ಮುಂಬೈ:ಗಣೇಶೋತ್ಸವದ ಸಂಭ್ರಮ ಎಂದಾಕ್ಷಣ ನೆನಪಿಗೆ ಬರುವುದು ಮಹಾರಾಷ್ಟ್ರ. ಅದರಲ್ಲಿಯೂ ಮುಂಬೈನಲ್ಲಿ ಗಣೇಶೋತ್ಸವ ಭರ್ಜರಿಯಾಗಿ, ಅದ್ಧೂರಿಯಾಗಿ ನಡೆಯುತ್ತದೆ. ಇನ್ನೇನು ಹಬ್ಬಕ್ಕೆ 10 ದಿನಗಳು ಬಾಕಿ ಇವೆ. ಇದರ ನಡುವೆಯೇ ಮಹಾರಾಷ್ಟ್ರದ ಜನತೆ ಬೆಚ್ಚಿಬೀಳುವ ಘಟನೆ ನಡೆದಿದೆ. ಎರಡು ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಬೋಟ್​ಗಳಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ.
ಮಹಾರಾಷ್ಟ್ರದ ರಾಯಗಢದ ಸಮುದ್ರದಲ್ಲಿ ಹರಿಹರೇಶ್ವರ ಬೀಚ್ ಬಳಿ ಬೋಟ್‌ನಲ್ಲಿ ಎಕೆ-47 ರೈಫಲ್‌ಗಳು, ಕೆಲವು ಬುಲೆಟ್‌ಗಳು ಸೇರಿದಂತೆ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಮುಂಬೈನಿಂದ 190 ಕಿಮೀ ದೂರದಲ್ಲಿರುವ ಬೋಟ್‌ನಲ್ಲಿ ಸಿಬ್ಬಂದಿ ಇಲ್ಲದಿದ್ದ ಬೋಟ್‌ನ್ನು ಕೆಲವು ಸ್ಥಳೀಯರು ಗಮನಿಸಿ ಭದ್ರತಾ ಸಂಸ್ಥೆಗಳಿಗೆ ಮಾಹಿತಿ ನೀಡಿದ್ದಾರೆ. ಆಗ ಈ ಘಟನೆ ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕರಾವಳಿ ತೀರದಲ್ಲಿ ಹೈ ಅಲರ್ಟ್​ ಘೋಷಣೆ ಮಾಡಲಾಗಿದೆ. ಗಣೇಶೋತ್ಸವವನ್ನೇ ಟಾರ್ಗೆಟ್​ ಮಾಡಿಕೊಂಡು ವಿಧ್ವಂಸಕ ಕೃತ್ಯ ಎಸಗಲು ಮುಂದಾಗಿದ್ದರೆ ಎನ್ನುವ ಸಂದೇಹವನ್ನು ತನಿಖಾಧಿಕಾರಿಗಳು ವ್ಯಕ್ತಪಡಿಸುತ್ತಿದ್ದಾರೆ. ದೋಣಿ ಪತ್ತೆಯಾಗಿರುವ ಪ್ರದೇಶ ಮುಂಬೈನಿಂದ 200 ಕಿಲೋ ಮೀಟರ್​ ಹಾಗೂ ಪುಣೆಯಿಂದ 170 ಕಿಲೋ ಮೀಟರ್ ದೂರದಲ್ಲಿದೆ. ಮಹಾರಾಷ್ಟ್ರದಲ್ಲಿ ಮುಂದಿನ ಕೆಲವು ದಿನಗಳಲ್ಲಿ ನಿರಂತರವಾಗಿ ಹಬ್ಬಗಳು ಬರಲಿದ್ದು ಇದರ ಬೆನ್ನಲ್ಲೇ ಘಟನೆ ನಡೆದಿರುವುದು ಸಾಕಷ್ಟು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.
ಘಟನೆಯ ಕುರಿತು ವಿಶೇಷ ತನಿಖೆ ನಡೆಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿಗೆ ಮನವಿ ಮಾಡಿರುವುದಾಗಿ ರಾಯಗಢ ಶಾಸಕಿ ಅದಿತಿ ತಟ್ಕರೆ ಹೇಳಿದ್ದಾರೆ. ಗಣೇಶೋತ್ಸವಕ್ಕೆ ಕೇವಲ 10 ದಿನಗಳು ಮಾತ್ರ ಇವೆ. ಲಕ್ಷಾಂತರ ಮಂದಿ ಮಹಾರಾಷ್ಟ್ರಕ್ಕೆ ಆಗಮಿಸುತ್ತಾರೆ. ಇಂಥ ಸಂದರ್ಭದಲ್ಲಿ ಇದು ನಡೆದಿರುವುದು ಆಘಾತಕಾರಿಯಾಗಿದೆ ಎಂದು ಅವರು ಹೇಳಿದ್ದಾರೆ.(ಏಜೆನ್ಸೀಸ್​)
ಸೌದಿಗೆ ಹಾರಿದ 3 ಮಕ್ಕಳ ತಾಯಿ: ನೊಂದ ಪತಿಯಿಂದ ಘೋರ ಕೃತ್ಯ, ಕಂದಮ್ಮಗಳಿಗೆ ಇದೆಂಥ ಅನ್ಯಾಯ!

ಎರಡು ಸಾವಿರ ರೂ.ಗೆ ಯುವತಿಯ ಜತೆ ಮಂಚಕ್ಕೆ ಹೋದ ಇನ್ಸ್​ಪೆಕ್ಟರ್​: ಪೊಲೀಸರ ಬಲೆಗೆ ಗಂಡ-ಹೆಂಡ್ತಿ, ಅಪ್ಪ!

VIDEO: ಮಣ್ಣಿನೊಳಗೆ ಕೈಹಾಕಿ ವಿಗ್ರಹ ತೆಗೆದ ಕಳ್ಳ ಸ್ವಾಮೀಜಿ- ನಿಧಿ ಆಸೆ ತೋರಿಸಿ ಹಾಸನದ ದಂಪತಿಗೆ ಪಂಗನಾಮ!

ರೇಪ್​ ಕೇಸ್​ನಲ್ಲಿ ಸಿಕ್ಕಿಬಿದ್ದ ಮಾಜಿ ಸಚಿವನಿಗೆ ರಕ್ಷಣೆ? ಹೈಕೋರ್ಟ್​ ಗರಂ- ಎಫ್​ಐಆರ್​ ದಾಖಲಿಸಲು ಆದೇಶ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 − eighteen =
Remember me
