ಹೈದರಾಬಾದ್:ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್‌ ಅವರಿಗೆ ಒಂದು ವರ್ಷಗಳ ಶಿಕ್ಷೆ ವಿಧಿಸಿ ಸೆಷನ್ಸ್​ ಕೋರ್ಟ್​ ಆದೇಶ ಹೊರಡಿಸಿದೆ.
2015ರಲ್ಲಿ ನಡೆದಿರುವ ಪ್ರಕರಣ ಇದಾಗಿದೆ. 2015ರ ಡಿಸೆಂಬರ್​ 12ರಂದು ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಗೋಮಾಂಸ ಹಬ್ಬ ನಡೆಯುತ್ತಿತ್ತು. ಆ ಸಂದರ್ಭದಲ್ಲಿ ಇದನ್ನು ಪ್ರತಿಭಟಿಸಿ ಕೆಲವು ಬಿಜೆಪಿ ನಾಯಕರು ಸ್ಥಳಕ್ಕೆ ಆಗಮಿಸಿದ್ದರು. ಅವರನ್ನು ನಿಯಂತ್ರಿಸಲು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು.
ಪೊಲೀಸ್​ ಇನ್ಸ್​ಪೆಕ್ಟರ್​ ಮಲ್ಲೇಶ್​ ಅವರು ಕೂಡ ಅಲ್ಲಿಗೆ ಬಂದಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಾಗ ಮಲ್ಲೇಶ್​ ಅವರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಆರೋಪವನ್ನು ರಾಜಾ ಸಿಂಗ್​ ಎದುರಿಸುತ್ತಿದ್ದಾರೆ. ಹಲ್ಲೆ ನಡೆಸಿರುವುದು ನಿಜ ಎಂದ ಸೆಷನ್ಸ್​ ಕೋರ್ಟ್​ ಒಂದು ವರ್ಷ ಜೈಲುಶಿಕ್ಷೆ ನೀಡಿದೆ.
ಈ ಶಿಕ್ಷೆಯನ್ನು ಪ್ರಶ್ನಿಸಿ ರಾಜಾ ಸಿಂಗ್​ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಅವರನ್ನು ಕೋರ್ಟ್​ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.
ಹಿಂಸಾಚಾರ ಮತ್ತು ದ್ವೇಷಕ್ಕೆ ಪ್ರಚೋದನೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಕಳೆದ ಸೆಪ್ಟೆಂಬರ್​ನಲ್ಲಿ ವಿವಾದ ಸೃಷ್ಟಿಸಿದ್ದ ಶಾಸಕ ರಾಜಾ ಸಿಂಗ್‌ ಅವರನ್ನು ಫೇಸ್​ಬುಕ್​ನಿಂದ ಕಳೆದ ಸೆಪ್ಟೆಂಬರ್​ನಲ್ಲಿ ನಿಷೇಧಿಸಲಾಗಿತ್ತು.
ಪ್ರತಿಭಟನೆಗೆ ಪಾಕ್​ನಿಂದ ಶಸ್ತ್ರಾಸ್ತ್ರ ಪೂರೈಕೆ: ಸ್ಫೋಟಕ ಮಾಹಿತಿ ನೀಡಿದ ಪಂಜಾಬ್​ ಸಿಎಂ

ಬೆಳ್ಳಂಬೆಳಗ್ಗೆ ಬಸ್​-ಟ್ರಕ್​ ನಡುವೆ ಭೀಕರ ಅಪಘಾತ: 10 ಮಂದಿಯ ದುರ್ಮರಣ- ಹಲವರಿಗೆ ಗಾಯ

ಪ್ರತಿಭಟನೆ ಬೆನ್ನಲ್ಲೇ ದೆಹಲಿಯಲ್ಲಿ ಸ್ಫೋಟ: ಆಟೋದಲ್ಲಿ ಬಂದು ಕೃತ್ಯ! ಸಿಸಿಟಿವಿಯಲ್ಲಿ ಸಿಕ್ತು ಸುಳಿವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
