ಮುಂಬೈ:ಅಕ್ರಮ ಆಸ್ತಿ ವರ್ಗಾವಣೆ, 200 ಕೋಟಿ ರೂ. ಸುಲಿಗೆ ಪ್ರಕರಣ ಸೇರಿದಂತೆ ಹಲವಾರು ವಂಚನೆ ಪ್ರಕರಣದಲ್ಲಿ ಸಿಲುಕಿರುವ ಸುಕೇಶ್ ಚಂದ್ರಶೇಖರ್ ಎಂಬಾತನಿಂದ ಕಿಸ್‌ ಪಡೆದು ಭಾರಿ ವಿವಾದದಲ್ಲಿ ಸಿಲುಕಿ, ಜಾರಿ ನಿರ್ದೇಶನಾಲಯದಿಂದ ವಿಚಾರಣೆ ಎದುರಿಸುತ್ತಿರುವ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧ ಈಗ ಅಧಿಕಾರಿಗಳು ಚಾರ್ಜ್​ಷೀಟ್​ ಸಲ್ಲಿಕೆ ಮಾಡಿದ್ದಾರೆ. ನಟಿಯನ್ನು ಆರೋಪಿಯನ್ನಾಗಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಜಾಕ್ವೆಲಿನ್ ಫರ್ನಾಂಡಿಸ್​ಗೆ ಈಗ ಬಂಧನದ ಭೀತಿ ಎದುರಾಗಿದೆ.
ಸುಕೇಶ್‌ ಜತೆ ಜಾಕ್ವೆಲಿನ್‌ ಡೇಟಿಂಗ್‌ ಮಾಡುತ್ತಿರುವುದಾಗಿ ಆರೋಪ ಕೇಳಿಬಂದಿತ್ತು. ಇದಕ್ಕೆ ಪುಷ್ಟಿ ನೀಡಲು ಎಂಬಂತೆ ಇಬ್ಬರೂ ಕಿಸ್‌ ಮಾಡುತ್ತಿರುವ ಫೋಟೋ ವೈರಲ್‌ ಆಗಿ ನಟಿ ಕೂಡ ಈಗ ವಿಚಾರಣೆ ಎದುರಿಸುವಂತಾಗಿದೆ. ಇದರ ಆಳಕ್ಕೆ ಹೋಗಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಈ ಸುಕೇಶ್‌ ಕುರಿತಂತೆ ಇನ್ನಷ್ಟು ಮಾಹಿತಿ ಸಿಕ್ಕಿತ್ತು. ಆತ ಜಾಕ್ವೆಲಿನ್​ ಮಾತ್ರವಲ್ಲದೇ ಕೆಲವು ನಟಿಯರನ್ನು ಹೇಗೆ ಬಲೆಗೆ ಬೀಳಿಸಿಕೊಂಡ ಎಂಬ ಬಗ್ಗೆ ಮಾಹಿತಿ ಸಿಕ್ಕಿತ್ತು. 200 ಕೋಟಿ ರೂ. ಸುಲಿಗೆ ಪ್ರಕರಣಕ್ಕೂ ತಮಗೂ ಸಂಬಂಧ ಇಲ್ಲ ಎಂದು ಇದಾಗಲೇ ನಟಿ ಜಾಕ್ವೆಲಿನ್​ ಇದಾಗಲೇ ಹೇಳಿದ್ದಾರೆ. ಆದರೆ ತನಿಖೆ ಕೈಗೊಂಡಿರುವ ಪೊಲೀಸರಿಗೆ ಈಕೆಯ ವಿರುದ್ಧವೂ ಕೆಲವೊಂದು ದಾಖಲೆಗಳು ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಆರೋಪಿಯನ್ನಾಗಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇದಾಗಲೇ ಜಾಕ್ವೆಲಿನ್‌ ಆಸ್ತಿಯನ್ನು ಜಪ್ತಿ ಮಾಡಿದೆ. ಮೂಲಗಳ ಪ್ರಕಾರ, 7.27 ಕೋಟಿ ಮೌಲ್ಯದ ಸ್ಥಿರ ಠೇವಣಿ ಮೌಲ್ಯದ ವಸ್ತುಗಳು ಮತ್ತು ಆಸ್ತಿಯನ್ನು ತನಿಖಾ ಸಂಸ್ಥೆ ಜಪ್ತಿ ಮಾಡಿದೆ. ಅಂದಹಾಗೆ, ಸುಕೇಶ್​ ಚಂದ್ರಶೇಖರ್ ಜಾಕ್ವೆಲಿನ್​ಗೆ ಹಲವು ಐಷಾರಾಮಿ ಉಡುಗೊರೆಗಳನ್ನು ನೀಡಿದ್ದಾರೆ. ಇದರಲ್ಲಿ ದುಬಾರಿ ಕುದುರೆ, ಜಿಮ್ ಉಡುಗೆಗಾಗಿ ಗುಚಿ ಬಟ್ಟೆಗಳು, ಶೂಗಳು, ರೋಲೆಕ್ಸ್ ವಾಚ್, 15 ಜೋಡಿ ಕಿವಿಯೋಲೆಗಳು, 5 ದುಬಾರಿ ಬ್ಯಾಗ್‌ಗಳು, ಹರ್ಮ್ಸ್ ಬಳೆಗಳು ಮತ್ತು ಎಲ್‌ವಿ ಬ್ಯಾಗ್‌ಗಳು ಸೇರಿವೆ.
ಏನಿದು ಕೇಸ್​? ಯಾರೀ ಸುಕೇಶ್ ಚಂದ್ರಶೇಖರ್?
ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ಜೆ. ಜಯಲಲಿತಾ ಅವರ ಕುಟುಂಬದಿಂದ ತಾನು ಬಂದವನು ಎಂದು ಹೇಳಿಕೊಂಡಿದ್ದ ಈ ಸುಕೇಶ್‌ ಚಂದ್ರಶೇಖರ್‌ ಜಾಕ್ವೆಲಿನ್ ಜತೆ ಸ್ನೇಹ ಬೆಳೆಸಲು ಮುಂದಾಗಿದ್ದ. ತನ್ನ ಹೆಸರನ್ನು ಸುರೇಶ್‌ ಎಂದು ಹೇಳಿಕೊಂಡಿದ್ದ. ಜಾಕ್ವೆಲಿನ್‌ ಜತೆ ಸ್ನೇಹ ಬೆಳೆಸುವುದು ಸುಲಭದ ಮಾತಾಗಿರಲಿಲ್ಲ. ಆದ್ದರಿಂದ ಈತ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಕಚೇರಿ ಸಂಖ್ಯೆಯನ್ನು ನಕಲು ಮಾಡಿ ಜಾಕ್ವೆಲಿನ್‌ ಅವರನ್ನು ಸಂಪರ್ಕಿಸಿದ್ದಾನೆ. ನಂತರ ಆಕೆಯ ಸ್ನೇಹ ಬೆಳೆಸಿದ್ದಾನೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತಂತೆ ಜಾಕ್ವೆಲಿನ್ ಅವರ ಹೇಳಿಕೆಯನ್ನೂ ಪಡೆದುಕೊಳ್ಳಲಾಗಿದೆ. ‘ನಾನು ನಿಮ್ಮ ದೊಡ್ಡ ಅಭಿಮಾನಿ, ದಕ್ಷಿಣದ ಚಲನಚಿತ್ರೋದ್ಯಮದಲ್ಲಿ ಸಿನಿಮಾ ಮಾಡಬೇಕು. ಸನ್ ಟಿವಿಯಾಗಿ ನಾನು ಅನೇಕ ಯೋಜನೆಗಳನ್ನು ಹೊಂದಿದ್ದೇನೆ. ನಾನು ಜಯಲಲಿತಾ ಕುಟುಂಬಸ್ಥ, ಚೆನ್ನೈನಲ್ಲಿ ವಾಸವಾಗಿದ್ದೇನೆ’ ಎಂದು ಈತ ಜಾಕ್ವೆಲಿನ್‌ಗೆ ಹೇಳಿದ್ದಾನೆ. ನಂತರ ಆಕೆಯ ಮೇಕಪ್ ಆರ್ಟಿಸ್ಟ್‌ಗೆ ಗೃಹ ಸಚಿವ ಅಮಿತ್ ಷಾ ಅವರ ಕಚೇರಿಯಿಂದ ಕರೆ ಬಂದಂತೆ ಕರೆ ಮಾಡಿದ್ದಾನೆ. ಆ ಮೂಲಕ ಸುಕೇಶ್ ಸರ್ಕಾರದಲ್ಲಿ ಅತ್ಯಂತ ಪ್ರಮುಖ ವ್ಯಕ್ತಿಯಾಗಿದ್ದಾನೆ ಎಂದು ಜಾಕ್ವೆಲಿನ್‌ ತಿಳಿದುಕೊಂಡು ಮೋಸ ಹೋಗಿದ್ದಾರೆ ಎಂದು ಅದರಲ್ಲಿ ಉಲ್ಲೇಖಿಸಲಾಗಿದೆ.
ಸುಕೇಶ್‌ ಚಂದ್ರಶೇಖರ್ ರೋಹಿಣಿ ಜೈಲಿನಲ್ಲಿದ್ದಾಗ, ಫೋನ್ ವಂಚನೆ ತಂತ್ರಜ್ಞಾನವನ್ನು ಬಳಸಿಕೊಂಡು ಸುಲಿಗೆ ದಂಧೆಯನ್ನು ನಡೆಸುತ್ತಿದ್ದ. ಈತ ವಂಚನೆಯ ಮಾಸ್ಟರ್‌ಮೈಂಡ್. 17 ನೇ ವಯಸ್ಸಿನಿಂದಲೂ ಅಪರಾಧ ಜಗತ್ತಿನ ಭಾಗವಾಗಿದ್ದಾರೆ. ಅವರ ವಿರುದ್ಧ ಅನೇಕ ಎಫ್‌ಐಆರ್‌ಗಳಿವೆ ಎಂದು ಇಡಿ ಅಧಿಕಾರಿಗಳು ಹೇಳಿದ್ದಾರೆ. ಜೈಲಿನಲ್ಲಿ ಇರುವಾಗಲೂ ತಂತ್ರಜ್ಞಾನದ ಸಹಾಯದಿಂದ ಜನರನ್ನು ವಂಚಿಸುತ್ತಿದ್ದ. ಕರೆ ಮಾಡಿದ ಫೋನ್ ಸಂಖ್ಯೆಯ ಹಿರಿಯ ಸರ್ಕಾರಿ ಅಧಿಕಾರಿಗಳಿಗೆ ಸೇರಿದ್ದು ಎಂಬಂತೆ ಕರೆ ಮಾಡಿದವರಿಗೆ ನಂಬರ್‌ ಡಿಸ್​​ಪ್ಲೇ ಆಗುತ್ತಿತ್ತು. ಇದರಿಂದ ಎಲ್ಲರೂ ಮೋಸ ಹೋಗುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.(ಏಜೆನ್ಸೀಸ್​)
ರಾ ರಾ ರಕ್ಕಮ್ಮ… ಬೆಡಗಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ: 38ಕ್ಕೆ ಕಾಲಿಟ್ಟರೂ ಬ್ಯೂಟಿ ಸೀಕ್ರೆಟ್​ ಇಲ್ಲಿದೆ…

ವೈಜಯಂತಿ ಮಾಲಾ@86: ಮೊದಲ ಬಾರಿಗೆ ಬಿಕಿನಿ ಧರಿಸಿ ಸಿನಿ ಜಗತ್ತಲ್ಲಿ ಹಂಗಾಮಾ ಸೃಷ್ಟಿಸಿದ್ದ ನಟಿ ಬಿಚ್ಚಿಟ್ಟ ಅನುಭವದ ಬುತ್ತಿ…

PHOTOS: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ನಟಿ ತಾರಾ ವಿಶೇಷ ಫೋಟೋ ಶೂಟ್‌

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:one × five =
Remember me
