ಮೊಹಾಲಿ (ಪಂಜಾಬ್‌):ಪಂಜಾಬ್‌ನ ಪೊಲೀಸ್‌ ಠಾಣೆಯ ಒಳಗೆ ಬಾಂಬ್‌ ಬ್ಲಾಸ್ಟ್‌ ಆಗಿರುವ ಭಯಾನಕ ಕೃತ್ಯ ನಡೆದಿದೆ. ಮೊಹಾಲಿಯಲ್ಲಿರುವ ಪಂಜಾಬ್ ಪೊಲೀಸ್ ಇಂಟೆಲಿಜೆನ್ಸ್ ಹೆಟ್ ಕ್ವಾಟರ್ಸ್​ನಲ್ಲಿ ಈ ಘಟನೆ ನಡೆದಿದೆ. ರಾಕೆಟ್ ಗ್ರೆನೇಟ್ ಒಳತೂರಿ ಬಂದಿದ್ದು ಸ್ಫೋಟ ನಡೆದಿದೆ.
ಅದೃಷ್ಟವಶಾತ್‌ ಯಾರಿಗೂ ಗಾಯಗಳಾಗಿಲ್ಲ. ಈ ಘಟನೆಯ ನಂತರ ಪಂಜಾಬ್‌ನಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿಯನ್ನೂ ಕರೆಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಹಲವಾರು ಮುಖಂಡರು ಟ್ವೀಟ್‌ ಮೂಲಕ ಖಂಡನೆ ವ್ಯಕ್ತಪಡಿಸಿದ್ದಾರೆ. ಪಂಜಾಬ್‌ ಮುಖ್ಯಮಂತ್ರಿ ಭಗವಂತ ಮಾನ್ ಟ್ವೀಟ್‌ ಮಾಡಿದ್ದು, ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂದಿದ್ದಾರೆ. ಪೊಲೀಸರು ಮೊಹಾಲಿಯಲ್ಲಿ ನಡೆದ ಸ್ಫೋಟದ ತನಿಖೆ ನಡೆಸುತ್ತಿದ್ದಾರೆ. ನಮ್ಮ ಪಂಜಾಬ್‌ನ ವಾತಾವರಣವನ್ನು ಹಾಳು ಮಾಡಲು ಪ್ರಯತ್ನಿಸುವವರನ್ನು ಬಿಡಲಾಗುವುದಿಲ್ಲ ಎಂದಿದ್ದಾರೆ. ಈ ಕುರಿತು ಚರ್ಚೆಗೆ ತಮ್ಮ ನಿವಾಸದಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆಗೆ ಕರೆದಿದ್ದಾರೆ.
ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಕೂಡ ಮಾನ್ ಅವರ ಟ್ವೀಟ್ ಅನ್ನು ಹಂಚಿಕೊಂಡಿದ್ದು, ಪಂಜಾಬ್‌ನ ಶಾಂತಿಯನ್ನು ಕದಡಲು ಬಯಸುವವರ ಹೇಡಿತನದ ಕೃತ್ಯವಾಗಿದೆ. ಆಮ್ ಆದ್ಮಿ ಪಕ್ಷದ ಪಂಜಾಬ್ ಸರ್ಕಾರ ಆ ಜನರ ಆಶಯಗಳನ್ನು ಈಡೇರಿಸಲು ಬಿಡುವುದಿಲ್ಲ. ಪಂಜಾಬ್‌ನ ಎಲ್ಲಾ ಜನರ ಸಹಕಾರದೊಂದಿಗೆ ಎಲ್ಲಾ ಸಂದರ್ಭಗಳಲ್ಲಿ ಶಾಂತಿಯನ್ನು ಕಾಪಾಡಿಕೊಳ್ಳಲಾಗುವುದು ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದಿದ್ದಾರೆ.
ಹೊತ್ತಿ ಉರೀತಿದೆ ಶ್ರೀಲಂಕಾ, ತುತ್ತು ಅನ್ನಕ್ಕೂ ಪರದಾಟ: ಸುಟ್ಟು ಕರಕಲಾಯ್ತು ಪ್ರಧಾನಿ ಮನೆ!

ರಾತ್ರಿ ಸಾಯ್ತಾನೆ, ಬೆಳಗ್ಗೆ ಬರ್ತಾನೆ… ಬಲಿ ಕೊಟ್ರೂ ಬದಕ್ತಾನೆ! ಚಾಮರಾಜನಗರದಲ್ಲಿ ನಡೀತಿದೆ ಈ ಆಚರಣೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
