ನವದೆಹಲಿ:ದೀಪಾವಳಿ ಸಂದರ್ಭದಲ್ಲಿ ನಡೆಯಲಿರುವ ಕಾಳಿ ಪೂಜೆಯ ವೇಳೆ ಪಟಾಕಿ ಸಿಡಿಸುವುದನ್ನು ನಿಷೇಧಿಸಿರುವ ಕೋಲ್ಕತಾ ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ.
ಹೈಕೋರ್ಟ್​ ತೀರ್ಪಿಗೆ ತಡೆ ನೀಡುವಂತೆ ಕೋರಿದ್ದ ವಿಶೇಷ ಮೇಲ್ಮನವಿಯನ್ನು ಸುಪ್ರೀಂಕೋರ್ಟ್​ ವಜಾ ಮಾಡಿದೆ.
ಉತ್ಸವಗಳನ್ನು ನಡೆಸುವುದು ಎಲ್ಲರಿಗೂ ಮುಖ್ಯ. ಆದರೆ ಅದಕ್ಕಿಂತ ಮುಖ್ಯವಾದದ್ದು ಮನುಷ್ಯನ ಜೀವ. ಮನುಷ್ಯನ ಪ್ರಾಣ ಕಾಪಾಡಿಕೊಳ್ಳುವುದು ಬಹುಮುಖ್ಯವಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಕೋಲ್ಕೊತಾ ಕೋರ್ಟ್​ ತೀರ್ಪು ನೀಡಿದೆ. ಕರೊನಾ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಪರಿಸರ ಮಾಲಿನ್ಯದಿಂದ ಮನುಷ್ಯರ ಮೇಲೆ ಆಗುವ ಅನಾಹುತ ತಡೆಗಟ್ಟುವುದೇ ಮುಖ್ಯ. ಆದ್ದರಿಂದ ಹೈಕೋರ್ಟ್​ ತೀರ್ಪಿಗೆ ತಡೆ ನೀಡಲಾಗದು ಎಂದಿದೆ.
ಇದನ್ನೂ ಓದಿ:ಉಗ್ರ ಸಂಘಟನೆಯೊಂದಿಗೆ ಲಿಂಕ್​: ಶಿರಸಿ ಮೂಲದ ಯುವಕನ ಬಂಧನ
ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಗೌತಮ್ ರಾಯ್ ಮತ್ತು ಬುರ್ರಾ ಬಜಾರ್ ಪಟಾಕಿ ಮಾಲೀಕರ ಸಂಘ ಸುಪ್ರೀಂಕೋರ್ಟ್​ಗೆ ವಿಶೇಷ ಮೇಲ್ಮನವಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರನ್ನೊಳಗೊಂಡ ವಿಭಾಗೀಯ ಪೀಠ, ಹೈಕೋರ್ಟ್​ ತೀರ್ಪಿಗೆ ತಡೆ ನೀಡಲು ನಿರಾಕರಿಸಿದೆ.
ಗೆದ್ದೇ ಗೆಲ್ಲುವೆ ಎಂದು ಟ್ರಂಪ್​ ಟ್ವೀಟ್​ ಮಾಡಿದರೆ, ಮತ ಹಾಕಿ ಎಂದು ಪುತ್ರನ ಎಡವಟ್ಟು!

ಹಫ್ತಾ ಕೊಡಲಿಲ್ಲವೆಂದು ಬೆಂಗಳೂರಿನಿಂದ ಆರು ರೋಹಿಂಗ್ಯಾಗಳು ಕಿಡ್​ನ್ಯಾಪ್​- ವಿಶ್ವಸಂಸ್ಥೆಗೆ ಪತ್ರ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × 3 =
Remember me
