ರಾಂಪುರ (ಉತ್ತರ ಪ್ರದೇಶ):ಮೂರು ಲೋಕಸಭೆ ಹಾಗೂ ಏಳು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ಈ ಪೈಕಿ ಉತ್ತರ ಪ್ರದೇಶದ ರಾಂಪುರದ ಲೋಕಸಭಾ ಕ್ಷೇತ್ರದ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.
ಮುಸ್ಲಿಂ ಪ್ರಾಬಲ್ಯವುಳ್ಳ ರಾಂಪುರದಲ್ಲಿ ಇಲ್ಲಿಯವರೆಗೆ ಸಮಾಜವಾದಿ ಪಕ್ಷವೇ ಹೆಚ್ಚಿನ ಬಾರಿ ಗೆಲುವು ಸಾಧಿಸಿತ್ತು. ಆದ್ದರಿಂದ ಇದನ್ನು ಸಮಾಜವಾದಿ ಪಕ್ಷದ (ಎಸ್​ಪಿ) ಭದ್ರಕೋಟೆ ಎಂದೇ ಪರಿಗಣಿಸಲಾಗಿತ್ತು. ಇದೀಗ ಬಿಜೆಪಿಯ ಘನಶ್ಯಾಂ ಸಿಂಗ್​ ಲೋಧಿಯವರು ಎಸ್ಪಿಯ ಆಸಿಂ ರಾಜಾ ಅವರನ್ನು 42 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದಾರೆ.
ಅಜಂಗಢದಲ್ಲಿ ಕೂಡ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ದಿನೇಶ್ ಲಾಲ್ ಯಾದವ್ ನಿರಾಹುವಾ ಅವರು ಮುನ್ನಡೆ ಸಾಧಿಸಿದ್ದಾರೆ. ಎಸ್‌ಪಿ ಅಭ್ಯರ್ಥಿ ಧರ್ಮೇಂದ್ರ ಯಾದವ್‌ಗಿಂತ ಇವರು ಮುಂದಿದ್ದಾರೆ.
ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ ಕಡಿಮೆ ಮತದಾನದ ಪ್ರಮಾಣವು ರಾಮ್‌ಪುರ ಮತ್ತು ಅಜಂಗಢದಲ್ಲಿ ಲೋಕಸಭಾ ಉಪಚುನಾವಣೆಗಳಲ್ಲಿ ನಡೆದಿದೆ.
2019 ರ ಚುನಾವಣೆಯಲ್ಲಿ ಎಸ್​ಪಿ ಇವೆರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅಜಂಗಢದಲ್ಲಿ ಮತ್ತು ಹಿರಿಯ ನಾಯಕ ಅಜಂ ಖಾನ್ ರಾಂಪುರದಲ್ಲಿ ಗೆದ್ದಿದ್ದರು. ಇತ್ತೀಚೆಗಿನ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ನಂತರ ಅವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಉಪಚುನಾವಣೆ ನಡೆದಿತ್ತು.
ಪಂಜಾಬ್ ಉಪ ಚುನಾವಣೆ:​ ಸಿಎಂ ಮಾನ್ ಭದ್ರಕೋಟೆ ಭೇದಿಸಿದ ಶಿರೋಮಣಿ: ಆಪ್​ಗೆ ಭಾರಿ ಮುಖಭಂಗ

ಗಾಯಕ ಕಿಶೋರ್​ ಕುಮಾರ್​ರನ್ನೇ ಬ್ಯಾನ್​ ಮಾಡಿದ್ರು, ಆಮೇಲೆ ಆಗಿದ್ದು… ತುರ್ತು ಪರಿಸ್ಥಿತಿಯ ಕರಾಳ ದಿನ ನೆನಪಿಸಿದ ಪ್ರಧಾನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two − one =
Remember me
