ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್‌ಸಿಬಿ) ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ ಹಾಸ್ಯನಟಿ ಭಾರ್ತಿ ಸಿಂಗ್ ಹಾಗೂ ಅವರ ಪತಿ ಹರ್ಷ್ ಲಿಂಬಾಚಿಯಾ ಅವರಿಗೆ ಮುಂಬೈ ಕೋರ್ಟ್ ಜಾಮೀನು ನೀಡಿದೆ.
ಭಾನುವಾರ ಭಾರತಿ ಸಿಂಗ್ ಮತ್ತು ಪತಿ ಹರ್ಷ್ ಲಿಂಬಾಚಿಯಾ ಅವರನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಇಬ್ಬರಿಗೆ ಡಿಸೆಂಬರ್ 4ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ನಂತರ ಭಾರ್ತಿ ಸಿಂಗ್ ಕಲ್ಯಾಣ್ ಜೈಲಿನಲ್ಲಿ, ಪತಿ ಹರ್ಷ್ ಲಿಂಬಾಚಿಯನ್ನು ತಾಲೋಜಾ ಜೈಲಿನಲ್ಲಿ ಇರಿಸಲಾಗಿತ್ತು
ದಂಪತಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ಕೋರ್ಟ್, ದಂಪತಿಗೆ ತಲಾ 15 ಸಾವಿರ ರೂಪಾಯಿ ಬಾಂಡ್ ಮೇಲೆ ಜಾಮೀನು ನೀಡಿದೆ.
ಇದನ್ನೂ ಓದಿ:ಸದಾ ನಗಿಸುವ ಹಿಂದಿದೆ ಡ್ರಗ್ಸ್​ ಮುಖ! ದಂಪತಿ ಒಪ್ಪಿಕೊಂಡರು ಸತ್ಯ…
ಮಾದಕ ದ್ರವ್ಯಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 21ರಂದು ಮುಂಬೈನ ಖಾರದಂಡಾ ಇಲಾಖೆಯ ಯುವಕನ ನಿವಾಸದ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ. 21 ವರ್ಷದ ಯುವಕನನ್ನು ವಿಚಾರಣೆಗೆ ಒಳಪಡಿಸಿದಾಗ ಭಾರ್ತಿ ಸಿಂಗ್ ಹೆಸರು ಹೇಳಿದ್ದ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಭಾರ್ತಿ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದರು. ಭಾರ್ತಿ ಸಿಂಗ್ ನಿವಾಸ ಮತ್ತು ಪ್ರೊಡೆಕ್ಷನ್ ಕಚೇರಿಯ ಮೇಲೆ ಎನ್‍ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದ ಸಂದರ್ಭದಲ್ಲಿ 86.5 ಗ್ರಾಂ ಗಾಂಜಾ ಲಭ್ಯವಾಗಿತ್ತು.
ತಾಯಿ ಕಿಡ್ನಿ ನೀಡಿದರೂ ಬದುಕುಳಿಯಲಿಲ್ಲ ಕಿರುತೆರೆ ನಟಿ

ಕಮಲದತ್ತ ಮುಖ ಮಾಡಿದ ಕಾಂಗ್ರೆಸ್​ ಸ್ಟಾರ್​ ಪ್ರಚಾರಕಿ ನಟಿ- ನಾಳೆ ಮುಹೂರ್ತ ಫಿಕ್ಸ್​?

ಖುರ್ಚಿ ಮೇಲೆ ಕುಳಿತುಕೊಳ್ಳುತ್ತಲೇ ಕೆಳಗೆ ಬಿದ್ದ ಸಂಸದ- ವಿಡಿಯೋ ವೈರಲ್​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:15 − 8 =
Remember me
