ಲಖನೌ:28 ವರ್ಷಗಳ ಹಳೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿನಿಂದ ಬಿಜೆಪಿ ನಾಯಕರು ನಿರಾಳರಾಗಿದ್ದಾರೆ. ಧ್ವಂಸ ಮಾಡಿರುವುದು ಉದ್ದೇಶಪೂರ್ವಕವಾಗಿ ಅಲ್ಲ, ಅದು ಆಕಸ್ಮಿಕ ಎಂದು ನ್ಯಾಯಾಧೀಶ ಎಸ್​.ಕೆ.ಯಾದವ್​ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ. ಈ ಮೂಲಕ ಎಲ್ಲಾ 32 ಆರೋಪಿಗಳನ್ನೂ ಖುಲಾಸೆಗೊಳಿಸಲಾಗಿದೆ.
ಆದರೆ ಈ ತೀರ್ಪನ್ನುಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಆಲ್​ ಇಂಡಿಯಾ ಮುಸ್ಲಿಂ ಲಾ ಬೋರ್ಡ್​) ಖಂಡಿಸಿದೆ. ಆದ್ದರಿಂದ ಪ್ರಕರಣದ ತೀರ್ಪಿನ ಕುರಿತು ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲು ಇದು ನಿರ್ಧರಿಸಿದೆ.
ಈ ಕುರಿತು ಮಾಹಿತಿ ನೀಡಿರುವಬಾಬರಿ ಕ್ರಿಯಾ ಸಮಿತಿಯ ಸಂಚಾಲಕ ಮತ್ತು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಸದಸ್ಯ ಜಫರ್ಯಾಬ್ ಜಿಲಾನಿ ನಾವು ಕೋರ್ಟ್​ ತೀರ್ಪಿನಿಂದ ತೃಪ್ತರಾಗಿಲ್ಲ. ಆದ್ದರಿಂದ ಇದನ್ನು ಪ್ರಶ್ನಿಸಿ ಹೈಕೋರ್ಟ್​ ಮೊರೆ ಹೋಗಲಿದ್ದೇವೆ ಎಂದಿದ್ದಾರೆ.ಇದೇ ವೇಳೆ ಪ್ರಕರಣದ ತನಿಖೆಯನ್ನು ಮತ್ತೊಮ್ಮೆ ನಡೆಸುವಂತೆ ಸಿಬಿಐಗೆ ಕೋರಿಕೊಳ್ಳಲೂ ಸಂಘಟನೆ ತೀರ್ಮಾನಿಸಿರುವುದಾಗಿ ಅವರು ಹೇಳಿದ್ದಾರೆ.
ಅದೇ ಮತ್ತೊಂದೆಡೆ, ಸಿಬಿಐ ಕೂಡ ತೀರ್ಪಿನ ವಿರುದ್ಧ ಹೈಕೋರ್ಟ್​ ಮೊರೆ ಹೋಗಲು ಸಿದ್ಧತೆ ನಡೆಸಿರುವುದಾಗಿ ತಿಳಿದುಬಂದಿದೆ. ಆದರೆ ಈ ಬಗ್ಗೆ ಯಾವುದೇ ರೀತಿಯ ಅಧಿಕೃತ ಮಾಹಿತಿ ಹೊರಬಂದಿಲ್ಲ.
ಇದನ್ನೂ ಓದಿ:ಲಕ್ನೋ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳು ನಿರ್ದೋಷಿಗಳು
1992ರ ಡಿಸೆಂಬರ್‌ 6ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ವಿವಾದಿತ ರಾಮ ಜನ್ಮಭೂಮಿ ಪ್ರದೇಶದಲ್ಲಿದ್ದ ಬಾಬರಿ ನಿರ್ಮಿತ ಮಸೀದಿಯನ್ನು ಕಾರಸೇವಕರು ಧ್ವಂಸಗೊಳಿಸಿರುವ ಆರೋಪ ಹೊತ್ತ ಪ್ರಕರಣ ಇದಾಗಿದೆ.
ಮಸೀದಿ ಧ್ವಂಸ ಪ್ರಕರಣಕ್ಕೂ ಮೊದಲು ಅಂದರೆ 1990ರಲ್ಲಿ ಗೋಪ್ಯ ಸಭೆಯೊಂದು ಬಿಜೆಪಿ ನಾಯಕ ವಿನಯ್ ಕಟಿಯಾರ್ ಮನೆಯಲ್ಲಿ ನಡೆದಿತ್ತು. ಈ ಸಭೆಯಲ್ಲಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಹೀಗೆ ಮಸೀದಿ ಕೆಡವಲು ಅಡ್ವಾಣಿ ಮತ್ತು ಇತರರು ಸಂಚು ರೂಪಿಸಿದ್ದರು ಎಂದು ಸಿಬಿಐ ತನ್ನ ಜಾರ್ಜ್​ಷೀಟ್​ನಲ್ಲಿ ಹೇಳಿತ್ತು.
ಆದರೆ ಇವೆಲ್ಲಾ ಆರೋಪಗಳನ್ನೂ ಕೋರ್ಟ್​ ತಳ್ಳಿಹಾಕಿದ್ದು, ಇದು ಉದ್ದೇಶಪೂರ್ವಕವಾಗಿ ನಡೆದದ್ದಲ್ಲ. ಆದ್ದರಿಂದ ಆರೋಪಿಗಳ ವಿರುದ್ಧ ಮಾಡಿರುವ ಎಲ್ಲಾ ಆರೋಪಗಳೂ ನಿರಾಧಾರ ಎಂದಿದ್ದಾರೆ.
ಬಾಬ್ರಿ ಮಸೀದಿ ತೀರ್ಪು ನೀಡಿದ ನ್ಯಾಯಾಧೀಶ ಯಾದವ್​ ಕುರಿತ ಕುತೂಹಲದ ಮಾಹಿತಿಯಿದು…

ವಂಚನೆ ತಪ್ಪಿಸಲು ನಾಳೆಯಿಂದ ಡೆಬಿಟ್​-ಕ್ರೆಡಿಟ್​ ಕಾರ್ಡ್​ ಹೊಸ ರೂಲ್ಸ್​: ಏನಿದೆ ಇದರಲ್ಲಿ?

ಇನ್ನೊಂದು ನಿರ್ಭಯಾ ಕೇಸ್​: ಹತ್ರಾಸ್​ ಗ್ಯಾಂಗ್​ರೇಪ್​ ಪ್ರಕರಣ ಎಸ್​ಐಟಿ ತನಿಖೆಗೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven + 19 =
Remember me
