ಕೋಲ್ಕತಾ:ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಾವು ಏರುತ್ತಲೇ ಸಾಗಿದೆ. ನಿನ್ನೆಯಷ್ಟೇ ಬಿಜೆಪಿ ಅಭ್ಯರ್ಥಿ ಅಶೋಕ್ ದಿಂಡಾ ಅವರ ಮೇಲೆ ಗಂಭೀರವಾಗಿ ಹಲ್ಲೆ ನಡೆದಿದೆ. ಅದರ ಬೆನ್ನಲ್ಲೇ ಇದೀಗ ಬೆಜೆಪಿ ಮುಖಂಡ ಉದಯ್​ ದುಬೆ ನೇಣುಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ!
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಪರ್ಧಿಸುತ್ತಿರುವ ನಂದಿಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಂಗಾಳದಲ್ಲಿ ನಡೆದ ಎರಡನೇ ಹಂತದ ವಿಧಾನಸಭಾ ಚುನಾವಣೆಯಲ್ಲಿ ಭಾಗವಹಿಸಿದ್ದ ಬೆನ್ನಲ್ಲೇ ನಿಗೂಢವಾಗಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದವರು ಬಿಜೆಪಿ ಮುಖಂಡ ಉದಯ್​ ದುಬೆ.
ಇದು ಆತ್ಮಹತ್ಯೆ ಎಂದು ಹೇಳಲಾಗುತ್ತಿದ್ದರೂ ಸಾವಿಗೆ ನಿಖರ ಕಾರಣ ಇನ್ನೂ ಬಹಿರಂಗಗೊಳ್ಳಬೇಕಿದೆ. ಈಚೆಗೆ ಬಿಜೆಪಿ ಸೇರಿದ್ದ ನಟ ಮಿಥುನ್​ ಚಕ್ರವರ್ತಿಯವರ ಜತೆ ರೋಡ್​ ಷೋನಲ್ಲಿ ದುಬೆ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅವರಿಗೆ ತೃಣಮೂಲ ಕಾಂಗ್ರೆಸ್​ ಕಾರ್ಯಕರ್ತರಿಂದ ಬೆದರಿಕೆ ಬಂದಿತ್ತು ಎನ್ನಲಾಗಿದೆ.
ಈ ಬೆದರಿಕೆಯಿಂದಾಗಿ ದುಬೆಯವರು ತೀವ್ರ ಒತ್ತಡದಲ್ಲಿದ್ದರು. ಈ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂದಿಗ್ರಾಮದ ಭೆಕುಟಿಯಾ ಪ್ರದೇಶದ ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಮಾರ್ಚ್ 30 ರಂದು ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಅವರನ್ನು ಬೆಂಬಲಿಸಿ ಮಿಥುನ್ ಚಕ್ರವರ್ತಿ ಅವರು ನಂದಿಗ್ರಾಮದಲ್ಲಿ ಪ್ರಚಾರ ಕಾರ್ಯ ಕೈಗೊಂಡಿದ್ದರು. ಸುವೇಂದು ಅಧಿಕಾರಿಯವರು ಟಿಎಂಸಿಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಈ ರೋಡ್​ ಷೋನಲ್ಲಿ ದುಬೆ ಭಾಗವಹಿಸಿದ್ದರು.
ನಂದಿಗ್ರಾಮಕ್ಕೆ ಪ್ರಚಾರ ಕಾರ್ಯ ಕೈಗೊಳ್ಳಬೇಕಿದ್ದ ಮಮತಾ ಬ್ಯಾನರ್ಜಿಯವರು ಈ ಸಾವಿನ ಹಿನ್ನೆಲೆಯಲ್ಲಿ ಪ್ರವಾಸವನ್ನು ಕುಂಠಿತಗೊಳಿಸಿದ್ದಾರೆ.
ಮುಖ್ಯಮಂತ್ರಿಯನ್ನು ಕಟ್ಟಿಹಾಕಲು ನಡೀತಿದೆ ಕೈ ನಾಯಕರ ಮಹತ್ವದ ಸಭೆ!

ಜಿಲ್ಲಾ ನ್ಯಾಯಾಧೀಶರಿಗೆ, ಪದವೀಧರರಿಗೆ ಉತ್ತಮ ಅವಕಾಶ: ರಾಜ್ಯ ಗ್ರಾಹಕರ ಆಯೋಗದಲ್ಲಿ ನೇಮಕಾತಿ

ಬಿಯರ್​ ಪ್ರೇಮಿಗಳಿಗೆ ಇಲ್ಲಿ ಸಿಕ್ತು ಭರ್ಜರಿ ಗುಡ್​ನ್ಯೂಸ್​- ವಿದೇಶಿ ಮದ್ಯಪ್ರಿಯರಿಗೆ ಸರ್ಕಾರ ನೀಡಿತು ಶಾಕ್​!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 + twenty =
Remember me
