ಮುಂಬೈ :ಕರೊನಾ ಎರಡನೆಯ ಅಲೆ ಅದೆಷ್ಟು ಜೀವಗಳನ್ನು ಬಲಿಪಡೆಯುತ್ತಿವೆಯೋ ಲೆಕ್ಕವೇ ಇಲ್ಲ. ಇಡೀ ಕುಟುಂಬಕ್ಕೆ ಕುಟುಂಬವೇ ಬಲಿಯಾಗಿವೆ, ಅದೆಷ್ಟೋ ಕಂದಮ್ಮಗಳು ಅಪ್ಪ-ಅಮ್ಮ ಇಬ್ಬರನ್ನೂ ಕಳೆದುಕೊಂಡು ಅನಾಥವಾಗಿವೆ. ಈ ವೈರಸ್‌ ತಡೆಗಟ್ಟಲು ಸರ್ಕಾರಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ ಇದೀಗ ಸೋಂಕಿತರಲ್ಲಿ ಬ್ಲ್ಯಾಕ್‌ ಫಂಗಸ್‌ ಎನ್ನುವ ಸೋಂಕು ಕಾಣಿಸಿಕೊಳ್ಳಲು ಶುರುವಾಗಿದೆ.
ಇದಾಗಲೇ ಹಲವಾರು ಸೋಂಕಿತರಲ್ಲಿ ಹಾಗೂ ಸೋಂಕಿನಿಂದ ಚೇತರಿಸಿಕೊಂಡವರಲ್ಲಿಯೂ ಇದು ಕಾಣಿಸಿಕೊಳ್ಳುತ್ತಿದೆ. ಮುಂಬೈ ಒಂದರಲ್ಲಿಯೇ ಎರಡು ಸಾವಿರಕ್ಕೂ ಅಧಿಕ ಕರೊನಾ ಸೋಂಕಿತರಲ್ಲಿ ಇದು ಕಾಣಿಸಿಕೊಂಡಿದ್ದು, ಇದಾಗಲೇ ಇಬ್ಬರು ಬ್ಲ್ಯಾಕ್‌ ಫಂಗಸ್‌ಗೆ ಬಲಿಯಾಗಿದ್ದಾರೆ.
ಆದ್ದರಿಂದ ಈ ಸೋಂಕಿತರಿಗೆ ಪ್ರತ್ಯೇಕವಾದ ಆಸ್ಪತ್ರೆ ಮೀಸಲು ಇಡಲು ನಿರ್ಧರಿಸಿರುವ ಮಹಾರಾಷ್ಟ್ರ ಸರ್ಕಾರ, ವೈದ್ಯಕೀಯ ಕಾಲೇಜುಗಳಿಗೆ ಹೊಂದಿಕೊಂಡಿರುವ ಆಸ್ಪತ್ರೆಗಳನ್ನು ಬಳಸಲು ಮುಂದಾಗಿದೆ. ಈ ಕುರಿತು ಆರೋಗ್ಯ ಸಚಿವ ರಾಜೇಶ್ ಟೋಪ್ ಹೇಳಿದ್ದಾರೆ.
ಏನಿದು ಬ್ಲ್ಯಾಕ್‌ ಫಂಗಸ್‌:ಕಪ್ಪು ಶಿಲೀಂಧ್ರ ಎಂದೂ ಇದನ್ನು ಕರೆಯಲಾಗುತ್ತದೆ. ಇದರ ವೈಜ್ಞಾನಿಕ ಹೆಸರು ಮ್ಯೂಕಾರ್ಮೈಕಾಸಿಸ್. ಸೋಂಕಿತರಲ್ಲಿ ಹಾಗೂ ಚೇತರಿಸಿಕೊಳ್ಳುತ್ತಿರುವವರಲ್ಲಿ ತಲೆನೋವು, ಜ್ವರ, ಕಣ್ಣುಗಳ ಕೆಳಗೆ ನೋವು, ಮೂಗು ಅಥವಾ ಸೈನಸ್ ದಟ್ಟಣೆ ಮತ್ತು ಭಾಗಶಃ ದೃಷ್ಟಿ ನಷ್ಟ ಉಂಟಾಗುತ್ತವೆ. ಇದು ತಗುಲಿದೆ ಶೇ 50ರಷ್ಟು ಮಂದಿ ಮೃತಪಡುವ ಸಾಧ್ಯತೆ ಇದೆ ಎಂದು ವೈದ್ಯರು ಹೇಳಿದ್ದಾರೆ.
ಕಂಗೆಡಿಸಿರುವ ಬ್ಲ್ಯಾಕ್‌ ಫಂಗಸ್‌- ಎರಡು ದಿನಗಳಲ್ಲಿ ವರದಿ, 2480 ವೈದ್ಯರ ನೇಮಕ

ಹಿಂದೆ ಮುಂದೆ ಯೋಚ್ನೆ ಮಾಡ್ದೇ ಮೆಸೇಜ್‌ ಫಾರ್ವರ್ಡ್‌ ಮಾಡ್‌ತಿದ್ರೆ ಅಷ್ಟೇ… ಕಮಿಷನರ್‌ ಏನು ಹೇಳಿದ್ದಾರೆ ನೋಡಿ…

ಸರಿಗಮಪ ಖ್ಯಾತಿಯ ಸಿಂಗರ್ ಸುಬ್ರಮಣಿ ಪತ್ನಿ ಸಾವಿಗೆ ಬಿಗ್‌ ಟ್ವಿಸ್ಟ್‌- ಮೃತಪಟ್ಟಿರೋದು ಕರೊನಾದಿಂದ ಅಲ್ಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
