ಮುಂಬೈ:ನಟಿಯರಷ್ಟೇ ಅಂಗಾಂಗ ತೋರಿಸುವುದ್ಯಾಕೆ? ನಾನೂ ಒಂದು ಹೆಜ್ಜೆ ಮುಂದೆ ಹೋಗುತ್ತೇನೆ ಎಂದು ಸಂಪೂರ್ಣವಾಗಿ ಬೆತ್ತಲಾ ಮ್ಯಾಗಜೀನ್​ ಒಂದಕ್ಕೆ ಫೋಟೋ ಶೂಟ್​ ಮಾಡಿಸಿಕೊಂಡು ಇದೀಗ ಭಾರಿ ವಿವಾದಕ್ಕೆ ಗುರಿಯಾಗಿದ್ದಾರೆ ಬಾಲಿವುಡ್​ ನಟ ರಣವೀರ್​ ಸಿಂಗ್​.
ಈ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದರು. ಕೆಲ ಸೆಲೆಬ್ರಿಟಿಗಳು ಸೇರಿ ಇವರ ಕೆಲ ಅಭಿಮಾನಿಗಳು ಇದಕ್ಕೆ ಹೊಗಳಿಕೆ ವ್ಯಕ್ತಪಡಿಸಿದ್ದರೆ, ಇದು ಹಲವು ಮಹಿಳಾಮಣಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಇದೇ ಕಾರಣಕ್ಕೆ ಇವರ ವಿರುದ್ಧ ಮುಂಬೈ ಪೊಲೀಸರಲ್ಲಿ ಕೇಸ್ ಕೂಡ ದಾಖಲಾಗಿದೆ.
ಮಹಿಳೆಯರ ಭಾವನೆಗೆ ಧಕ್ಕೆಯಾಗಿರುವ ಆರೋಪದಡಿ ರಣವೀರ್​ ವಿರುದ್ಧ ಮುಂಬೈ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆ (ಐಪಿಸಿ)ಯ ಸೆಕ್ಷನ್​ 509, 294 ಮತ್ತು ಐಟಿ ಕಾಯ್ದೆ 67 ಎ ಸೆಕ್ಷನ್​ ಅಡಿಯಲ್ಲಿ ಮುಂಬೈನ ಚೆಂಬೂರ್​ ಠಾಣಾ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ.
ಈ ಕೇಸ್​ನ ಹಿನ್ನೆಲೆಯಲ್ಲಿ ರಣವೀರ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸತತ ಎರಡು ಗಂಟೆಗಳ ವರೆಗೆ ವಿಚಾರಣೆ ನಡೆಸಿದ್ದಾರೆ. ಈ ರೀತಿ ಫೋಟೋಶೂಟ್​ ಮಾಡಿಸಿದೆ ಇಷ್ಟೆಲ್ಲಾ ಸಮಸ್ಯೆ ಆಗುತ್ತದೆ ಎಂದು ನನಗೆ ತಿಳಿದಿರಲಿಲ್ಲ. ಇಲ್ಲದಿದ್ದರೆ ಹೀಗೆಲ್ಲಾ ಮಾಡುತ್ತಲೇ ಇರಲಿಲ್ಲ. ನಾನು ಬೆತ್ತಲಾಗಿರುವುದು ಇಷ್ಟೆಲ್ಲಾ ವಿವಾದಕ್ಕೆ ಕಾರಣವಾಗುತ್ತದೆ ಎಂದು ಊಹಿಸಿಯೂ ಇರಲಿಲ್ಲ ಎಂದಿದ್ದಾರೆ.
‘ನಾನು ವಿವಾದಾತ್ಮಕ ಫೋಟೋಗಳನ್ನು ಅಪ್​ಲೋಡ್ ಮಾಡಿಲ್ಲ. ಆ ಫೋಟೋಗಳು ಆ ರೀತಿಯ ಸಮಸ್ಯೆ ತರುತ್ತದೆ ಎಂದು ನಾನು ಯೋಚಿಸಿರಲಿಲ್ಲ’ ಎಂದು ರಣವೀರ್ ಸಿಂಗ್ ಅವರು ಪೊಲೀಸರ ಎದುರು ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ರಣವೀರ್​ಗೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ ಎಂದು ಮೂಲಗಳು ಹೇಳಿವೆ.
ಯುನೈಟೆಡ್​ ಅರಬ್​ ಎಮಿರೇಟ್ಸ್​ (ಯುಎಇ) ಮೂಲದ ಸ್ವಘೋಷಿತ ಸಿನಿಮಾ ವಿಮರ್ಶಕ ಉಮೇರ್​ ಸಂಧು ಅವರು ಹೇಳಿರುವ ಪ್ರಕಾರ, ರಣವೀರ್​ ಸಿಂಗ್​ ಅವರು ಮ್ಯಾಗಜಿನ್​ ಮುಖಪುಟಕ್ಕಾಗಿ ಬೆತ್ತಲಾಗಲು ಬರೋಬ್ಬರಿ 55 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆಂದು ತಿಳಿದುಬಂದಿದೆ. ತಮ್ಮ ಹಿಂದಿನ ಸಿನಿಮಾ 83 ಮತ್ತು ಜೊಯೆಶಾಭಾಯ್​ ಜೋರ್ದಾರ್​ ಸಿನಿಮಾಗಳ ಸಂಭಾವನೆಗಿಂತಲೂ ಅಧಿಕ ಎಂದು ಹೇಳಲಾಗಿದೆ. ಅಲ್ಲದೆ, 83 ಸಿನಿಮಾವನ್ನು ರಣವೀರ್​ ತಮ್ಮದೇ ಬ್ಯಾನರ್​ನಲ್ಲಿ ನಿರ್ಮಾಣ ಮಾಡಿದ್ದರು. ಆ ಸಿನಿಮಾದಿಂದ ನಷ್ಟವನ್ನು ಭರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. (ಏಜೆನ್ಸೀಸ್​)
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ- ಹೈಕೋರ್ಟ್​ನಿಂದ ಹೊರಟಿದೆ ಮಹತ್ವದ ತೀರ್ಪು- ಗೊಂದಲಕ್ಕೆ ತೆರೆ

ಬೆಂಗಳೂರಿನ ಈದ್ಗಾ ಮೈದಾನದಲ್ಲಿನ ಗಣೇಶೋತ್ಸವಕ್ಕೆ ಭಾರಿ ಹಿನ್ನಡೆ: ಎರಡೇ ಗಂಟೆಗಳಲ್ಲಿ ಸುಪ್ರೀಂನಿಂದ ಬಂತು ಈ ರೀತಿ ತೀರ್ಪು

ಗುಜರಾತ್​ನ ಗೋಧ್ರಾ ಗಲಭೆ, ಬಾಬ್ರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದ ಎಲ್ಲಾ ಕೇಸ್ ಕ್ಲೋಸ್​: ಸುಪ್ರೀಂ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − five =
Remember me
