ಅಮರಾವತಿ:5.47 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯವನ್ನು ಆಂಧ್ರಪ್ರದೇಶದ ಪೊಲೀಸರು ನಾಶಪಡಿಸಿದ್ದಾರೆ. ಎನ್‍ಟಿಆರ್ ಜಿಲ್ಲೆಯ ನಂದಿಗಾಮದಲ್ಲಿ ಸಂಗ್ರಹಿಸಿಟ್ಟ ಮದ್ಯದ ಬಾಟಲ್​ಗಳನ್ನು ರೋಡ್ ರೋಲರ್ ಸಹಾಯದಿಂದ ನಾಶಪಡಿಸಲಾಗಿದೆ.
ಸುಮಾರು 3 ಲಕ್ಷ ಮದ್ಯದ ಬಾಟ್ಲಿಗಳು ರೋಡ್​ರೋಲರ್​ನಿಂದಾಗಿ ಪುಡಿಪುಡಿಯಾಗಿದ್ದು, ಅದರಲ್ಲಿರೋ ಮದ್ಯ ರಸ್ತೆಯ ಮೇಲೆಲ್ಲಾ ಹರಿದಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಈ ಕಾರ್ಯ ನಡೆಸಲಾಗಿದ್ದು, ವಿಡಿಯೋ ವೈರಲ್​ ಆಗಿದೆ.
ತೆಲಂಗಾಣದಿಂದ ಆಂಧ್ರಪ್ರದೇಶಕ್ಕೆ ಅಕ್ರಮವಾಗಿ ಈ ಮದ್ಯದ ಬಾಟಲ್​ಗಳನ್ನು ಸಾಗಿಸಲಾಗುತ್ತಿತ್ತು. ನಗರದ ಹೊರವಲಯದಲ್ಲಿರುವ ಎಲ್ಲಾ ಚೆಕ್ ಪೋಸ್ಟ್​ಗಳ ಮೇಲೆ ಏಕಾಏಕಿ ದಾಳಿ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇತರ ರಾಜ್ಯಗಳಿಂದ ಆಂಧ್ರಪ್ರದೇಶಕ್ಕೆ ಅಕ್ರಮ ಮದ್ಯ ಸಾಗಣೆಯಾಗಿರುವ ಕುರಿತು ವರದಿಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ವಿಷಯ ಪೊಲೀಸರಿಗೆ ತಿಳಿಯುತ್ತಲೇ ದಾಳಿ ಮಾಡಿದ ತಂಡ 2 ಸಾವಿರ ಲೀಟರ್ ಅಕ್ರಮ ಮದ್ಯವನ್ನು ನಾಶಪಡಿಸಿದ್ದಾರೆ.
ಅಕ್ರಮ ಮದ್ಯ ಸಾಗಾಟಕ್ಕೆ ಸಂಬಂಧಿಸಿದಂತೆ 226 ಮಂದಿ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ವಿಜಯವಾಡದ ಪೊಲೀಸ್ ಆಯುಕ್ತ ಕಾಂತಿ ರಾಣಾ ಟಾಟಾ ವಿವರಿಸಿದ್ದಾರೆ.
ಇಲ್ಲಿದೆ ನೋಡಿ ವಿಡಿಯೋ: ಕೃಪೆ ಎಎನ್​ಐ
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:four × 3 =
Remember me
