ಬೆಂಗಳೂರು:ಅಮೃತ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರ ಆ.11ರಿಂದ 17ರವರೆಗೆ ಹಮ್ಮಿಕೊಂಡಿರುವ “ಹರ್ ಘರ್ ತಿರಂಗಾ” ಕಾರ್ಯಕ್ರಮವನ್ನು ಉನ್ನತ ಶಿಕ್ಷಣ ಮತ್ತು ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಗಳ ವ್ಯಾಪ್ತಿಯಲ್ಲಿ (ಡಿಸಿಟಿಇ) ಯಶಸ್ವಿಗೊಳಿಸಲು ಸುತ್ತೋಲೆ ಹೊರಡಿಸಲಾಗಿದೆ.
“ಹರ್ ಘರ್ ತಿರಂಗಾ” ಅಭಿಯಾನದಡಿ ದೇಶದ ಮನೆಮನೆಯಲ್ಲೂ ರಾಷ್ಟ್ರಧ್ಜಜ ಹಾರಿಸಿ ರಾಷ್ಟ್ರಪ್ರೇಮ ಅಭಿವ್ಯಕ್ತಗೊಳಿಸಲು ಕರೆ ಕೊಡಲಾಗಿದೆ. ಇದಕ್ಕೆ ಪೂರಕವಾಗಿ, ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲಾ ವಿಶ್ವವಿದ್ಯಾನಿಲಯಗಳು, ಡಿಸಿಟಿಇ ಗೆ ಒಳಪಡುವ ಸರ್ಕಾರಿ/ಅನುದಾನಿತ/ಅನುದಾನರಹಿತ ಪದವಿ ಕಾಲೇಜುಗಳು ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಇದು ಅನ್ವಯವಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ತರಗತಿಗಳ ಸಮಯದಲ್ಲಿ ಈ ಬಗ್ಗೆ ತಿಳಿಸಬೇಕು, ಸೂಚನಾ ಫಲಕಗಳಲ್ಲಿ ಮಾಹಿತಿ ಹಾಕಬೇಕು, ಆಯಾ ಕಾಲೇಜುಗಳ ವಾಹನಗಳ ಮೇಲೆ ಧ್ವಜ ಅಳವಡಿಸಲು ತಿಳಿಸಬೇಕು ಹಾಗೂ ಈ ಸಂಬಂಧ ಕೈಗೊಂಡ ಕ್ರಮಗಳ ಬಗ್ಗೆ ಪ್ರತಿ ವಾರದ ಕೊನೆಯಲ್ಲಿ ಕನ್ನಡ ಮತ್ತು‌ ಸಂಸ್ಕೃತಿ ಇಲಾಖೆಯ ವೆಬ್ ಸೈಟ್[email protected]ಗೆ ಅಪ್ ಲೋಡ್ ಮಾಡಬೇಕು ಎಂದು ಸೂಚಿಸಲಾಗಿದೆ.
ತಂತಮ್ಮ‌ ಮನೆ ಮೇಲೆ ರಾಷ್ಟ್ರಧ್ವಜ ಹಾರಿಸಲು ಬೋಧಕರು, ಬೋಧಕೇತರರು, ವಿದ್ಯಾರ್ಥಿಗಳನ್ನು ಮತ್ತು ಸಂಸ್ಥೆಗಳ ವಾಹನ ಚಾಲಕರನ್ನು ಪ್ರೇರೇಪಿಸಬೇಕು. ಕೇಂದ್ರ ಸರ್ಕಾರದ amritmahotsav.nic.in ಜಾಲತಾಣದಲ್ಲಿ “ಹರ್ ಘರ್ ತಿರಂಗಾ” ಅಡಿಯಲ್ಲಿ ಈ ಸಂಬಂಧವಾಗಿ ಇರುವ ಬ್ಯಾನರ್ ಮತ್ತು ಪೋಸ್ಟರ್ ಗಳ ಮಾದರಿಗಳನ್ನು ಉಪಯೋಗಿಸಿಕೊಳ್ಳಬೇಕು ಎಂದು ಸಚಿವರು ಹೇಳಿದ್ದಾರೆ.
ನಾಮಪತ್ರ ಸಲ್ಲಿಸುವ ಒಂದು ಗಂಟೆ ಮೊದಲು ಕಾಂಗ್ರೆಸ್​ ತೊರೆದಿದ್ದ ಮಹಾರಾಷ್ಟ್ರದ ನೂತನ ಸ್ಪೀಕರ್​ ನಾರ್ವೇಕರ್​ ಯಾರು?

ಎಳವೆಯಲ್ಲಿಯೇ ಕನ್ನಡಿಗರ ಹೃದಯಗೆದ್ದು ಅಗಲಿದ ಪುಟಾಣಿ ಸಮನ್ವಿ ಮನೆಗೆ ಪುಟ್ಟ ಕಂದನ ಆಗಮನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
