ಮುಂಬೈ:ನಿನ್ನೆ ಮಧ್ಯರಾತ್ರಿ ಕಟ್ಟಡವೊಂದು ಕುಸಿದುಬಿದ್ದು, 11 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮಲಾಡ್ ವೆಸ್ಟ್‌ನ ನ್ಯೂ ಕಲೆಕ್ಟರ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಹಲವರು ಅವಶೇಷಗಳ ಅಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ. ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ.ಸದ್ಯ ಗಾಯಾಳುಗಳನ್ನು ಹತ್ತಿರದ ಬಿಡಿಬಿಎ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಟ್ಟೂ 15 ಮಂದಿಯನ್ನು ರಕ್ಷಿಸಲಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಟ್ಟಡ ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ಪತ್ತೆ ಹಚ್ಚುವ ಕಾರ್ಯ ಮುಂದುವರೆಸಿದ್ದೇವೆ. ಇನ್ನೂ ಹೆಚ್ಚಿನ ಸಾವುನೋವು ಸಂಭವಿಸಿರುವ ಸಾಧ್ಯತೆ ಇದೆ ಎಂದು ಉಪ ಪೊಲೀಸ್ ಆಯುಕ್ತ ವಿಶಾಲ್ ಠಾಕೂರ್ ಮಾಹಿತಿ ನೀಡಿದ್ದಾರೆ.
ಕೆಲ ದಿನಗಳಲ್ಲಿ ಇಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಟ್ಟಡ ಕುಸಿದಿರುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದವು. ಈ ಕಟ್ಟಡ ಕೂಡ ಅಂಥದ್ದೇ ಒಂದು ಜಾಗದಲ್ಲಿ ಇದೆ ಎನ್ನಲಾಗಿದೆ.
ದೇಹ ಪೂರ್ತಿ ತಿರುಗಿಸಿ ರಾಖಿಸಾವಂತ್‌ ವ್ಯಾಯಾಮ: ವಿಡಿಯೋ ಶೇರ್- ಅಲ್ಲೂ ಟ್ರೋಲ್‌!

ನೌಕರರ ಕ್ಷೇಮಕ್ಕೆ ಕೇಂದ್ರದ ಕಾಳಜಿ: ವಿಶೇಷ ರಜಾ ಸೌಲಭ್ಯ- ಕಳೆದ ವರ್ಷದಿಂದಲೇ ಅನ್ವಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 8 =
Remember me
