ಮುಂಬೈ:ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್​ ಮತ್ತು ಅವರ ತಾಯಿಯವರು 2018ರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಜಾಮೀನು ನೀಡಲು ಬಾಂಬೆ ಹೈಕೋರ್ಟ್​ ತಿರಸ್ಕರಿಸಿದ ಬೆನ್ನಲ್ಲೇ ಇದೀಗ ಅವರು ಸುಪ್ರೀಂಕೋರ್ಟ್​ ಮೊರೆ ಹೋಗಿದ್ದಾರೆ.
ಅರ್ನಬ್​ ಅವರಿಗೆ ಜಾಮೀನು ನೀಡಲು ನಿನ್ನೆ ಹೈಕೋರ್ಟ್​ ನಿರಾಕರಿಸಿತ್ತು. ನೇರವಾಗಿ ಹೈಕೋರ್ಟ್​ಗೆ ಬರುವ ಬದಲು, ಮೊದಲು ಸೆಷನ್ಸ್​ ಕೋರ್ಟ್​ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸುವಂತೆ ಕೋರ್ಟ್​ ಆದೇಶಿಸಿತ್ತು. ಮಾತ್ರವಲ್ಲದೇ ಈ ಅರ್ಜಿಯ ವಿಚಾರಣೆಯನ್ನು ನಾಲ್ಕು ದಿನಗಳಲ್ಲಿ ಮುಗಿಸುವಂತೆ ಸೆಷನ್ಸ್​ ಕೋರ್ಟ್​ಗೆ ಹೈಕೋರ್ಟ್​ ನ್ಯಾಯಮೂರ್ತಿಗಳು ನಿರ್ದೇಶಿಸಿದ್ದರು.
ಇದನ್ನೂ ಓದಿ:ಅರ್ನಬ್​ಗೆ ಸುತ್ತಿಕೊಂಡ ಆತ್ಮಹತ್ಯೆ ಪ್ರಕರಣ- ಸಾವಿನ ತನಿಖೆಗೆ ಕೋರಿ ಅರ್ಜಿ- ನೋಟಿಸ್​
ಆದರೆ, ಈ ಆದೇಶ ಸರಿಯಾಗಿಲ್ಲ ಎಂದು ಆರೋಪಿಸಿರುವ ಅರ್ನಬ್​ ಸುಪ್ರೀಂಕೋರ್ಟ್​ಗೆ ವಿಶೇಷ ಮೇಲ್ಮನವಿ ಸಲ್ಲಿಸಿದ್ದಾರೆ.
ರಿಪಬ್ಲಿಕ್ ಟಿವಿ ಸ್ಟುಡಿಯೋ ನಿರ್ಮಿಸುವಾಗ ಅನ್ವಯ್ ನಾಯಕ್ ಅವರೇ ಇಂಟೀರಿಯರ್ ಡಿಸೈನಿಂಗ್ ಮಾಡಿಕೊಟ್ಟಿದ್ದರು. ಅದರ ಹಣ ನೀಡದೆ ಸತಾಯಿಸಿದ್ದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಅರ್ನಬ್ ಗೋಸ್ವಾಮಿ ವಿರುದ್ಧ ಕೇಳಿಬಂದಿದೆ.
ಈ ಪ್ರಕರಣದಲ್ಲಿ ಅಲಿಬೌಗ್‌ನ ಕೋರ್ಟ್ ಅರ್ನಬ್ ಗೋಸ್ವಾಮಿ ಮತ್ತು ಇತರ ಇಬ್ಬರನ್ನು ನವೆಂಬರ್ 18ರವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ.
ಬಿಹಾರ ಫೈಟ್​- ನೆಟ್ಟಿಗರ ಮೀಮ್ಸ್​​ ನಿಜವಾಯ್ತು… ಇವಿಎಂನಲ್ಲಿ ದೋಷ ಎಂದ ಕಾಂಗ್ರೆಸ್!​

ಗುಜರಾತ್​ನಲ್ಲಿ 100% ಮಧ್ಯಪ್ರದೇಶದಲ್ಲಿ 80% ಅರಳುತಿದೆ ಕಮಲ

ಎಂಜಿಬಿ ಎಂದರೆ ಮಹಾಘಟ್​​ಬಂಧನ ಅಲ್ಲ… ‘ಮರ್​ ಗಯಾ ಭಾಯ್’ ಎಂದ್ರಂತೆ ರಾಹುಲ್​!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen + 15 =
Remember me
