ಲಖನೌ:ಈಚೆಗೆ ನಡೆದಿದ್ದ ಲೋಕಸಭಾ ಉಪಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಭದ್ರಕೋಟೆಗಳಾಗಿದ್ದ ಉತ್ತರ ಪ್ರದೇಶದ ರಾಂಪುರ ಮತ್ತು ಅಜಂಗಢದಲ್ಲಿ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ನಗೆ ಬೀರುತ್ತಿದ್ದಂತೆಯೇ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತತ್ತರಿಸಿಹೋಗಿದ್ದಾರೆ.
ಈ ಹಿನ್ನೆಲೆಯಲ್ಲಿ ಪಕ್ಷದ ಎಲ್ಲಾ ಯುವ ಹಾಗೂ ಮಹಿಳಾ ವಿಭಾಗ ಸೇರಿದಂತೆ ಎಲ್ಲ ಘಟಕಗಳ ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಕಾರ್ಯಕಾರಿ ಸಂಘಗಳನ್ನು ವಿಸರ್ಜಿಸಿದ್ದಾರೆ.
ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಪಕ್ಷದ ರಾಜ್ಯಾಧ್ಯಕ್ಷರನ್ನು ಹೊರತುಪಡಿಸಿ, ಪಕ್ಷದ ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಕಾರ್ಯಕಾರಿ ಘಟಕಗಳನ್ನು ವಿಸರ್ಜಿಸಿದ್ದಾರೆ ಎಂದು ಟ್ವಿಟರ್​ನಲ್ಲಿ ತಿಳಿಸಲಾಗಿದೆ. ಈ ನಿರ್ಧಾರಕ್ಕೆ ಅಧಿಕೃತ ಕಾರಣಗಳನ್ನು ಅವರು ನೀಡಲಿಲ್ಲ. ಆದರೆ ಉಪ ಚುನಾವಣೆಯ ಸೋಲಿನಿಂದಲೇ ಈ ರೀತಿ ಮಾಡಿರುವುದಾಗಿ ರಾಜಕೀಯ ವಲಯಗಳಲ್ಲಿ ಕೇಳಿಬರುತ್ತಿದೆ. ಸೋಲಿನ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷವನ್ನು ಸಂಪೂರ್ಣ ಪುನರುಜ್ಜೀವನಗೊಳಿಸುವ ಪ್ರಯತ್ನ ಇದು ಎಂದು ಹೇಳಲಾಗಿದೆ.
2024ರ ಲೋಕಸಭೆ ಚುನಾವಣೆಗೆ ಸಮಾಜವಾದಿ ಪಕ್ಷವು ಸಜ್ಜಾಗುತ್ತಿದ್ದು, ಬಿಜೆಪಿಯನ್ನು ಸಂಪೂರ್ಣ ಬಲದಿಂದ ಎದುರಿಸಲು ಸಂಘಟನೆಯನ್ನು ಬಲಪಡಿಸುವತ್ತ ಗಮನ ಹರಿಸಲಾಗಿದೆ ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.
समाजवादी पार्टी के राष्ट्रीय अध्यक्ष श्री अखिलेश यादव जी ने तत्काल प्रभाव से सपा उ.प्र. के अध्यक्ष को छोड़कर पार्टी के सभी युवा संगठनों, महिला सभा एवं अन्य सभी प्रकोष्ठों के राष्ट्रीय अध्यक्ष, प्रदेश अध्यक्ष,जिला अध्यक्ष सहित राष्ट्रीय,राज्य, जिला कार्यकारिणी को भंग कर दिया है।
— Samajwadi Party (@samajwadiparty)July 3, 2022

ತೊಡೆ ಸವರಿದ… ಚುಂಬಿಸಿದ… ಎಂದು ಹೇಳಿಕೊಂಡಿದ್ದ ನಟಿ ಕುಬ್ರಾ ಬಿಚ್ಚಿಟ್ಟಿದ್ದಾರೆ ಗರ್ಭವತಿಯಾದ ಕರಾಳ ಕಥೆ…

ಪಿಎಸ್​ಐ ಪರೀಕ್ಷೆ ಗೋಲ್​ಮಾಲ್​: ತಲೆಮರೆಸಿಕೊಂಡು ಓಡಾಡುತ್ತಿದ್ದ ಪ್ರಮುಖ ಆರೋಪಿ ಅರೆಸ್ಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
