ತಿರುವನಂತಪುರಂ​:ದುಬೈನಿಂದ 191 ಪ್ರಯಾಣಿಕರನ್ನು ಹೊತ್ತು ಕೇರಳ ತಲುಪಿದ ಏರ್​ ಇಂಡಿಯಾ ವಿಮಾನ ಕರೀಪುರದಲ್ಲಿರುವ ಕೋಳಿಕ್ಕೊಡ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕ್ರ್ಯಾಶ್ ಲ್ಯಾಂಡಿಂಗ್ ಆದ ಪರಿಣಾಮ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿದೆ.
ಪೈಲೆಟ್‌ ಸೇರಿದಂತೆ 14 ಮಂದಿ ಮೃತಪಟ್ಟಿರುವುದಾಗಿ ಮಲಪ್ಪುರಂ ಎಸ್‌ಪಿ ಮಾಹಿತಿ ನೀಡಿದ್ದಾರೆ. 123 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 15 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ವಿಮಾನದಲ್ಲಿ ಇಬ್ಬರು ಪೈಲೆಟ್‌ಗಳು ಇದ್ದು, ಇಬ್ಬರ ಜೀವಕ್ಕೂ ಹಾನಿಯಾಗಿದೆಯೇ ಇಲ್ಲವೇ ಎಂಬ ಬಗ್ಗೆ ಈಗಲೇ ಹೇಳುವುದು ಕಷ್ಟ ಎಂದು ಎಸ್‌ಪಿ ಹೇಳಿದ್ದಾರೆ.
ನಡೆದದ್ದು ಏನು?ಕೇರಳದಲ್ಲಿ ವಿಮಾನ ಕ್ರ್ಯಾಶ್ ಲ್ಯಾಂಡಿಂಗ್: ಪೈಲಟ್ ಸೇರಿ 11ಕ್ಕೇರಿದ ಸಾವಿನ ಸಂಖ್ಯೆ
ರಾಷ್ಟ್ರಪತಿ, ಪ್ರಧಾನಿ ಸಂತಾಪ:ಘಟನೆಗೆ ರಾಷ್ಟ್ರಪತಿ ರಾಮ್‌ನಾಥ್‌ ಕೋವಿಂದ್‌ ಹಾಗೂ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಗಾಯಗೊಂಡಿರುವವರು ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಮೃತಪಟ್ಟಿರುವವರ ಕುಟುಂಬ ವರ್ಗಕ್ಕೆ ಸಾವಿನ ದುಃಖವನ್ನು ಸಹಿಸಿಕೊಳ್ಳುವ ಶಕ್ತಿ ಬರಲಿ ಎಂದು ಪ್ರಾರ್ಥಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರ ಜತೆ ಮಾತುಕತೆ ನಡೆಸಿರುವುದಾಗಿ ಹೇಳಿದ್ದಾರೆ.
Deeply distressed to hear about the tragic plane crash of Air India Express flight at Kozhikode, Kerala. Spoke to@KeralaGovernorShri Arif Mohammed Khan and inquired about the situation. Thoughts and prayers with affected passengers, crew members and their families.
— President of India (@rashtrapatibhvn)August 7, 2020

Pained by the plane accident in Kozhikode. My thoughts are with those who lost their loved ones. May the injured recover at the earliest. Spoke to Kerala CM @vijayanpinarayi Ji regarding the situation. Authorities are at the spot, providing all assistance to the affected.
— Narendra Modi (@narendramodi)August 7, 2020

ತಾಯ್ನೆಲ ಸ್ಪರ್ಶಿಸಲು ಹಾತೊರೆದವರಿಗೆ ಕಾಡಿತ್ತು ದುಃಸ್ವಪ್ನ; ‘ವಂದೇ ಭಾರತ’ ವಿಮಾನವದು; ಟೇಬಲ್​ ಟಾಪ್​ ನಿಲ್ದಾಣದಲ್ಲಿ ಮತ್ತೊಂದು ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + seventeen =
Remember me
