ಬೆಂಗಳೂರು:ಬಿಗ್‍ಬಾಸ್ ಸ್ಪರ್ಧಿ, ನಟಿ ಅನಿತಾ ಭಟ್‌ ಸಾಮಾಜಿಕ ಜಾಲತಾಣದಲ್ಲಿ ಈಗ ನಾಥೂರಾಮ್‌ ಗೋಡ್ಸೆ ಮತ್ತು ಬ್ರಾಹ್ಮಣ್ಯದ ಕುರಿತಾಗಿ ಟ್ವೀಟ್‌ ಮಾಡಿದ್ದು, ಭಾರಿ ಚರ್ಚೆಯಲ್ಲಿದ್ದಾರೆ. ಇವರ ಹೇಳಿಕೆ ವಿವಾದ ಸೃಷ್ಟಿಸಿದ್ದು, ವಾದ- ಪ್ರತಿವಾದಗಳ ಕಮೆಂಟ್‌ಗಳ ಸುರಿಮಳೆಯಾಗುತ್ತಿದೆ.
ತಮ್ಮ ಟ್ವಿಟರ್‌ ಖಾತೆಯಲ್ಲಿ ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ನಟಿಯ ಬಗ್ಗೆ ಇದೀಗ ಎಲ್ಲೆಡೆ ಚರ್ಚೆ ಶುರುವಾಗಿದೆ. ಅಷ್ಟಕ್ಕೂ ನಟಿ ಮಾಡಿರುವ ಟ್ವೀಟ್‌ ಎಂದರೆ ಗಾಂಧಿಯನ್ನು ಕೊಂದ ಗೋಡ್ಸೆಗೆ ಜೈಕಾರ ಹಾಕಿದ್ದು ಬ್ರಾಹ್ಮಣರ ಕುರಿತಾಗಿಯೂ ಒಂದಿಷ್ಟು ಹೇಳಿಕೆ ನೀಡಿದ್ದಾರೆ.
ಗೋಡ್ಸೆ ದೇಶಪ್ರೇಮಿ:ನಾಥೂರಾಮ್‌ ಗೋಡ್ಸೆ ದೇಶಪ್ರೇಮಿ ಅಂದಿರುವ ನಟಿ ಅನಿತಾ, ಈ ಕುರಿತು ಸ್ಪಷ್ಟನೆ ಕೂಡ ನೀಡಿದ್ದಾರೆ. ಗಾಂಧಿಯನ್ನು ಕೊಂದು ಎಂಥ ದುರಂತಕ್ಕೆ ಸಿಕ್ಕಿ ಹಾಕಿಕೊಳ್ಳಬಹುದು ಎಂದು ಆತನಿಗೆ ಗೊತ್ತಿತ್ತು. ಆದರೂ ಆ ರೀತಿ ಮಾಡಿದ ಎಂದರೆ ಅವನ ದೇಶಪ್ರೇಮ ಎಷ್ಟು ಇತ್ತೆಂದು ಗೊತ್ತಾಗುತ್ತದೆ. ಆದ್ದರಿಂದ ಆತನ ದೇಶಪ್ರೇಮಕ್ಕೆ ಜೈ. ದೇಶಕ್ಕಿಂತ ಏನೂ ದೊಡ್ಡದಲ್ಲ. ಇನ್ನೆಷ್ಟು ಚೂರಾಗ್ತಾ ಇತ್ತೋ ನಮ್ಮ ಭಾರತ ಎನ್ನುವ ದೇಶಪ್ರೇಮದಿಂದ ಅವನು ಹೀಗೆ ಮಾಡಿದ್ದಾನೆ ಎಂದಿದ್ದಾರೆ.
ಸ್ವಾತಂತ್ರ್ಯ ಹೋರಾಟದಲ್ಲಿ ಪಾಲುಗೊಂಡಿದ್ದ ಗೋಡ್ಸೆ ಅವರು ದೇಶಭಕ್ತನೇ. ಅವರನ್ನ ಭಯೋತ್ಪಾದಕ ಅಂತ ಕರೆಯೋದು ನಿಮ್ಮಗಳ ಅಜ್ಞಾನ. ಯಾರೋ ಒಬ್ಬರಿಂದ ದೇಶಕ್ಕೆ ಸ್ವಂತಂತ್ರ ಬಂದಿಲ್ಲ. ಕೋಟಿಗಟ್ಟಲೆ ವೀರರು ನಮ್ಮ ದೇಶಕ್ಕಾಗಿ ಬಲಿದಾನ ಮಾಡಿದಾರೆ ಅನ್ನೋದು ಅರಿತುಕೊಂಡರೆ ಸಾಕು ಎಂದಿದ್ದಾರೆ.
ಬ್ರಾಹ್ಮಣರು ಬಡಪಾಯಿಗಳು:ಇನ್ನೊಂದು ಟ್ವೀಟ್‌ನಲ್ಲಿ ನಟಿ ಅನಿತಾ, ಬ್ರಾಹ್ಮಣರು ತಮ್ಮ ಪದವಿ ಮುಂದೆ ಜಾತಿ ಹೆಸರು ಹಾಕಿದ ಹಾಗೆ ನಾನೇನಾದ್ರೂ ಬ್ರಾಹ್ಮಣ ನಟಿ ಅಂತ ಹಾಕಿದ್ದೇನಾ? ಜಾತಿ ಹೆಸರು ಹೇಳಿ ಕೆಲಸ ಗಿಟ್ಟಿಸೋ ಗತಿ ಇನ್ನು ನನಗೆ ಬಂದಿಲ್ಲ. ದೇವಸ್ಥಾನದ ಪ್ರಸಾದ ತಿಂದು ಬದುಕಿದ್ರೂ ಸರಿ. ಅದಕ್ಕೆ ಬ್ರಾಹ್ಮಣ್ಯ ಅನ್ನೋ ಹೆಸರು ಯಾಕ್ರೀ? ಬೇರೆ ಜಾತಿಯವರೂ ಮಾಡ್ತಾರೆ ಅಂದ್ರೆ ಅವರವರ ಜಾತಿ ಹೆಸರು ಹಾಕಿ.
ಬಡಪಾಯಿ ಬ್ರಾಹ್ಮಣರು ಮೂಗು ಮುಚ್ಕೊಂಡು ಕೂತಿದ್ದಾರೆ, ಅದಕ್ಕೆ ಬೇಕಾಬಿಟ್ಟಿ ಮಾತಾಡ್ತಾರೆ. ಅಷ್ಟೇ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.
ಅವರು ಮಾಡಿರುವ ಸರಣಿ ಟ್ವೀಟ್‌ಗಳ ಲಿಂಕ್‌ ಇಲ್ಲಿದೆ ನೋಡಿ:
ಸ್ವಾತಂತ್ರ್ಯ ಹೋರಾಟದಲ್ಲಿ ಪಾಲುಗೊಂಡಿದ್ದ ಗೋಡ್ಸೆ ಯವರು ದೇಶಭಕ್ತನೇ. ಅವರನ್ನ terrorist ಅಂತ ಕರಿಯೋದು ನಿಮ್ಮಗಳ ಅಜ್ಞಾನ. ಯಾರೋ ಒಬ್ಬರಿನಿಂದ ದೇಶಕ್ಕೆ ಸ್ವಂತಂತ್ರ ಬಂದಿಲ್ಲ. ಕೋಟಿಗಟ್ಟಲೆ ವೀರರು ನಮ್ಮ ದೇಶಕ್ಕಾಗಿ ಬಲಿದಾನ ಮಾಡಿದಾರೆ ಅನ್ನೋದು ಅರಿತುಕೊಂಡರೆ ಸಾಕು..— Anita Bhat (@IamAnitaBhat)August 17, 2021
ಸ್ವಾತಂತ್ರ್ಯ ಹೋರಾಟದಲ್ಲಿ ಪಾಲುಗೊಂಡಿದ್ದ ಗೋಡ್ಸೆ ಯವರು ದೇಶಭಕ್ತನೇ. ಅವರನ್ನ terrorist ಅಂತ ಕರಿಯೋದು ನಿಮ್ಮಗಳ ಅಜ್ಞಾನ. ಯಾರೋ ಒಬ್ಬರಿನಿಂದ ದೇಶಕ್ಕೆ ಸ್ವಂತಂತ್ರ ಬಂದಿಲ್ಲ. ಕೋಟಿಗಟ್ಟಲೆ ವೀರರು ನಮ್ಮ ದೇಶಕ್ಕಾಗಿ ಬಲಿದಾನ ಮಾಡಿದಾರೆ ಅನ್ನೋದು ಅರಿತುಕೊಂಡರೆ ಸಾಕು..
ಗಾಂಧಿಯನ್ನು ಕೊಂದು ಎಂತ ದುರಂತಕ್ಕೆ ಸಿಕ್ಕಿ ಹಾಕಿಕೊಳ್ಳಬಹುದು ಅಂತ ಗೊತ್ತಿದ್ರೂ, ಅದನ್ನ ಮಡಿದ ಗೋಡ್ಸೆಯ ದೇಶಪ್ರೇಮಕ್ಕೆ ಜೈ. ದೇಶಕ್ಕಿಂತ ಏನೂ ದೊಡ್ಡದಲ್ಲ. ಇನ್ನೆಷ್ಟು ಚೂರಾಗ್ತಾ ಇತ್ತೋ ನಮ್ಮ ಭಾರತ.https://t.co/ifOYhMpCsh— Anita Bhat (@IamAnitaBhat)August 17, 2021
ಗಾಂಧಿಯನ್ನು ಕೊಂದು ಎಂತ ದುರಂತಕ್ಕೆ ಸಿಕ್ಕಿ ಹಾಕಿಕೊಳ್ಳಬಹುದು ಅಂತ ಗೊತ್ತಿದ್ರೂ, ಅದನ್ನ ಮಡಿದ ಗೋಡ್ಸೆಯ ದೇಶಪ್ರೇಮಕ್ಕೆ ಜೈ. ದೇಶಕ್ಕಿಂತ ಏನೂ ದೊಡ್ಡದಲ್ಲ. ಇನ್ನೆಷ್ಟು ಚೂರಾಗ್ತಾ ಇತ್ತೋ ನಮ್ಮ ಭಾರತ.https://t.co/ifOYhMpCsh
Educated people could take proper steps towards this Sir. ನನ್ನ ಅಮ್ಮ ಎಷ್ಟೋ ವರ್ಷಗಳ ಹಿಂದೇನೆ ಜಾತಿ ಪದ್ದತಿಯನ್ನ ದೂರ ಇಟ್ಟಿದಾರೆ. ಒಂದು ಲಂಬಾಣಿ ಹುಡುಗಿ ನಮ್ಮ ಮನೆಯಲ್ಲಿ ಓದೋಕೆ ಅಂತ 4 ವರ್ಷ ಇದ್ದಳು. ನಮ್ಮನೇ ದೇವರ ಪೂಜೆ ಕೂಡ ಮಾಡಿದಾಳೆ. ನನಗೆ ಇದರಲ್ಲಿ ವಿಶೇಷತೆ ಏನು ಕಂಡಿಲ್ಲ. ಸಂದರ್ಭ ಬಂದಿದ್ದರಿಂದ ಹೇಳಿದೆ ಅಷ್ಟೇ.https://t.co/1WWj5bIBXV
ಇವರುಗಳು ತಮ್ಮ ಪದವಿ ಮುಂದೆ ಜಾತಿ ಹೆಸರು ಹಾಕಿದ ಹಾಗೆ ನಾನೇನಾದ್ರೂ ಬ್ರಾಹ್ಮಣ ನಟಿ ಅಂತ ಹಾಕಿದಿನ? ಜಾತಿ ಹೆಸರು ಹೇಳಿ ಕೆಲಸ ಗಿಟ್ಟಿಸೋ ಗತಿ ಇನ್ನು ಬಂದಿಲ್ಲ. ದೇವಸ್ಥಾನದ ಪ್ರಸಾದ ತಿಂದು ಬದುಕಿದ್ರೂ ಸರಿ
ಅದಕ್ಕೆ ಬ್ರಾಹ್ಮಣ್ಯ ಅನ್ನೋ ಹೆಸರು ಯಾಕ್ರೀ ? ಬೇರೆ ಜಾತಿಯವರೂ ಮಾಡ್ತಾರೆ ಅಂದ್ರೆ ಅವರವರ ಜಾತಿ ಹೆಸರು ಹಾಕಿ. ಬಡಪಾಯಿ ಬ್ರಾಹ್ಮಣರು ಮೂಗು ಮುಚ್ಕೊಂಡು ಕೂತಿದಾರೆ , ಅದಕ್ಕೆ ಬೇಕಾಬಿಟ್ಟಿ ಮಾತಾಡ್ತಾರೆ.. ಅಷ್ಟೇhttps://t.co/alioatVR8A
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − seven =
Remember me
