ನವದೆಹಲಿ:ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾನೂನನ್ನು ವಿರೋಧಿಸಿ ಇದಾಗಲೇ ಭಾರಿ ಪ್ರತಿಭಟನೆ ನಡೆಯುತ್ತಿದೆ. ಸಹಸ್ರಾರು ಸಂಖ್ಯೆಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇದು ಉಗ್ರ ಸ್ವರೂಪ ತಾಳಿದೆ.
ಈ ನಡುವೆಯೇ, ಕೇಂದ್ರದ ಮಾಜಿ ಸಚಿವ, ಮೂರು ಬಾರಿ ಪಂಜಾಬ್​ ಮುಖ್ಯಮಂತ್ರಿಯಾಗಿದ್ದ ಹಾಗೂ ಅಕಾಲಿ ದಳದ ಪ್ರಮುಖ ಪ್ರಕಾಶ್ ಸಿಂಗ್ ಬಾದಲ್ ಹಾಗೂ ರಾಜ್ಯಸಭೆಯ ಬಂಡಾಯ ಸದಸ್ಯ ಸುಖದೇವ್​ ಸಿಂಗ್​ ಧಿಂಡ್ಸಾ ಅವರು ಪದ್ಮವಿಭೂಷಣ ಪ್ರಶಸ್ತಿಯನ್ನು ವಾಪಸ್ ನೀಡಿದ್ದಾರೆ. ‘ಭಾರತ ಸರ್ಕಾರ ರೈತರಿಗೆ ದ್ರೋಹ ಬಗೆದಿದೆ’ ಎಂದು ಹೇಳಿರುವ ಈ ಇಬ್ಬರೂ ಪ್ರಶಸ್ತಿ ಪುರಸ್ಕೃತರು ಇಂಥ ಗೌರವ ನಮಗೆ ಬೇಡ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಶಾಲೆಯಲ್ಲಿ ‘ಭೂತ’- ಬಡಿದುಕೊಳ್ಳುತ್ತಲೇ ಇದ್ದ ಬಾಗಿಲು: ಲಾಕ್​ ತೆಗೆದಾಗ ಏನಾಯ್ತು? ನೀವೇ ನೋಡಿ…
ಈ ಕುರಿತು ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರಿಗೆ ಪತ್ರ ಬರೆದಿರುವ ಪ್ರಕಾಶ್​ ಸಿಂಗ್​ ಬಾದಲ್​ ಅವರು, ಶಾಂತಿಯುತವಾಗಿ ರೈತರು ಪ್ರತಿಭಟನೆ ನಡೆಸಲು ಕೇಂದ್ರ ಸರ್ಕಾರ ಅವಕಾಶ ನೀಡದೇ ಇರುವುದು ನನಗೆ ಆಘಾತವಾಗಿದೆ. ರೈತರನ್ನು ತಿರಸ್ಕಾರದಿಂದ ಕಾಣಲಾಗುತ್ತಿದೆ. ಆದ್ದರಿಂದ ನಾನು ಪ್ರಶಸ್ತಿಯನ್ನು ವಾಪಸ್​ ಮಾಡುತ್ತಿರುವುದಾಗಿ ಅವರು ಹೇಳಿದ್ದಾರೆ.
ಧಿಂಡ್ಸಾ ಅವರಿಗೆ ಕಳೆದ ವರ್ಷ ರಾಷ್ಟ್ರಪತಿಗಳು ಈ ಪ್ರಶಸ್ತಿ ನೀಡಿದ್ದರು. ಅವರು ಕೂಡ ಕೇಂದ್ರದ ವಿರುದ್ಧ ಸಿಡಿದೆದ್ದಿದ್ದಾರೆ. ಬಿಜೆಪಿ ನೇತೃತ್ವದ ಸರಕಾರ ತಂದಿರುವ ಕೃಷಿ ಮಾರುಕಟ್ಟೆ ಕುರಿತ ಕಾನೂನುಗಳು ಈಗಾಗಲೇ ರೈತರಿಗೆ ಮಾರಕವಾಗಿವೆ ಎಂದು ಅವರು ಹೇಳಿದ್ದಾರೆ.ಇವರ ನಡೆಯನ್ನು ಕಾಂಗ್ರೆಸ್​ ಶ್ಲಾಘಿಸಿದ್ದು, ಒಳ್ಳೆಯ ನಿರ್ಧಾರ ಎಂದಿದೆ.
‘2023ರಲ್ಲಿ ಕುಮಾರಸ್ವಾಮಿಯೇ ಸಿಎಂ- ಇದು ನಾನು ಹೇಳ್ತೀರೋ ಭವಿಷ್ಯ’

ಕ್ಲಾಸ್​ರೂಂ ಒಳಗೇ ಗೆಳತಿಯ ಮದ್ವೆಯಾದ ಹೈಸ್ಕೂಲ್​​ ವಿದ್ಯಾರ್ಥಿ! ಮುಂದೇನಾಯ್ತು ನೋಡಿ…

ಮದ್ವೆ ಯಾವಾಗ ಆಗುತ್ತೆ ಗುರೂಜಿ? ಹುಡುಗನಿಗೆ ಸರ್ಕಾರಿ ಕೆಲ್ಸ ಇರತ್ತಾ? ಹುಡುಗಿ ಸ್ಮಾರ್ಟ್​ ಇರ್ತಾಳಾ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 − 3 =
Remember me
