ಕೊಯಮತ್ತೂರು:ಇದೇ 25ರಂದು ಬಿಜೆಪಿ ಸೇರಿದ್ದ ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ವಿರುದ್ಧ ಕೊಯಮತ್ತೂರಿನಲ್ಲಿ ಕೇಸ್‌ ದಾಖಲು ಮಾಡಲಾಗಿದೆ.
ಇವರು ಬಿಜೆಪಿ ಸೇರುವ ಸಂಬಂಧ ನಡೆದ ಕಾರ್ಯಕ್ರಮದಲ್ಲಿ ಕರೊನಾ ವೈರಸ್‌ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಕಾರಣ ನೀಡಿ ಸಬ್‌ ಇನ್ಸ್‌ಪೆಕ್ಟರ್ ಸುಗನ್ಯಾ ಎನ್ನುವವರು ಕೊಯಮತ್ತೂರಿನ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.
ಕೊಯಮತ್ತೂರಿನ ವಿಕೆಕೆ ಮೆನನ್ ರಸ್ತೆಯಲ್ಲಿರುವ ಬಿಜೆಪಿ ಕಚೇರಿಗೆ ಅಣ್ಣಾಮಲೈ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಅದ್ದೂರಿಯಿಂದ ಸ್ವಾಗತಿಸಿದ್ದರು. ಈ ಸಮಯದಲ್ಲಿ ನಿಯಮಗಳನ್ನು ಅವರು ಉಲ್ಲಂಘನೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇವರ ಜತೆಗೆ, ಬಿಜೆಪಿ ಕೆಲವು ಕಾರ್ಯಕರ್ತರ ವಿರುದ್ಧವೂ ಕೇಸು ದಾಖಲಿಸಲಾಗಿದೆ.
ಇದನ್ನೂ ಓದಿ:ಶಿಕ್ಷಕರ ನೆರವಿಗೆ ಬಿಡುಗಡೆಯಾಯ್ತು ‘ಶಿಕ್ಷಕ ಮಿತ್ರ’: ಸ್ಥಳದಲ್ಲಿಯೇ ಪರಿಹಾರ
ಅಣ್ಣಾಮಲೈ ಅವರು ಬಿಜೆಪಿ ಸೇರಿದ್ದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ನಂತರ ಅಣ್ಣಾಮಲೈ ವಾಹನವೊಂದರಿಂದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದರು.
ಇದರ ಆಧಾರದ ಮೇಲೆ ದೂರು ದಾಖಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಆರ್.ನಂದಕುಮಾರ್, ಬಿಜೆಪಿ ರಾಜ್ಯ ಮಟ್ಟದ ನಾಯಕರಾದ ಜಿಕೆಎಸ್ ಸೆಲ್ವಕುಮಾರ್, ಎಸ್.ಆರ್.ಸೇಕರ್ ಮತ್ತು ಕನಗಸಬಪತಿ ಮತ್ತು ಇತರ ಕೆಲವು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.
ಇವರ ವಿರುದ್ಧ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143, 269, 270, 285, 341 ಹಾಗೂ ಸಾಂಕ್ರಾಮಿಕ ರೋಗಗಳ ಕಾಯ್ದೆಯ ಸೆಕ್ಷನ್ 3ರ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪಿಪಿಇ ಕಿಟ್‌ ಹಾಗೂ ಮುಟ್ಟಿನ ದಿನಗಳು: ಕರೊನಾ ವಾರಿಯರ್ಸ್‌ ನೋವನ್ನು ಬಿಚ್ಚಿಟ್ಟ ವೈದ್ಯೆಯರು

ಗೆಳೆಯನ ಜತೆ ದೈಹಿಕ ಸಂಪರ್ಕ ಬೆಳೆಸಿ ಅತ್ಯಾಚಾರ ಎಂದಳು: ಹೈಕೋರ್ಟ್‌ ಮಾಡಿತು ತಕ್ಕಶಾಸ್ತಿ

ವಿಡಿಯೋ: ಕೃಷಿಕರ ಕಮಾಲ್‌- ಬೈಕ್‌ನಿಂದ ಮೆಕ್ಕೆಜೋಳ ಬಿಡಿಸುವುದನ್ನು ನೋಡಿದ್ದೀರಾ?

ಕರೊನಾಗೂ ಜಗ್ಗದೆ ಇವರಾದ್ರು ವಿಶ್ವದ ನಂ.1 ಕುಬೇರ: ಇತಿಹಾಸ ಬರೆದ ಸಿರಿವಂತನ ಡಿಟೇಲ್ಸ್‌ ಇಲ್ಲಿದೆ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × five =
Remember me
