ಇಸ್ಲಾಮಾಬಾದ್:ಪಾಕಿಸ್ತಾನದ ದುಷ್ಕರ್ಮಿಗಳು ಆಫ್ಘಾನಿಸ್ತಾನ ರಾಯಭಾರಿ ಮಗಳನ್ನು ಅಪಹರಿಸಿ ಚಿತ್ರಹಿಂಸೆ ನೀಡಿದ್ದ ವಿವಾದ ಇದೀಗ ಮಹತ್ವದ ತಿರುವನ್ನು ಪಡೆದುಕೊಂಡಿದೆ. ಈ ಘಟನೆಯ ನಂತರ ಪಾಕಿಸ್ತಾನ ಜಾಗತಿಕವಾಗಿ ತೀವ್ರ ಮುಖಭಂಗ ಅನುಭವಿಸುವಂತಾಗಿದ್ದು, ತಲೆತಗ್ಗಿಸುವಂತಾಗಿದೆ.
ಜುಲೈ 16ರಂದು ಅಫ್ಘಾನಿಸ್ತಾನದ ರಾಯಭಾರಿಯ ಮಗಳಾದ ಸಿಲ್‌ಸಿಲಾ ಅಲಿಖಿಲ್ ಅವರನ್ನು ಅಪಹರಣ ಮಾಡಲಾಗಿತ್ತು. ಅವರು ತಮ್ಮ ಮನೆಗೆ ತೆರಳುತ್ತಿದ್ದ ಮಾರ್ಗಮಧ್ಯೆ ಅಪರಿಚಿತರು ಅವರನ್ನು ಕಿಡ್​ನ್ಯಾಪ್​ ಮಾಡಿ ಚಿತ್ರಹಿಂಸೆ ನೀಡಿದ್ದರು. ಅಪಹರಣಕಾರರಿಂದ ಬಿಡುಗಡೆ ಹೊಂದಿದ ಬಳಿಕ ಸಿಲ್‌ಸಿಲಾ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಅಪಹರಣದಿಂದ ತೀವ್ರ ಕೆಂಡಾಮಂಡಲವಾಗಿರುವ ಅಫ್ಘಾನಿಸ್ತಾನ, ಪಾಕಿಸ್ತಾನದಲ್ಲಿರುವ ತನ್ನ ರಾಯಭಾರಿ ಮತ್ತು ಹಿರಿಯ ಅಧಿಕಾರಿಗಳನ್ನು ವಾಪಸ್ ಕರೆಸಿಕೊಂಡಿದೆ. ಎಲ್ಲಾ ಭದ್ರತಾ ಬೆದರಿಕೆಗಳನ್ನು ಪರಿಹರಿಸುವವರೆಗೆ ಆಫ್ಘಾನಿಸ್ತಾನದ ರಾಯಭಾರಿ ಮತ್ತು ಪಾಕಿಸ್ತಾನದ ಹಿರಿಯ ರಾಜತಾಂತ್ರಿಕರನ್ನು ಆಫ್ಘನ್ ಸರ್ಕಾರ ವಾಪಸ್ ಕರೆಸಿಕೊಳ್ಳಲಾಗುವುದು ಎಂದು ಸರ್ಕಾರ ಹೇಳಿದೆ.
ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಎದುರಾಗಿದೆ. ಪಾಕಿಸ್ತಾನಕ್ಕೆ ಅಫ್ಘನ್ ನಿಯೋಗವು ಶೀಘ್ರದಲ್ಲೇ ಭೇಟಿ ನೀಡಲಿದ್ದು, ಈ ಪ್ರಕರಣ ಮತ್ತು ಎಲ್ಲಾ ಸಂಬಂಧಿತ ಸಮಸ್ಯೆಗಳ ಚರ್ಚೆಗೆ ಕ್ರಮ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.
ರಾತ್ರಿ ಓಡಾಡುವವರು ವೇಶ್ಯೆಯರು, ರೇಪ್​ಗೆ​ ಅರ್ಹರು ಎಂದು ಭೀಕರ ಕೊಲೆ ಸಮರ್ಥಿಸಿಕೊಂಡ ಪಾದ್ರಿ!

ಬೆಳಗಾವಿ ವಿವಾಹಿತೆಯ ಜೀವ ತೆಗೆಯಿತು ಯುವಕನ ಆ ಒಂದು ವಾಟ್ಸ್​ಆ್ಯಪ್​ ಸ್ಟೇಟಸ್​!

ಬೆಳಗಾವಿ ವಿವಾಹಿತೆಯ ಜೀವ ತೆಗೆಯಿತು ಯುವಕನ ಆ ಒಂದು ವಾಟ್ಸ್​ಆ್ಯಪ್​ ಸ್ಟೇಟಸ್​!

ಚಿತ್ರಮಂದಿರ ಓಪನ್​ ಆದ ಖುಷಿಯಲ್ಲಿದ್ದ ಸಿನಿಪ್ರೇಮಿಗಳಿಗೊಂದು ಕಹಿ ಸುದ್ದಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − thirteen =
Remember me
