ಮುಫಾಸಿಲ್ (ಜಾರ್ಖಂಡ್​):ಗಂಡನೊಂದಿಗೆ ಮಾರ್ಕೆಟ್‌ನಿಂದ ಮನೆಗೆ ತೆರಳುತ್ತಿದ್ದ ಐದು ಮಕ್ಕಳ ತಾಯಿಯ ಮೇಲೆ 17 ಮಂದಿ ಸಾಮೂಹಿಕ ಅತ್ಯಾಚಾರವೆಸಗಿರುವ ಪ್ರಕರಣ ಜಾರ್ಖಂಡ್​ನ ದುಮ್ಕಾದಲ್ಲಿ ನಡೆದಿದೆ.
ಪತಿಯ ಮೇಲೆ ಹಲ್ಲೆ ಮಾಡಿರುವ ಆರೋಪಿಗಳೆಲ್ಲರೂ ಈ ಕೃತ್ಯ ಎಸಗಿದ್ದಾರೆ. ಎಲ್ಲರೂ ಮದ್ಯಸೇವನೆ ಮಾಡಿದ್ದರೆನ್ನಲಾಗಿದೆ.
ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ತಾವು ಪತಿಯೊಂದಿಗೆ ಮಾರ್ಕೆಟ್‌ನಿಂದ ಮನೆಗೆ ಮರಳುತ್ತಿದ್ದಾಗ 17 ಮಂದಿ ತಮ್ಮನ್ನು ಅಡ್ಡಗಟ್ಟಿದರು. ಎಲ್ಲರೂ ಕಂಠಪೂರ್ತಿ ಕುಡಿದ್ದರು. ಐವರು ತಮ್ಮನ್ನು ಪೊದೆಯತ್ತ ಎಳೆದೊಯ್ದರು. ಉಳಿದವರು ಗಂಡನ ಮೇಲೆ ಹಲ್ಲೆ ಮಾಡಿದರು. ಬಳಿಕ ಎಲ್ಲರೂ ಅತ್ಯಾಚಾರವೆಸಗಿದರು ಎಂದು ಹೇಳಿಕೆ ನೀಡಿದ್ದಾರೆ.
ಈ ವಿಚಾರ ತಿಳಿಯುತ್ತಿದ್ದಂತೆಯೇ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಇನ್ನು ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. . ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಗೆ ಒಳಪಡುವ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ಆರೋಪಿಗಳ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ.
ಬಿಜೆಪಿ ವಕ್ತಾರ ಪ್ರತುಲ್‌ ಶಾಹ್ದೋ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದು ಪೈಶಾಚಿಕ ದುಷ್ಕೃತ್ಯವಾಗಿದೆ. ಕಾನೂನು ಸುವ್ಯವಸ್ಥೆ ಕುಸಿದಿದೆ ಎಂಬುದನ್ನು ಇದು ತೋರುತ್ತಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇವೆ ಎಂದಿದ್ದಾರೆ.
ಯಾವುದೇ ಕಾರಣಕ್ಕೂ ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ.
ಸುಪ್ರೀಂಕೋರ್ಟ್​ ಮುಖ್ಯನ್ಯಾಯಮೂರ್ತಿ ತಾಯಿಗೇ ಎರಡೂವರೆ ಕೋಟಿ ವಂಚನೆ!

ಬಿಜೆಪಿ ವಿಜಯೋತ್ಸವದಲ್ಲಿ ಕೈ ಕಾರ್ಯಕರ್ತರ ಗಲಾಟೆ: ಮಾರಾಮಾರಿಯಲ್ಲಿ ತಂದೆ-ಮಗನ ಸಾವು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × two =
Remember me
