ಪುಣೆ:ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ (84)ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದ ಎರಡು ಮೂರು ದಿನಗಳಿಂದ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಲ್ಲಿಯ ರೂಬಿ ಹಾಲ್ ಕ್ಲಿನಿಕ್‌ಗೆ ದಾಖಲು ಮಾಡಲಾಗಿದೆ. ಹೃದಯದ ಅಪಧಮನಿಯಲ್ಲಿನ ಸಣ್ಣ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ ಅವರು ಸ್ಥಿರವಾಗಿದ್ದಾರೆ ಎಂದು ವೈದ್ಯ ಅವಧೂತ್ ಬೋದಮವಾಡ್ ಮಾಹಿತಿ ನೀಡಿದ್ದಾರೆ.
ಇನ್ನು ಎರಡು ಮೂರು ದಿನ ಅವರನ್ನು ಆಸ್ಪತ್ರೆಯಲ್ಲಿಯೇ ಇಟ್ಟುಕೊಂಡು ನಿಗಾ ವಹಿಸಲಾಗುತ್ತದೆ. ಸದ್ಯ ಆರೋಗ್ಯ ಚೆನ್ನಾಗಿ ಇರುವ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿದ್ದ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ಸಹ ನಡೆಸಿದ್ದರು. ಇದಕ್ಕೂ ಮುನ್ನ ಲೋಕಪಾಲ್​ ಮಸೂದೆ​​ ಜಾರಿಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಇವರು ಹೋರಾಟ ನಡೆಸಿದ್ದರು.
ವರದಕ್ಷಿಣೆಗೆ ಕೂಡಿದ್ದ 75 ಲಕ್ಷ ರೂ. ಬಡ ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ಕೊಟ್ಟ ವಧು: ಎಲ್ಲೆಡೆ ಶ್ಲಾಘನೆಗಳ ಮಹಾಪೂರ

ಹೀಗೆ ಹೋಯ್ತು… ಹಾಗೆ ಸಿಕ್ತು… ಕಳುವಾದ ಮೊಬೈಲ್‌ ಕೆಲವೇ ಗಂಟೆಯಲ್ಲಿ ಪತ್ತೆ ಮಾಡಿದ ಬೆಂಗಳೂರು ಪೊಲೀಸ್‌

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fifteen − four =
Remember me
