊಬ್ಬರು ಬಿದ್ದಿದ್ದರಿಂದ ಮೃತರ ಸಂಖ್ಯೆಯಲ್ಲಿ ಏರಿಕೆ ಆಗಿದೆ.
ಕೋಟೇಶ್ವರಿ (45), ರೋಶಮ್ಮ (65), ರಮಾದೇವಿ (50), ಕೋಟಮ್ಮ (70), ರಮಣ (50) ಮತ್ತು ಲಕ್ಷ್ಮೀನಾರಾಯಣ (35) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಗುಂಟೂರು ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಪ್ರದೇಶ ಕಗ್ಗತ್ತಲಿನಿಂದ ಕೂಡಿದ್ದು, ರಸ್ತೆಯಲ್ಲಿ ನಿಲ್ಲಿಸಿರುವ ವಾಹನಗಳು ಕಾಣಿಸುವುದಿಲ್ಲ. ಹೀಗಾಗಿ ಲಾರಿ ನಿಂತಿದ್ದು ಕಾಣಿಸದೇ ಚಾಲಕ ಬಂದು ಗುದ್ದಿದ್ದಾನೆ ಎನ್ನಲಾಗಿದೆ.
ಔಷಧ ತರುವ ಮುನ್ನ ಎಚ್ಚರ! ರೋಗಿಯ ಬಲಿ ಪಡೆದ ಹುಬ್ಬಳ್ಳಿಯ ಮೆಡಿಕಲ್‌ ಷಾಪ್‌: ಮದುವೆ ಮನೆಯಲ್ಲಿ ಸೂತಕ

ಅಯೋಧ್ಯೆಗೆ ಹೊರಟ ಬಸ್​ ಭೀಕರ ಅಪಘಾತ: ಕರ್ನಾಟಕದ ಏಳು ಮಂದಿ ಸಾವು- 9 ಮಂದಿ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + eight =
Remember me
