ಚೆನ್ನೈ:ತಮಿಳು ಚಿತ್ರರಂಗದಲ್ಲಿ ನಟಿ, ನಿರೂಪಕಿಯಾಗಿ ಖ್ಯಾತಿ ಪಡೆದಿರುವ ಮಹಾಲಕ್ಷ್ಮೀ ಮತ್ತು ಖ್ಯಾತ ನಿರ್ಮಾಪಕ ರವೀಂದರ್‌ ಚಂದ್ರಶೇಖರನ್‌ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಿರುಪತಿಯಲ್ಲಿ ಈ ಮದುವೆ ಕಾರ್ಯ ನಡೆದಿದೆ.
ಇಬ್ಬರಿಗೂ ಇದು ಎರಡನೇ ಮದುವೆಯಾಗಿದೆ. ‘ನನ್ನ ಜೀವನದಲ್ಲಿ ನಿಮ್ಮನ್ನು ಪಡೆದುಕೊಳ್ಳಲು ನಾನು ತುಂಬಾ ಅದೃಷ್ಟ ಮಾಡಿದ್ದೆ. ನನ್ನ ಜೀವನದಲ್ಲಿ ನೀವು ಪ್ರೀತಿ ತುಂಬಿದ್ದೀರಿ. ಲವ್​ ಯೂ’ ಎಂದು ಮಹಾಲಕ್ಷ್ಮೀ ಬರೆದುಕೊಂಡಿದ್ದಾರೆ. ಈ ಫೋಟೋ ಸಾಕಷ್ಟು ವೈರಲ್ ಆಗುತ್ತಿದೆ.
ಮಹಾಲಕ್ಷ್ಮೀ ಅವರು ಕಿರುತೆರೆ ಕ್ಷೇತ್ರದಲ್ಲಿ ಹೆಸರು ಮಾಡಿದ್ದಾರೆ. ವಾಣಿ ರಾಣಿ, ಆಫೀಸ್‌, ಚೆಲ್ಲಮೇ, ಉಥಿರಿಪೂಕ್ಕಳ್, ಒರು ಕೈ ಒಸೈ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ಇವರು ನಟಿಸಿದ್ದಾರೆ. ಪ್ರಸ್ತುತ ಅವರು ನಟಿಸಿರುವ ಮಹಾರಸಿ ಎಂಬ ಧಾರಾವಾಹಿ ಪ್ರಸಾರವಾಗುತ್ತಿದೆ. ರವೀಂದರ್‌ ಚಂದ್ರಶೇಖರನ್‌ ಅವರು ‘ನಟ್ಪುನ ಎನ್ನಡು ಥೆರಿಯುಮ’, ‘ಮುರುಂಗೈಕೈ ಚಿಪ್ಸ್’, ‘ವಿಡಿಯುಮ್‌ ವಾರೈ ಕಾಥಿರು’ ಮುಂತಾದ ಸಿನಿಮಾಗಳನ್ನು ತಮ್ಮ ಲಿಬ್ರಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.
ರವೀಂದರ್ ನಿರ್ಮಾಣದ ‘ವಿಡಿಯುಮ್‌ ವಾರೈ ಕಾಥಿರು’ ಸಿನಿಮಾದಲ್ಲೂ ಮಹಾಲಕ್ಷ್ಮೀ ಅಭಿನಯಿಸಿದ್ದರು. ಆ ಚಿತ್ರದಲ್ಲಿ ವಿದಾರ್ಥ್‌ ಮತ್ತು ವಿಕ್ರಾಂತ್ ಪ್ರಮುಖ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಲಾಗಿದೆ. ಈ ಮದುವೆಗೆ ಚಿತ್ರರಂಗದವರು ಹಾಗೂ ಅಭಿಮಾನಿಗಳು ಶುಭ ಹಾರೈಸಿದ್ದಾರೆ. (ಏಜೆನ್ಸೀಸ್​)

VIDEO: ಏಷ್ಯಾಕಪ್​ ಮೈದಾನದಲ್ಲಿ ರೊಮಾನ್ಸ್​- ಪಂದ್ಯ ಸೋತರೂ ಗೆಳತಿ ಹೃದಯ ಕದ್ದ ಹಾಂಗ್​ಕಾಂಗ್​ ಆಟಗಾರ

ಮಂಗಳೂರಿನಲ್ಲಿಂದು ‘ನಮೋ’ ಹವಾ: ಪ್ರಧಾನಿ ಮೋದಿಯವರ ಕಾರ್ಯಕ್ರಮದ ಸಂಪೂರ್ಣ ವಿವರ ಹೀಗಿದೆ….

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + twelve =
Remember me
