ನವದೆಹಲಿ:ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಸೋನಿಯಾ ಗಾಂಧಿ ಆಪ್ತ ಅಹಮ್ಮದ್​ ಪಟೇಲ್​ ಅವರ ಸ್ಥಿತಿ ಗಂಭೀರವಾಗಿದೆ. ಕಳೆದೊಂದು ತಿಂಗಳಿನಿಂದ ಕರೊನಾ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಇದೀಗ ಪರಿಸ್ಥಿತಿ ಗಂಭೀರವಾಗಿರುವುದಾಗಿ ವರದಿ ಬಂದಿದೆ.
ಪಟೇಲ್​ ಅವರನ್ನು ಸದ್ಯ ಗುರುಗ್ರಾಮದ ಮೇದೆಂಟಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇರಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಆದರೆ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಅವರ ಮಗ ಫೈಸೆಲ್​ ಟ್ವೀಟ್​ ಮಾಡುವ ಮೂಲಕ ತಂದೆಯವರ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಅವರು ಶೀಘ್ರವಾಗಿ ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸಿ ಎಂದು ಕೇಳಿಕೊಂಡಿದ್ದಾರೆ.
ಇದನ್ನೂ ಓದಿ:ಕರೊನಾಕ್ಕೆ ಬಲಿಯಾದ ಫಾಲ್ಕೆ ಪ್ರಶಸ್ತಿ ಪುರಸ್ಕೃತ ನಟ ಸೌಮಿತ್ರ ಚಟರ್ಜಿ
71 ವರ್ಷ ವಯಸ್ಸಿನ ಅಹ್ಮದ್ ಪಟೇಲ್​ಗೆ ಅಕ್ಟೋಬರ್ 1ರಂದು ಕರೊನಾ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಅವರನ್ನು ತೀವ್ರ ನಿಗಾ ಘಟಕಕ್ಕೆ ಶಿಫ್ಟ್​ ಮಾಡಲಾಗಿದೆ.
ಇನ್ನೊಂದೆಡೆ, ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್​ ಅವರಿಗೂ ಕರೊನಾ ಸೋಂಕು ದೃಢಪಟ್ಟಿದೆ. ಟ್ವೀಟ್​ ಮಾಡುವ ಮೂಲಕ ಅವರು ಈ ವಿಚಾರವನ್ನು ತಿಳಿಸಿದ್ದಾರೆ. ತಮಗೆ ಕರೊನಾ ಪಾಸಿಟಿವ್​ ಬಂದಿದ್ದು ತಮ್ಮ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವಿಟರ್​ನಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಪ್ಲೀಸ್​​ ಬಟ್ಟೆ ಕೊಡಿಸಿ… ಸ್ವೀಟ್​ ಆದ್ರೂ ತರ್ಸಿಯಪ್ಪ… ಹೋಗ್ಲಿ ಬಿಡಿ… ಈ ಗ್ರೀಟಿಂಗ್ಸ್​ ಆದ್ರೂ ತಗೋಳಿ!

ಅಮೆರಿಕದ 231 ವರ್ಷಗಳಲ್ಲೇ ಹೊಸ ದಾಖಲೆ ಬರೆದ ಜಿಲ್ ಬೈಡೆನ್​

ಐದು ಸಲ ಶಾಸಕನಾದ್ರೂ ಎಂಥ ಬಡತನ, ಎಷ್ಟು ಸರಳತನ ಎಂದವರಿಗೆ ಕಾದಿತ್ತು ಶಾಕ್​!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seven + 8 =
Remember me
