ನವದೆಹಲಿ :ಪೋಸ್ಟ್‌ ಕೋವಿಡ್‌ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರು ಗುಣಮುಖರಾಗಿದ್ದು ಇಂದು ಬೆಳಗ್ಗೆ ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗಿದ್ದಾರೆ.
ಆಗಸ್ಟ್ 2ರಂದು, ಕರೊನಾ ಪಾಸಿಟಿವ್‌ ಬಂದಿತ್ತು. ನಂತರ ಅವರು ಮೆಡಂತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ನೆಗೆಟಿವ್‌ ಬಂದ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆ ಮಾಡಲಾಗಿತ್ತು. ನಂತರ ಆಗಸ್ಟ್ 18ರಂದು ಆಯಾಸ ಕಾಣಿಸಿಕೊಂಡಿತ್ತು.
ಇದನ್ನೂ ಓದಿ:ಷಾರ್ಟ್‌ ಸರ್ಕ್ಯೂಟ್‌: ವಿಜಯಪುರದ ಯೋಧ ಹುತಾತ್ಮ
ಈ ಹಿನ್ನೆಲೆಯಲ್ಲಿ ಅವರನ್ನು ಪೋಸ್ಟ್‌ ಕೋವಿಡ್‌ ಚಿಕಿತ್ಸೆಗಾಗಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಏಮ್ಸ್) ದಾಖಲು ಮಾಡಲಾಗಿತ್ತು. ಇದೀಗ ಅವರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಬಿಡುಗಡೆಯಾಗಿದ್ದಾರೆ.
ನಿನ್ನೆ ಅವರನ್ನು ಪರೀಕ್ಷೆಗೆ ಒಳಪಡಿಸಿದ್ದಾಗ ಸಂಪೂರ್ಣ ಗುಣಮುಖರಾಗಿರುವುದು ತಿಳಿದುಬಂದಿತ್ತು. ಇಂದು ಮತ್ತೊಮ್ಮೆ ತಪಾಸಣೆ ನಡೆಸಿ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಏಮ್ಸ್ ವೈದ್ಯರು ಹೇಳಿದ್ದಾರೆ.
Warm greetings on the auspicious occasion of Onam. May this festival bring joy, harmony, good health and prosperity in everyone’s lives.
Happy Onam!pic.twitter.com/8oOSoScZzE
— Amit Shah (@AmitShah)August 31, 2020

ಈ ಸಂದರ್ಭದಲ್ಲಿ ಟ್ವೀಟ್‌ ಮೂಲಕ ಅಮಿತ್‌ ಷಾ ಅವರು ಓಣಂ ಶುಭಾಶಯ ಕೋರಿದ್ದಾರೆ.
ಕರ್ನಾಟಕಕ್ಕೆ ಕಾಲಿಟ್ಟಿತು ರೋ ರೋ ರೈಲು: ಮುಖ್ಯಮಂತ್ರಿ ಚಾಲನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
