ಲಖನೌ:ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಕರ್ಹಾಲ್‌ ಕ್ಷೇತ್ರದಿಂದ ಭರ್ಜರಿ ಗೆಲುವು ಸಾಧಿಸಿರುವ ಸಂಸದ ಅಖಿಲೇಶ್‌ ಯಾದವ್‌ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಉತ್ತರ ಪ್ರದೇಶದ ಅಜಂಗಢದ ಕ್ಷೇತ್ರದಿಂದ ಗೆದ್ದು ಸಂಸದರಾಗಿದ್ದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಶಾಸಕರಾಗಿ ಮುಂದುವರೆಯಲು ನಿರ್ಧರಿಸಿದ್ದಾರೆ.
ಅಖಿಲೇಶ್ ಯಾದವ್ ಇದಕ್ಕೂ ಮೊದಲು ಯಾವುದೇ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಅವರು ಹಿಂದಿನ ಅವಧಿಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿಯೂ ವಿಧಾನ ಪರಿಷತ್ತಿನ ಸದಸ್ಯರಾಗಿದ್ದರು. ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರು ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಖಿಲೇಶ್‌ 1,48,196 ಮತಗಳನ್ನು ಗಳಿಸಿದ್ದರೆ, ಅವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಅಭ್ಯರ್ಥಿ ಎಸ್‌ಪಿ ಸಿಂಗ್ ಬಘೇಲ್ 80,692 ಮತಗಳನ್ನು ಪಡೆದಿದ್ದರು.
ಸ್ಪೀಕರ್ ಓಂ ಬಿರ್ಲಾ ಅವರ ಕಚೇರಿಗೆ ಭೇಟಿ ನೀಡಿದ ಅಖಿಲೇಶ್ ಯಾದವ್ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಅಖಿಲೇಶ್‌ ಯಾದವ್‌ ಅವರ ಈ ನಡೆದ ಮುಂಬರುವ ಅಂದರೆ 2027ರ ಉತ್ತರ ಪ್ರದೇಶದ ಚುನಾವಣೆ ಮೇಲೆ ಕಣ್ಣಿಟ್ಟಿರುವಂತೆ ಕಾಣಿಸುತ್ತಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.
ಉತ್ತರ ಪ್ರದೇಶದ 403 ಸ್ಥಾನಗಳ ಪೈಕಿ ಸಮಾಜವಾದಿ ಪಕ್ಷ 111 ಸ್ಥಾನಗಳನ್ನು ಪಡೆದು ಎರಡನೇ ಸ್ಥಾನವನ್ನು ಗಳಿಸಿತು. ಅಂದಹಾಗೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ನೇರಾನೇರ ಎದುರಾಳಿಯಾಗಿದ್ದು ಅಖಿಲೇಶ್‌ ಯಾದವ್‌ ಅವರ ಸಮಾಜವಾದಿ ಪಕ್ಷ. ಉತ್ತರ ಪ್ರದೇಶದ 403 ಸ್ಥಾನಗಳ ಪೈಕಿ ಸಮಾಜವಾದಿ ಪಕ್ಷ 111 ಸ್ಥಾನಗಳನ್ನು ಪಡೆದು ಎರಡನೇ ಸ್ಥಾನವನ್ನು ಗಳಿಸಿತು. ಬಿಜೆಪಿ 255 ಸ್ಥಾನಗಳನ್ನು ಗಳಿಸಿ ಮತ್ತೆ ಸರ್ಕಾರ ರಚಿಸಲು ಸಜ್ಜಾಗಿದೆ. ಮಿತ್ರಪಕ್ಷಗಳೊಂದಿಗೆ ಬಿಜೆಪಿ 273 ಸ್ಥಾನಗಳನ್ನು ಗೆದ್ದಿದೆ.
#WATCH| Delhi: Samajwadi Party (SP) chief Akhilesh Yadav going to Lok Sabha Speaker Om Birla's office to resign from his membership of the House.In the recently held Uttar Pradesh elections, he was elected as an MLA from the Karhal seat.pic.twitter.com/IBjc4jqr8t— ANI (@ANI)March 22, 2022
#WATCH| Delhi: Samajwadi Party (SP) chief Akhilesh Yadav going to Lok Sabha Speaker Om Birla's office to resign from his membership of the House.In the recently held Uttar Pradesh elections, he was elected as an MLA from the Karhal seat.pic.twitter.com/IBjc4jqr8t
ಪಂಡಿತರ ಹತ್ಯೆಗೆ ನಾನೇ ಹೊಣೆಯಾಗಿದ್ದರೆ ಯಾವ ಮೂಲೆಗಾದರೂ ಹೋಗಿ ಗಲ್ಲಿಗೇರಿಸಿ- ಫಾರೂಕ್‌ ಅಬ್ದುಲ್ಲಾ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
