ಮುಂಬೈ:ಅಕ್ರಮ ಆಸ್ತಿ ವರ್ಗಾವಣೆ, 200 ಕೋಟಿ ರೂ. ಸುಲಿಗೆ ಪ್ರಕರಣ ಸೇರಿದಂತೆ ಹಲವಾರು ವಂಚನೆ ಪ್ರಕರಣದಲ್ಲಿ ಸಿಲುಕಿರುವ ಸುಕೇಶ್ ಚಂದ್ರಶೇಖರ್ ಎಂಬಾತನಿಂದ ಕಿಸ್‌ ಪಡೆದು ಭಾರಿ ವಿವಾದದಲ್ಲಿ ಸಿಲುಕಿ, ಜಾರಿ ನಿರ್ದೇಶನಾಲಯದಿಂದ ವಿಚಾರಣೆ ಎದುರಿಸುತ್ತಿರುವ ಬಾಲಿವುಡ್‌ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಕುರಿತಂತೆ ಇದೀಗ ಕೋರ್ಟ್‌ ಮುಂದೆ ಅಧಿಕಾರಿಗಳು ಇನ್ನಿಷ್ಟು ಕುತೂಹಲದ ಮಾಹಿತಿಯನ್ನು ಬಿಚ್ಚಿಟ್ಟದ್ದಾರೆ.
ಸುಕೇಶ್‌ ಜತೆ ಜಾಕ್ವೆಲಿನ್‌ ಡೇಟಿಂಗ್‌ ಮಾಡುತ್ತಿರುವುದಾಗಿ ಆರೋಪ ಕೇಳಿಬಂದಿತ್ತು. ಇದಕ್ಕೆ ಪುಷ್ಟಿ ನೀಡಲು ಎಂಬಂತೆ ಇಬ್ಬರೂ ಕಿಸ್‌ ಮಾಡುತ್ತಿರುವ ಫೋಟೋ ವೈರಲ್‌ ಆಗಿ ನಟಿ ಕೂಡ ಈಗ ವಿಚಾರಣೆ ಎದುರಿಸುವಂತಾಗಿದೆ. ಇದರ ಆಳಕ್ಕೆ ಹೋಗಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಈ ಸುಕೇಶ್‌ ಕುರಿತಂತೆ ಇನ್ನಷ್ಟು ಮಾಹಿತಿ ಸಿಕ್ಕಿದೆ. ಆತ ನಟಿಯನ್ನು ಹೇಗೆ ಬಲೆಗೆ ಬೀಳಿಸಿಕೊಂಡ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ.
ಜಯಲಲಿತಾರಿಂದ ಅಮಿತ್‌ ಷಾವರೆಗೆ…ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ಜೆ. ಜಯಲಲಿತಾ ಅವರ ಕುಟುಂಬದಿಂದ ತಾನು ಬಂದವನು ಎಂದು ಹೇಳಿಕೊಂಡಿದ್ದ ಈ ಸುಕೇಶ್‌ ಚಂದ್ರಶೇಖರ್‌ ಜಾಕ್ವೆಲಿನ್ ಜತೆ ಸ್ನೇಹ ಬೆಳೆಸಲು ಮುಂದಾಗಿದ್ದ. ತನ್ನ ಹೆಸರನ್ನು ಸುರೇಶ್‌ ಎಂದು ಹೇಳಿಕೊಂಡಿದ್ದ. ಜಾಕ್ವೆಲಿನ್‌ ಜತೆ ಸ್ನೇಹ ಬೆಳೆಸುವುದು ಸುಲಭದ ಮಾತಾಗಿರಲಿಲ್ಲ. ಆದ್ದರಿಂದ ಈತ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಕಚೇರಿ ಸಂಖ್ಯೆಯನ್ನು ನಕಲು ಮಾಡಿ ಜಾಕ್ವೆಲಿನ್‌ ಅವರನ್ನು ಸಂಪರ್ಕಿಸಿದ್ದಾನೆ. ನಂತರ ಆಕೆಯ ಸ್ನೇಹ ಬೆಳೆಸಿದ್ದಾನೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತಂತೆ ಜಾಕ್ವೆಲಿನ್ ಅವರ ಹೇಳಿಕೆಯನ್ನೂ ಪಡೆದುಕೊಳ್ಳಲಾಗಿದೆ. ‘ನಾನು ನಿಮ್ಮ ದೊಡ್ಡ ಅಭಿಮಾನಿ, ದಕ್ಷಿಣದ ಚಲನಚಿತ್ರೋದ್ಯಮದಲ್ಲಿ ಸಿನಿಮಾ ಮಾಡಬೇಕು. ಸನ್ ಟಿವಿಯಾಗಿ ನಾನು ಅನೇಕ ಯೋಜನೆಗಳನ್ನು ಹೊಂದಿದ್ದೇನೆ. ನಾನು ಜಯಲಲಿತಾ ಕುಟುಂಬಸ್ಥ, ಚೆನ್ನೈನಲ್ಲಿ ವಾಸವಾಗಿದ್ದೇನೆ’ ಎಂದು ಈತ ಜಾಕ್ವೆಲಿನ್‌ಗೆ ಹೇಳಿದ್ದಾನೆ. ನಂತರ ಆಕೆಯ ಮೇಕಪ್ ಆರ್ಟಿಸ್ಟ್‌ಗೆ ಗೃಹ ಸಚಿವ ಅಮಿತ್ ಷಾ ಅವರ ಕಚೇರಿಯಿಂದ ಕರೆ ಬಂದಂತೆ ಕರೆ ಮಾಡಿದ್ದಾನೆ. ಆ ಮೂಲಕ ಸುಕೇಶ್ ಸರ್ಕಾರದಲ್ಲಿ ಅತ್ಯಂತ ಪ್ರಮುಖ ವ್ಯಕ್ತಿಯಾಗಿದ್ದಾನೆ ಎಂದು ಜಾಕ್ವೆಲಿನ್‌ ತಿಳಿದುಕೊಂಡು ಮೋಸ ಹೋಗಿದ್ದಾರೆ ಎಂದು ಅದರಲ್ಲಿ ಉಲ್ಲೇಖಿಸಲಾಗಿದೆ.
ಸುಕೇಶ್‌ ಚಂದ್ರಶೇಖರ್ ರೋಹಿಣಿ ಜೈಲಿನಲ್ಲಿದ್ದಾಗ, ಫೋನ್ ವಂಚನೆ ತಂತ್ರಜ್ಞಾನವನ್ನು ಬಳಸಿಕೊಂಡು ಸುಲಿಗೆ ದಂಧೆಯನ್ನು ನಡೆಸುತ್ತಿದ್ದ. ಈತ ವಂಚನೆಯ ಮಾಸ್ಟರ್‌ಮೈಂಡ್. 17 ನೇ ವಯಸ್ಸಿನಿಂದಲೂ ಅಪರಾಧ ಜಗತ್ತಿನ ಭಾಗವಾಗಿದ್ದಾರೆ. ಅವರ ವಿರುದ್ಧ ಅನೇಕ ಎಫ್‌ಐಆರ್‌ಗಳಿವೆ ಎಂದು ಇಡಿ ಅಧಿಕಾರಿಗಳು ಹೇಳಿದ್ದಾರೆ. ಜೈಲಿನಲ್ಲಿ ಇರುವಾಗಲೂ ತಂತ್ರಜ್ಞಾನದ ಸಹಾಯದಿಂದ ಜನರನ್ನು ವಂಚಿಸುತ್ತಿದ್ದ. ಕರೆ ಮಾಡಿದ ಫೋನ್ ಸಂಖ್ಯೆಯ ಹಿರಿಯ ಸರ್ಕಾರಿ ಅಧಿಕಾರಿಗಳಿಗೆ ಸೇರಿದ್ದು ಎಂಬಂತೆ ಕರೆ ಮಾಡಿದವರಿಗೆ ನಂಬರ್‌ ಡಿಸ್​​ಪ್ಲೇ ಆಗುತ್ತಿತ್ತು. ಇದರಿಂದ ಎಲ್ಲರೂ ಮೋಸ ಹೋಗುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೇಡ ಬೇಡವೆಂದರೂ ಲೈಂಗಿಕ ಕ್ರಿಯೆಗೆ ಮುಂದಾದ ಪತಿಯ ಮರ್ಮಾಂಗ ಕತ್ತರಿಸಿದ ಪತ್ನಿ! ಆಸ್ಪತ್ರೆಗೆ ಪತಿಯ ದೌಡು

ಇದು ಅಪ್ರಾಪ್ತರ ಆನ್‌ಲೈನ್‌ ಲವ್‌ ಸ್ಟೋರಿ: ಲಿವ್‌ಇನ್‌ನಲ್ಲಿ ಇರಲು ಸ್ವೀಡನ್‌ನಿಂದ ಮುಂಬೈಗೆ ಹಾರಿದ ಬಾಲಕಿ! ಮುಂದೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 13 =
Remember me
