ಜಮ್ಮು:ಮಧ್ಯರಾತ್ರಿ 1.45ರ ಸುಮಾರಿಗೆ ಜಮ್ಮುವಿನ ವಿಮಾನ ನಿಲ್ದಾಣದಲ್ಲಿ ಬಾಂಬ್‌ ಬ್ಲಾಸ್ಟ್‌ ಆಗಿದೆ.ವಾಯುನೆಲೆ ಸ್ಟೇಷನ್​​ ಒಳಗೆ, 5 ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದೆ.
ಭಾರತೀಯ ವಾಯುಪಡೆಯ ಮಾಧ್ಯಮ ಸಮನ್ವಯ ಕೇಂದ್ರ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ಸ್ಫೋಟದಿಂದ ಇಬ್ಬರು ಗಾಯಗೊಂಡಿದ್ದು, ಯಾರದ್ದೂ ಪ್ರಾಣ ಹಾನಿಯಾಗಿಲ್ಲ, ತೀವ್ರ ಭದ್ರತಾ ತಾಂತ್ರಿಕ ವಲಯದಲ್ಲಿ ಈ ಎರಡು ಸ್ಫೋಟಗಳು ನಡೆದಿವೆ. ಮೊದಲ ಸ್ಫೋಟ ಕಟ್ಟಡ ಚಾವಣಿಯನ್ನು ಸೀಳಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ವಿಧಿವಿಜ್ಞಾನ ತಂಡ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಲವೇ ಕ್ಷಣದಲ್ಲಿ ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರಿದಿದ್ದಾರೆ. ಪೊಲೀಸರು ಮತ್ತು ವಿಧಿ ವಿಜ್ಞಾನ ತಂಡ ಸ್ಥಳಕ್ಕಾಗಮಿಸಿದೆ. ಸ್ಫೋಟಕ್ಕೆ ಕಾರಣಗಳೇನು ಎಂದು ಇದುವರೆಗೆ ವರದಿಯಾಗಿಲ್ಲ.
ಜಮ್ಮು-ಕಾಶ್ಮೀರದ ಭದ್ರತೆಗೆ ಸಂಬಂಧಪಟ್ಟಂತೆ ಇತ್ತೀಚೆಗಷ್ಟೇ ಗೃಹ ಸಚಿವ ಅಮಿತ್​ ಷಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್​, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಸೇರಿದಂತೆ ಹಲ ಗಣ್ಯರು ಸಭೆ ನಡೆಸಿದ್ದರು. ಮುಂದಿನ ವರ್ಷ ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಸಿದ್ಧತೆ ಮಾಡುತ್ತಿದೆ.
ದಿನವೂ ಕನಸಲ್ಲಿ ಬಂದು ರೇಪ್‌: ಮಹಿಳೆ ದೂರು ಕೇಳಿ ಬೆಚ್ಚಿಬಿದ್ದ ಪೊಲೀಸರು- ಆಗಿದ್ದೇನು?

ಅಪಾಯಕಾರಿ ಚಾಲನೆ: ಪ್ರಿಯಾಂಕಾ ಗಾಂಧಿ ಪತಿ ವಾದ್ರಾಗೆ ದಂಡ ವಿಧಿಸಿದ ಪೊಲೀಸರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 1 =
Remember me
