ನವದೆಹಲಿ: ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣದ ಚರ್ಚೆಗಳಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಕೆಲವು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ನೀಡಿರುವ ಹಕ್ಕುಚ್ಯುತಿ ನೋಟಿಸ್‌ಗೆ ಸುಪ್ರೀಂಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.
ಈ ನೋಟಿಸ್‌ ಪ್ರಶ್ನಿಸಿ ಅರ್ನಬ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸದ ಸುಪ್ರೀಂಕೋರ್ಟ್‌, ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ವಿಧಾನಸಭಾ ಕಾರ್ಯದರ್ಶಿಯವರಿಗೆ ನೋಟಿಸ್‌ ಜಾರಿಗೆ ಆದೇಶಿಸಿದೆ.
“ಈ ಹಕ್ಕುಚ್ಯುತಿ ನೋಟಿಸ್‌ ಕೊಟ್ಟವರ ಬಗ್ಗೆ ನಮಗೆ ಗಂಭೀರ ಪ್ರಶ್ನೆ ಇದೆ, ಈ ಪ್ರಶ್ನೆಯನ್ನು ಕಡೆಗಣಿಸುವುದು ನಮಗೆ ಅಸಾಧ್ಯವಾಗಿದೆ. ಆದ್ದರಿಂದ ಈ ಬಗ್ಗೆ ನಮಗೆ ಸ್ಪಷ್ಟ ಕಾರಣ ಬೇಕಿದೆ ಎಂದು ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ನೇತೃತ್ವದ ಪೀಠ ಅಭಿಪ್ರಾಯ ಪಟ್ಟಿದೆ.
ನಾಗರಿಕರು ತಮ್ಮ ಹಕ್ಕುಗಳನ್ನು ಚಲಾಯಿಸುವುದನ್ನು ತಡೆಯುವ ಇಂತಹ ಪ್ರಯತ್ನಗಳು ನಡೆಯುತ್ತಿರುವುದು ನ್ಯಾಯಯುತ ಆಡಳಿತ ವ್ಯವಸ್ಥೆಯಲ್ಲಿ ಗಂಭೀರ ಹಸ್ತಕ್ಷೇಪಕ್ಕೆ ಕಾರಣವಾಗುತ್ತವೆ ಎಂದ ನ್ಯಾಯಮೂರ್ತಿಗಳು, ಈ ನೋಟಿಸ್‌ ಉದ್ದೇಶ ಅರ್ಜಿದಾರರನ್ನು ಬೆದರಿಸುವಂತಿದೆ. ಅವರಿಗೆ ಕೋರ್ಟಿಗೆ ಹೋದರೆ ದಂಡ ಹಾಕುವುದಾಗಿ ಬೆದರಿಕೆ ಹಾಕಲಾಗಿದೆ. ಇದು ನಮ್ಮ ಸಂವಿಧಾನದ ಪ್ರಕಾರ ತಪ್ಪು. ವ್ಯಕ್ತಿಯ ಮೂಲಭೂತ ಹಕ್ಕನ್ನು ಕಸಿದುಕೊಂಡಂತೆ ಎಂದಿದೆ ಪೀಠ.
ಇದನ್ನೂ ಓದಿ:ನನ್ನದು ಅಕ್ರಮ ಬಂಧನ: ಹೈಕೋರ್ಟ್‌ ಬಾಗಿಲಿಗೆ ಅರ್ನಬ್‌ ಗೋಸ್ವಾಮಿ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಜೂನ್ 14ರಂದು ಮುಂಬೈನ ಉಪನಗರ ಬಾಂದ್ರಾದಲ್ಲಿರುವ ತನ್ನ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದರು. ಈ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಆದರೆ ಗೋಸ್ವಾಮಿಯವರು ಈ ಬಗ್ಗೆ ಮಹಾರಾಷ್ಟ್ರ ಸರ್ಕಾರವನ್ನು ಟೀಕಿಸಿದ್ದರು.
ಈ ಹಿನ್ನೆಲೆಯಲ್ಲಿ, ಅಕ್ಟೋಬರ್ 13 ರಂದು ಗೋಸ್ವಾಮಿಯವರಿಗೆ ಮಹಾರಾಷ್ಟ್ರ ವಿಧಾನಸಭೆ ಕಾರ್ಯದರ್ಶಿ ಹಕ್ಕುಚ್ಯುತಿ ನೋಟಿಸ್‌ ಜಾರಿಗೊಳಿಸಿದ್ದಾರೆ.
2018ರಲ್ಲಿ ಇಂಟೀರಿಯರ್ ಡಿಸೈನರ್ ಆತ್ಮಹತ್ಯೆಗೆ ಪ್ರೇರಣೆ ನೀಡಿದ್ದಾರೆಂಬ ಆರೋಪದ ಹಿನ್ನೆಲೆ ಈಗಾಗಲೇ ಅರ್ನಬ್‌ ಬಂಧನಕ್ಕೊಳಗಾಗಿದ್ದಾರೆ. ಸದ್ಯ 14 ದಿನಗಳ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ.
https://www.vijayavani.net/s-police-on-bannet-of-car/
ತಮಿಳುನಾಡಿನಲ್ಲಿ ಯಾತ್ರೆ: ಸಿ.ಟಿ.ರವಿ ಸೇರಿದಂತೆ ಬಿಜೆಪಿ ಮುಖಂಡರು ಅರೆಸ್ಟ್‌

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:14 − 5 =
Remember me
