ಗೋದಾವರಿ (ಆಂಧ್ರಪ್ರದೇಶ) :ಬಸ್‌ವೊಂದು ಸೇತುವೆಯಿಂದ ಉರುಳಿಬಿದ್ದು ಚಾಲಕ ಸೇರಿದಂತೆ ಕನಿಷ್ಠ 9 ಮಂದಿ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.ಇಲ್ಲಿಯ ಸರ್ಕಾರಿ ಬಸ್‌ ಸೇತುವೆಯಿಂದ 50 ಅಡಿ ಕೆಳಕ್ಕೆ ಉರುಳಿ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ಜಂಗಾರೆಡ್ಡಿಗುಡೆಂ ವಲಯದ ಜಲ್ಲೇರು ಎಂಬಲ್ಲಿ ಈ ದುರ್ಘಟನೆ ನಡೆದಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚು ಸಾಧ್ಯತೆ ಇದೆ. ಬಸ್ ವೇಲೇರುಪಾಡು ಕಡೆಯಿಂದ ಜಂಗಾರೆಡ್ಡಿಗುಡೆಂಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.ಘಟನೆಯಲ್ಲಿ ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತದೇಹಗಳನ್ನು ನದಿಯಿಂದ ಹೊರಕ್ಕೆ ತೆಗೆಯುವ ಕಾರ್ ಭರದಿಂದ ಸಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಇದರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.ಬಸ್​ನಲ್ಲಿ 47 ಮಂದಿ ಪ್ರಯಾಣಿಸುತ್ತಿದ್ದು ಮೃತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ.ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು ಇನ್ನಷ್ಟೇ ವಿಚಾರ ಹೊರಬರಬೇಕಿದೆ.ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಇಲ್ಲಿದೆ ನೋಡಿ:

Rescue operations at#Jallerustream into which a#RTCbus fell killing atleast nine onboard#West#Godavaridistrict@NewIndianXpress@apsrtcpic.twitter.com/gvpUqSyrqq— TNIE Andhra Pradesh (@xpressandhra)December 15, 2021
Rescue operations at#Jallerustream into which a#RTCbus fell killing atleast nine onboard#West#Godavaridistrict@NewIndianXpress@apsrtcpic.twitter.com/gvpUqSyrqq
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
