ಮುಂಬೈ:ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್​ ಮತ್ತು ಅವರ ತಾಯಿಯವರು 2018ರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಜಾಮೀನು ನೀಡಲು ಬಾಂಬೆ ಹೈಕೋರ್ಟ್​ ತಿರಸ್ಕರಿಸಿದೆ.
ನೇರವಾಗಿ ಹೈಕೋರ್ಟ್​ಗೆ ಬರುವ ಬದಲು, ಮೊದಲು ಸೆಷನ್ಸ್​ ಕೋರ್ಟ್​ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸುವಂತೆ ಕೋರ್ಟ್​ ಆದೇಶಿಸಿದೆ ಹಾಗೂ ಈ ಅರ್ಜಿಯ ವಿಚಾರಣೆಯನ್ನು ನಾಲ್ಕು ದಿನಗಳಲ್ಲಿ ಮುಗಿಸುವಂತೆ ಸೆಷನ್ಸ್​ ಕೋರ್ಟ್​ಗೆ ಹೈಕೋರ್ಟ್​ ನ್ಯಾಯಮೂರ್ತಿಗಳು ನಿರ್ದೇಶಿಸಿದ್ದಾರೆ.
ಇದನ್ನೂ ಓದಿ:ವಿಧಾನಸಭೆಯಿಂದ ಅರ್ನಬ್‌ ಗೋಸ್ವಾಮಿಗೆ ಹಕ್ಕುಚ್ಯುತಿ ನೋಟಿಸ್‌: ‘ಸುಪ್ರೀಂ’ ಅಸಮಾಧಾನ
ರಿಪಬ್ಲಿಕ್ ಟಿವಿ ಸ್ಟುಡಿಯೋ ನಿರ್ಮಿಸುವಾಗ ಅನ್ವಯ್ ನಾಯಕ್ ಅವರೇ ಇಂಟೀರಿಯರ್ ಡಿಸೈನಿಂಗ್ ಮಾಡಿಕೊಟ್ಟಿದ್ದರು. ಅದರ ಹಣ ನೀಡದೆ ಸತಾಯಿಸಿದ್ದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಅರ್ನಬ್ ಗೋಸ್ವಾಮಿ ವಿರುದ್ಧ ಕೇಳಿಬಂದಿದೆ.
ಈ ಪ್ರಕರಣದಲ್ಲಿ ಅಲಿಬೌಗ್‌ನ ಕೋರ್ಟ್ ಅರ್ನಬ್ ಗೋಸ್ವಾಮಿ ಮತ್ತು ಇತರ ಇಬ್ಬರನ್ನು ನವೆಂಬರ್ 18ರವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ.
ಚಿಕನ್​ ಫಿಲ್ಲೆಟ್ಸ್​ ಹೆಸರು ಕೇಳುತ್ತಿದ್ದಂತೆಯೇ​ ಕೋಮಾದಿಂದ ಎದ್ದುಕುಳಿತ ಯುವಕ!

ಆ್ಯಪ್​ ಇನ್​ಸ್ಟಾಲ್​ ಮಾಡುತ್ತಿದ್ದಂತೆಯೇ ₹9 ಲಕ್ಷ ಮಂಗಮಾಯ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four − 2 =
Remember me
