ನವದೆಹಲಿ:ಪಂಜಾಬ್ ಕಾಂಗ್ರೆಸ್‌ನಿಂದ ಭಾರಿ ಅಸಮಾಧಾನಗೊಂಡು ನಂತರ ಮುಖ್ಯಮಂತ್ರಿ ಹುದ್ದೆಯನ್ನೇ ತ್ಯಾಗ ಮಾಡಿದ ಕ್ಯಾಪ್ಟನ್ ಅಮರೀಂದರ್‌ ಸಿಂಗ್‌ ಪಕ್ಷವನ್ನೇ ಬಿಟ್ಟು ಬಿಜೆಪಿ ಸೇರಲಿದ್ದಾರೆ ಎಂಬ ಭಾರಿ ಸುದ್ದಿ ರಾಜಕೀಯ ವಲಯದಲ್ಲಿ ಸುಳಿದಾಡುತ್ತಿದೆ. ಅಷ್ಟೇ ಅಲ್ಲದೇ ಅವರಿಗೆ ಪ್ರಧಾನಿ ಮೋದಿ ಸಂಪುಟದಲ್ಲಿ ಕೇಂದ್ರ ಕೃಷಿ ಸಚಿವ ಸ್ಥಾನ ಸಿಗಲಿದೆ ಎಂಬ ವದಂತಿ ದಟ್ಟವಾಗಿದೆ.
ಇದಕ್ಕೆ ಕಾರಣ ಅವರು ದೆಹಲಿಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ.
ಪಂಜಾಬ್​ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಬಣ ಹಾಗೂ ಅಮರೀಂದರ್ ಸಿಂಗ್ ಬಣದ ನಡುವೆ ನಡೆದ ಮುಸುಕಿನ ಗುದ್ದಾಟದಲ್ಲಿ ಸಿಧು ಬಣವೇ ವಿಜಯ ಸಾಧಿಸಿತ್ತು. ಅಮರೀಂದರ್ ಸಿಂಗ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದ ನವಜೋತ್ ಸಿಂಗ್ ಸಿಧು ತಮ್ಮದೇ ಬಣದ ಚರಣ್​ಜಿತ್ ಸಿಂಗ್ ಛನ್ನಿಯನ್ನು ಸಿಎಂ ಪಟ್ಟದಲ್ಲಿ ಕುಳ್ಳರಿಸಿದ್ದಾರೆ. ಮಾತ್ರವಲ್ಲದೇ ಛನ್ನಿ ಸರ್ಕಾರದಲ್ಲಿ ಅಮರೀಂದರ್ ಸಿಂಗ್ ಸಂಪುಟದಲ್ಲಿ ಸಚಿವರಾಗಿದ್ದ ಐವರನ್ನು ಕೈಬಿಡಲಾಗಿದೆ. ಇದರಿಂದಾಗಿ ಅಮರೀಂದರ್ ಸಿಂಗ್ ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದರು.
ಇದೀಗ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇದಕ್ಕೆ ಅವರ ದೆಹಲಿ ಭೇಟಿ ಪುಷ್ಟಿ ನೀಡುವಂತಿದೆ. ಆದರೆ ಅಮರಿಂದರ್ ಸಿಂಗ್ ಅವರ ಮಾಧ್ಯಮ ಸಲಹೆಗಾರ ರವೀನ್ ತುಕ್ರಾಲ್ ಸಿಂಗ್‌ ಅವರು ವೈಯಕ್ತಿಕ ಭೇಟಿಗೆ ದೆಹಲಿಗೆ ಹೋಗಿದ್ದಾರಷ್ಟೇ. ಇದರಲ್ಲಿ ರಾಜಕೀಯವೇನೂ ಇಲ್ಲ. ಅಲ್ಲಿ ಅವರು ತಮ್ಮ ಸ್ನೇಹಿತರನ್ನು ಭೇಟಿ ಮಾಡಲಾಗಿದ್ದಾರೆ ಎಂದಿದ್ದಾರೆ.
ಆದರೆ ಪಂಜಾಬ್‌ ರೈತರು ಒಂದೆಡೆ ಕೇಂದ್ರ ಕೃಷಿ ಕಾನೂನಿನ ವಿರುದ್ಧ ತಿರುಗಿಬಿದ್ದಿರುವ ಈ ಸಂದರ್ಭದಲ್ಲಿ ಸಿಂಗ್‌ ಅವರು ಕೃಷಿ ಸಚಿವರಾಗಲಿದ್ದಾರೆ ಎಂಬ ಸುದ್ದಿ ಕೂಡ ಹರಡಿದ್ದು, ಎಲ್ಲದಕ್ಕೂ ಕಾಲವೇ ಉತ್ತರಿಸಬೇಕಿದೆ.
ಕಾಂಗ್ರೆಸ್‌ಗೆ ಯುವ ನಾಯಕರ ಸೇರ್ಪಡೆ- ಇಂದು ‘ಕೈ’ ಹಿಡಿಯಲಿದ್ದಾರೆ ಕನ್ಹಯ್ಯ ಕುಮಾರ್‌, ಜಿಗ್ನೇಶ್‌

ಏನು ಹೇಳೋದಮ್ಮಾ ನಿಮ್ಮಂಥೋರಿಗೆ? ಮೆಸೇಜ್‌ ಮಾಡ್ತಿರೋನು ಯುವಕನೇ ಅಂತ ಕನ್‌ಫರ್ಮ್‌ ಇದ್ಯಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + three =
Remember me
