ಚಂಡೀಗಢ: ಪ್ರಮುಖ ಬೆಳವಣಿಗೆಯೊಂದರಲ್ಲಿ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಪಕ್ಷವಾಗಿರುವ ಪಂಜಾಬ್ ಲೋಕ ಕಾಂಗ್ರೆಸ್ (ಪಿಎಲ್‌ಸಿ) ಅನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಲು ಸಿದ್ಧತೆ ನಡೆಸಲಾಗಿದೆ. ಇದಕ್ಕಾಗಿ ಇದೇ 19ರ ಮುಹೂರ್ತ ಫಿಕ್ಸ್​ ಮಾಡಲಾಗಿದೆ.
ಗೋವಾದ ಕಾಂಗ್ರೆಸ್ ಶಾಸಕಾಂಗ ಪಕ್ಷ ಬಿಜೆಪಿಯೊಂದಿಗೆ ವಿಲೀನವಾದ ಬೆನ್ನಲ್ಲೇ ಇದೀಗ ಪಂಜಾಬ್​ ರಾಜಕೀಯದಲ್ಲಿಯೂ ಮಹತ್ವದ ಬೆಳವಣಿಗೆ ನಡೆದಿದೆ. ಈ ಬೆಳವಣಿಗೆಯು 2024 ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಪಂಜಾಬ್ ರಾಜಕೀಯದ ಮೇಲೆ ದೊಡ್ಡ ಪರಿಣಾಮ ಬೀರುವ ನಿರೀಕ್ಷೆ ಇದೆ.
ಕೆಲವು ದಿನಗಳ ಹಿಂದೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ದೆಹಲಿಗೆ ಭೇಟಿ ನೀಡಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದ್ದರು. ಆ ಸಮಯದಲ್ಲಿ ಅವರು ವಿಲೀನದ ಕುರಿತು ಮಾತನಾಡಿದ್ದರು. ಇದಾದ ಬಳಿಕ ಈ ಬಗ್ಗೆ ರಾಜಕೀಯ ವಲಯದಲ್ಲಿ ಸಾಕಷ್ಟು ಗುಸುಗುಸು ಶುರುವಾಗಿತ್ತು. ಇದಕ್ಕೀಗ ತೆರೆ ಬಿದ್ದಿದೆ.
ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಸಮ್ಮುಖದಲ್ಲಿ ಕ್ಯಾಪ್ಟನ್ ಅಮರಿಂದರ್ ಸಿಂಗ್ 19ರಂದು ಪಕ್ಷದ ವಿಲೀನದ ಬಗ್ಗೆ ಘೋಷಿಸಲಿದ್ದಾರೆ. ಈ ಮೂಲಕ ಅವರು ಅಂದು ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಪಡೆಯಲಿದ್ದಾರೆ. ಕ್ಯಾಪ್ಟನ್ ಅಮರಿಂದರ್ ಅವರ ಜತೆಗೆ ಪಂಜಾಬ್‌ನ ಆರೇಳು ಮಾಜಿ ಶಾಸಕರು, ಅಮರಿಂದರ್ ಅವರ ಪುತ್ರ ರಣಿಂದರ್ ಸಿಂಗ್, ಪುತ್ರಿ ಜೈ ಇಂದರ್ ಕೌರ್, ಮೊಮ್ಮಗ ನಿರ್ವಾನ್ ಸಿಂಗ್ ಕೂಡ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ.
ಪಂಜಾಬ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಿಎಲ್‌ಸಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು. ಅಂದಿನಿಂದ, ಕ್ಯಾಪ್ಟನ್ ಅಮರಿಂದರ್ ಅವರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದರು. (ಏಜೆನ್ಸೀಸ್​)
ಗೋವಾದ ರಾಜಕೀಯದಲ್ಲಿ ಕುತೂಹಲದ ಬೆಳವಣಿಗೆ: ಬಿಜೆಪಿಯೊಂದಿಗೆ ಸಿಎಲ್​ಪಿ ವಿಲೀನ- ಸ್ಪೀಕರ್​ ಅಸ್ತು
ಮುಸ್ಲಿಂ ವ್ಯಕ್ತಿಯ ಮನೆ ಅಗೆದಾಗ ಹಿಂದೂ ದೇಗುಲದ ಘಂಟೆ, ಶಂಖ, ತ್ರಿಶೂಲಗಳು ಪತ್ತೆ! ಎಲ್ಲೆಡೆ ಕೋಲಾಹಲ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 17 =
Remember me
