ಅಲಿರಾಜ್‌ಪುರ (ಮಧ್ಯಪ್ರದೇಶ):ಮಧ್ಯಪ್ರದೇಶದ ಅಲಿರಾಜ್‌ಪುರಕ್ಕೆ ತೆರಳುತ್ತಿದ್ದ ಬಸ್‌ವೊಂದು ನದಿಗೆ ಉರುಳಿ ಬಿದ್ದು ಮೂವರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ 28 ಮಂದಿ ಗಾಯಗೊಂಡಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ನಸುಕಿನ ವೇಳೆ ಈ ಘಟನೆ ಸಂಭವಿಸಿದೆ. ಗುಜರಾತ್‌ನ ಛೋಟಾ ಉದೇಪುರ್‌ನಿಂದ ಇವರೆಲ್ಲಾ ತೆರಳುತ್ತಿದ್ದರು. ಬಸ್ಸಿನ ಚಾಲಕ ನಿದ್ದೆ ಮಾಡಿದ್ದೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಮೃತಪಟ್ಟವರನ್ನು ಒಂದು ವರ್ಷದ ಮಗು, ಕೈಲಾಶ್ ಮೇದಾ (48) ಮತ್ತು ಮೀರಾಬಾಯಿ (46) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಗುಜರಾತ್‌ ಮೂಲದವರು.
ಜಿಲ್ಲಾ ಕೇಂದ್ರದಿಂದ ಸುಮಾರು 15 ಕಿ.ಮೀ ದೂರದಲ್ಲಿರುವ ಚಂದ್‌ಪುರ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ಬಸ್​ ಮೇಲ್​ಖೋದ್ರಾ ನದಿಯ ಸೇತುವೆ ಮೇಲೆ ಹೋಗುತ್ತಿದ್ದಾಗ ಬಸ್ ಚಲಾಯಿಸುತ್ತಿದ್ದ ವೇಳೆ ಚಾಲಕ ನಿದ್ರೆಗೆ ಜಾರಿದ್ದಾನೆ. ನಿಯಂತ್ರಣ ತಪ್ಪಿದ ಬಸ್‌ ನದಿಗೆ ಉರುಳಿಬಿದ್ದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.
ಎಸ್​ಪಿ ಮನೋಜ್​ಕುಮಾರ್​ ಹಾಗೂ ಜಿಲ್ಲಾಧಿಕಾರಿ ಮನೋಜ್ ಪುಷ್ಪ್ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ನೆರವು ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ.
VIDEO: ವಿಜಯನಗರ ಕ್ರೀಡಾಂಗಣದಲ್ಲಿ ಪೊಲೀಸರಿಂದ ‘ಟಿಣಿಂಗ, ಮಿಣಿಂಗ ಟಿಶ್ಯಾ’- ಖುಷಿಯ ಮೂಡ್‌ನಲ್ಲಿ ಖಾಕಿಪಡೆ

ಪ್ರಾಣಕ್ಕೆ ಕುತ್ತಾಯ್ತು ಪರೋಪಕಾರ! ಆಡಿನ ಮರಿ ರಕ್ಷಿಸಲು ಹೋಗಿ ಜೀವ ಕಳೆದುಕೊಂಡ ಮಂಗಳೂರು ಯುವಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
