ಲಖನೌ:ಉತ್ತರ ಪ್ರದೇಶದ ಲಖೀಂಪುರ ಖೇರಿಯ ಗೋಖರನಾಥ್​​ ವಿಧಾನಸಭಾ ಕ್ಷೇತ್ರದ ಶಾಸಕ, ಬಿಜೆಪಿಯ ಅರವಿಂದ್ ಗಿರಿ ಅವರು ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರಿಗೆ 64 ವರ್ಷ ವಯಸ್ಸಾಗಿತ್ತು.
ಅರವಿಂದ್ ಗಿರಿ ಅವರು ಐದು ಬಾರಿ ಶಾಸಕರಾಗಿದ್ದರು. ಹೃದಯದ ಯಾವುದೇ ಸಮಸ್ಯೆ ಇರದೇ ಆರೋಗ್ಯವಾಗಿದ್ದ ಅರವಿಂದ್​ ಗಿರಿ ಅವರು ಲಖನೌಗೆ ತೆರಳುತ್ತಿದ್ದರು. ಆದರೆ ಅಚ್ಚರಿ ಎನ್ನುವಂತೆ ದಾರಿಮಧ್ಯೆ ಸುಸ್ತು ಎನಿಸಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು, ಅದರೆ ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದರು. ಹೃದಯಾಘಾತದಿಂದ ಇವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಅರವಿಂದ್ ಗಿರಿ ನಿಧನಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸಂತಾಪ ಸೂಚಿಸಿದ್ದಾರೆ. ಎರಡು ದಶಕಗಳಿಗೂ ಹೆಚ್ಚು ಕಾಲ ಶಾಸಕರಾಗಿ ಅವರು ಮಾಡಿರುವ ಸೇವೆ ಅಪೂರ್ವವಾದದ್ದು. ಇವರ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದಿದ್ದಾರೆ.
1985ರಲ್ಲಿ ಲಖನೌದ ಕ್ರಿಶ್ಚಿಯನ್ ಕಾಲೇಜಿನಲ್ಲಿ ಪದವಿ ಪಡೆದ ನಂತರ ಕೃಷಿಕರಾಗಿ ಸೇವೆ ಪ್ರಾರಂಭಿಸಿದ್ದ ಅರವಿಂದ್​ ಗಿರಿ ಅವರು, ನಂತರ ರಾಜಕೀಯ ಕ್ಷೇತ್ರಕ್ಕೆ ಧುಮುಕಿದ್ದರು. ಹಲವು ವರ್ಷಗಳಿಂದ ಬಿಜೆಪಿಯ ಪ್ರಬಲ ಅಭ್ಯರ್ಥಿಯಾಗಿದ್ದರೂ, ಅವರ ಮೇಲೆ ಆರು ಕ್ರಿಮಿನಲ್ ಆರೋಪಗಳು ಇವೆ ಎನ್ನಲಾಗಿದೆ. (ಏಜೆನ್ಸೀಸ್)
ಟಾಟಾ ಗ್ರೂಪ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಸಾವಿನ ಭವಿಷ್ಯ ಮೊದಲೇ ನುಡಿದಿದ್ದ ಸ್ವಾಮೀಜಿ! ಪೋಸ್ಟ್​ ವೈರಲ್​

ಏನೂ ಕೆಲಸ ಮಾಡದೇ, ಸತತ ನಿದ್ದೆ ಮಾಡಿಕೊಂಡೇ ಐದು ಲಕ್ಷ ರೂ. ಬಹುಮಾನ ಗೆದ್ದ ಯುವತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − nine =
Remember me
