ಅಲಿಬೌಗ್:ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್​ ಮತ್ತು ಅವರ ತಾಯಿಯವರು 2018ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಪ್ರಚೋದನೆ ನೀಡಿರುವ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಕೈದಿಗಳಿಗೆ ಮೀಸಲಿಟ್ಟ ಕೋವಿಡ್‌ ಕೇಂದ್ರದಲ್ಲಿ ರಾತ್ರಿ ಕಳೆದಿದ್ದಾರೆ.
ಸದ್ಯ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ಅರ್ನಬ್ ಗೋಸ್ವಾಮಿಯವರು ಕೋವಿಡ್-19 ಕೇಂದ್ರಕ್ಕೆ ಮೀಸಲಾಗಿದ್ದ ಶಾಲೆಯೊಂದರಲ್ಲಿ ರಾತ್ರಿ ಕಳೆದಿದ್ದಾರೆ. ಈ ಕೇಂದ್ರವನ್ನು ಮಹಾರಾಷ್ಟ್ರದ ರಾಯಗಢ್ ಜಿಲ್ಲೆಯಲ್ಲಿರುವ ಅಲಿಬೌಗ್‌ನ ಅಲಿಬೌಗ್ ಕಾರಾಗೃಹದ ಕೈದಿಗಳ ತಂಗುವಿಕೆಗೆ ನೀಡಲಾಗಿದೆ.
ಅರ್ನಬ್ ಗೋಸ್ವಾಮಿ ಮತ್ತು ಇನ್ನಿಬ್ಬರು ತಮಗೆ 5.4 ಕೋಟಿ ರೂ. ಹಣ ನೀಡಬೇಕು. ಆ ಹಣ ನೀಡಲು ಅವರು ಒಪ್ಪುತ್ತಿಲ್ಲ. ಇದರಿಂದ ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಡೆತ್‌ನೋಟ್ ಬರೆದಿಟ್ಟು ಅನ್ವಯ್ ನಾಯಕ್​ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಗನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ, ಅನ್ವಯ್ ಅವರ ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು.
ಇದನ್ನೂ ಓದಿ:ರಿಪಬ್ಲಿಕ್ ಟಿವಿ ಅರ್ನಬ್​ಗೆ ಇನ್ನೊಂದು ಸಂಕಷ್ಟ- ಸುಶಾಂತ್​ ಸಿಂಗ್​ ಸ್ನೇಹಿತನಿಂದ ₹200 ಕೋಟಿ ಮಾನನಷ್ಟ ನೋಟಿಸ್​!
ರಿಪಬ್ಲಿಕ್ ಟಿವಿ ಸ್ಟುಡಿಯೋ ನಿರ್ಮಿಸುವಾಗ ಅನ್ವಯ್ ನಾಯಕ್ ಅವರೇ ಇಂಟೀರಿಯರ್ ಡಿಸೈನಿಂಗ್ ಮಾಡಿಕೊಟ್ಟಿದ್ದರು. ಅದರ ಹಣ ನೀಡದೆ ಸತಾಯಿಸಿದ್ದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಅರ್ನಬ್ ಗೋಸ್ವಾಮಿ ವಿರುದ್ಧ ಕೇಳಿಬಂದಿದೆ.
ಈ ಪ್ರಕರಣದಲ್ಲಿ ಅಲಿಬೌಗ್‌ನ ಕೋರ್ಟ್ ನಿನ್ನೆ ಅರ್ನಬ್ ಗೋಸ್ವಾಮಿ ಮತ್ತು ಇತರ ಇಬ್ಬರನ್ನು ನವೆಂಬರ್ 18ರವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ. ಅರ್ನಬ್ ಅವರನ್ನು 14 ದಿನಗಳ ಕಸ್ಟಡಿಗೊಪ್ಪಿಸಲು ಅನುಮತಿ ನೀಡಬೇಕೆಂದು ಪೊಲೀಸರು ಕೇಳಿದ್ದರು. ಆದರೆ ಕಸ್ಟಡಿ ತನಿಖೆ ಅಗತ್ಯವಿಲ್ಲ ಎಂದು ಕೋರ್ಟ್‌ ಹೇಳಿದೆ.
ರಾತ್ರಿ ಅರ್ನಬ್‌ ಅವರನ್ನು ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. ನಂತರ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಅಲ್ಲಿಯೇ ಅವರು ರಾತ್ರಿ ಕಳೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಬೆದರಿಕೆಗೆ ₹1 ಸಾವಿರ, ಕೊಲೆ ಮಾಡಲು ₹55 ಸಾವಿರ… ಹಲವು ‘ಸೇವೆ’ ನಮ್ಮಲ್ಲಿ ಲಭ್ಯ…

ಜೂಜಾಟಕ್ಕೆ ಪ್ರೇರಣೆ: ಹೈಕೋರ್ಟ್‌ ನೋಟಿಸ್‌ ಕುಣಿಕೆಯಲ್ಲಿ ಸಿನಿ, ಕ್ರಿಕೆಟ್‌ ತಾರೆಯರು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eight + seventeen =
Remember me
