ರಾಂಚಿ:ಕರೊನಾ ಸೋಂಕಿನಿಂದ ಬಳಲುತ್ತಿದ್ದರೂ ತಮಗೆ ರಜೆ ಕೊಟ್ಟಿಲ್ಲ ಎಂದು ಕೋಪಗೊಂಡ ಬ್ಯಾಂಕ್‌ ಸಿಬ್ಬಂದಿಯೊಬ್ಬರು ಆಕ್ಸಿಜನ್ ಸಿಲಿಂಡರ್ ಸಹಿತ ಕೆಲಸಕ್ಕೆ ಹಾಜರಾಗಿರುವ ಘಟನೆ ಜಾರ್ಖಂಡ್‌ನ ಬೊಕೊರಾದ ಸೆಕ್ಟರ್ 4ರಲ್ಲಿ ನಡೆದಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್‌ ಉದ್ಯೋಗಿ ಅರವಿಂದ್ ಕುಮಾರ್ ಈ ರೀತಿ ಮಾಡಿದ್ದು, ಇವರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.
ಕರೊನಾ ಸೋಂಕಿಗೆ ತುತ್ತಾಗಿದ್ದ ಅರವಿಂದ್‌ ಅವರು ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಪರೀಕ್ಷೆ ಮಾಡಿಸಿದಾಗ ನೆಗಟಿವ್ ವರದಿ ಬಂದಿತ್ತು. ಆದರೆ ಉಸಿರಾಟದ ತೊಂದರೆಯಿಂದಾಗಿ ಮನೆಯಲ್ಲಿಯೇ ಆಕ್ಸಿಜನ್ ಸಪೋರ್ಟ್ ಮೇಲೆ ರೆಸ್ಟ್‌ ಮಾಡುತ್ತಿದ್ದರು. ಮಾತ್ರವಲ್ಲದೇ ಶ್ವಾಸಕೋಶದಲ್ಲಿ ಸೋಂಕು ತಗುಲಿದ್ದರಿಂದ ವೈದ್ಯರು ವಿರಾಮ ತೆಗೆದುಕೊಳ್ಳುವಂತೆ ಹೇಳಿದ್ದರು.
ಈ ಹಿನ್ನೆಲೆಯಲ್ಲಿ ಸಂಪೂರ್ಣ ವೈದ್ಯಕೀಯ ದಾಖಲೆ ಸಹಿತ ಅರವಿಂದ್‌ ಅವರು, ಬ್ಯಾಂಕ್‌ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದು ರಜೆಗಾಗಿ ಮನವಿ ಮಾಡಿದ್ದರು. ಆದರೂ ಕೆಲಸಕ್ಕೆ ಹಾಜರಾಗುವಂತೆ ಒತ್ತಡ ಹಾಕಲಾಗಿತ್ತು ಎಂದು ಆರೋಪಿಸಿರುವ ಅರವಿಂದ್‌ ಸಿಟ್ಟಿನಿಂದ ಹಾಜರಾಗಿದ್ದಾರೆ. ಆದರೆ ಆಕ್ಸಿಜನ್ ಸಿಲಿಂಡರ್ ಸಹಿತವಾಗಿಯೇ ಬರುವಂತಾಗಿದೆ ಎಂದು ಮಾಧ್ಯಮಗಳ ಎದುರು ಅಳಲು ತೋಡಿಕೊಂಡಿದ್ದಾರೆ.ಇದರಿಂದ ಬೇಸರಗೊಂಡ ಅವರು ರಾಜೀನಾಮೆಯನ್ನು ಕೊಟ್ಟಿದ್ದಾರೆ. ಆದರೆ ಅಧಿಕಾರಿಗಳು ಸ್ವೀಕರಿಸುತ್ತಿಲ್ಲ ಎನ್ನಲಾಗಿದೆ. ಕುಟುಂಬದವರು ಬ್ಯಾಂಕ್‌ಗೆ ಬಂದಿದ್ದು, ಹಿರಿಯ ಅಧಿಕಾರಿಗಳು ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕುತ್ತಿದ್ದಾರೆ.
ದುಬೈ ಟು ಮುಂಬೈ- 18 ಸಾವಿರ ರೂಪಾಯಿಯಲ್ಲಿ ರೋಚಕ ಅನುಭವ: ಒಂಟಿ ಪ್ರಯಾಣಿಕನಿಗಾಗಿ ಉರಿದದ್ದು 17 ಟನ್ ಇಂಧನ!

ಮೆಸೇಜ್‌ ಆಧಾರದ ಮೇಲೆ ಪತ್ನಿಗೆ ಡಿವೋರ್ಸ್‌ ಕೊಡಲಾಗದು

ಗೋಮಾತೆಯ ಅಪ್ಪುಗೆಯೇ ಚಿಕಿತ್ಸೆ: ತಾಸಿಗೆ 15 ಸಾವಿರ ರೂ. ಕೊಟ್ಟು ಹಸು ತಬ್ಬಿಕೊಳ್ಳುತ್ತಿರೋ ಅಮೆರಿಕನ್ನರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
