ಗುಡಮಲಾನಿ​ (ರಾಜಸ್ಥಾನ):ಕಾರು ಮತ್ತು ಟ್ರಕ್​​ ಮಧ್ಯೆ ನಡೆದಿರುವ ಭೀಕರ ಅಪಘಾತದಲ್ಲಿ ಒಂದು ಕುಟುಂಬದ ಎಂಟು ಮಂದಿ ಮೃತಪಟ್ಟಿರುವ ಘಟನೆ ರಾಜಸ್ಥಾನದ ಗುಡಮಲಾನಿ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಒಂದೇ ಕುಟುಂಬದವರು ನಿನ್ನೆ ರಾತ್ರಿ ಎಸ್‌ಯುವಿ ಕಾರಿನಲ್ಲಿ ಗುಡಮಲಾನಿಯಲ್ಲಿ ನಡೆಯುತ್ತಿದ್ದ ಮದುವೆಗೆ ತೆರಳಿದ್ದರು. ಈ ವೇಳೆ ಮಾರ್ಗಮಧ್ಯೆ ಕಾರು ಮತ್ತು ಟ್ರಕ್ ನಡುವೆ ಅಪಘಾತ ಸಂಭವಿಸಿದೆ. ಕಾರಿಗೆ ಟ್ರಕ್​ ಗುದ್ದಿರುವ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದ್ದು, 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ 4 ಮಂದಿಯನ್ನು ಗುಡಮಲಾನಿ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಚಿಕಿತ್ಸೆ ವೇಳೆ ಇಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದೆ.
ಕುರಿತು ಮಾಹಿತಿ ಪಡೆದ ಗುಡಮಲಾನಿ ಪೊಲೀಸರು ಮತ್ತು ಆಡಳಿತಾಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಮೃತದೇಹಗಳನ್ನು ವಶಕ್ಕೆ ಪಡೆದ ಪೊಲೀಸರು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು. ಈ ಘಟನೆ ಕುರಿತು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಅಭಿಮಾನಿಗಳಿಂದ ಇದೇಕೆ ಅತಿರೇಕ? ಅಪ್ಪು ಪುತ್ಥಳಿ ಅನಾವರಣದಂದು ಕುರ್ಚಿಗಳು ಪೀಸ್‌ ಪೀಸ್‌!

VIDEO: ಗರ್ಲ್​ಫ್ರೆಂಡ್​ ಜತೆ ಇದ್ದದ್ದೇಕೆ? ಯುವತಿ ಜತೆ ಸಿಕ್ಕಿಬಿದ್ದ ಮಾಜಿ ಸಚಿವ ಬಿಚ್ಚಿಟ್ಟರು ಪತ್ನಿಯ ಸೀಕ್ರೆಟ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + one =
Remember me
