ನವದೆಹಲಿ:ಇಂದು ನಸುಕಿನಲ್ಲಿ ಆವರಿಸಿದ್ದ ದಟ್ಟ ಮಂಜಿನಿಂದಾಗಿ ಮೊರಾದಾಬಾದ್-ಆಗ್ರಾ ಹೆದ್ದಾರಿಯಲ್ಲಿ ಟ್ರಕ್​ ಮತ್ತು ಬಸ್​ ಮುಖಾಮುಖು ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮೊರದಾಬಾದ್-ಆಗ್ರಾ ಹೆದ್ದಾರಿಯಲ್ಲಿ ನಡೆದಿದೆ.
ಕುಂಡರ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಮಿನಿ ಬಸ್ ಮತ್ತು ಕ್ಯಾಂಟರ್ ಟ್ರಕ್ ಮಧ್ಯೆ ಢಿಕ್ಕಿ ಸಂಭವಿಸಿದೆ. ಮೂರು ವಾಹನಗಳು ಪರಸ್ಪರ ಢಿಕ್ಕಿ ಹೊಡೆದಿವೆ. ಓವರ್ ಟೇಕ್ ಮಾಡುವ ಭರದಲ್ಲಿ ಈ ಘಟನೆ ಸಂಭವಿಸಿರುವುದಾಗಿ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.ಘಟನೆಯ ಸ್ಥಳದಿಂದ ವಾಹನಗಳನ್ನು ತೆರವುಗೊಳಿಸಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸುವ ಕೆಲಸ ಮುಗಿದಿದ್ದು ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಆಗಮಿಸಿ ಪರಿಶೀಲನೆ ನಡೆಸುತ್ತಿದೆ.
ಜಿಲ್ಲಾ ಮ್ಯಾಜಿಸ್ಟ್ರೇಟ್, ಎಸ್ ಪಿ, ಸಿಎಂಒ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಗಳು ಸದ್ಯ ನಡೆಯುತ್ತಿವೆ.
#UPDATE: Death toll in Moradabad road accident rises to 10, around 10 injured. SSP says, "Forensic team is here, resuce almost complete. 3 vehicles collided with each other. Eyewitnesses tell us that it was a case of overtaking."
Accident took place at Moradabad–Agra highway.pic.twitter.com/6UNK1xLSke
— ANI UP/Uttarakhand (@ANINewsUP)January 30, 2021

ಈ ನಡುವೆಯೇ, ಘಟನೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಈ ಘಟನೆ ಬಗ್ಗೆ ತನಿಖೆಗೆ ಆದೇಶಿಸಿ, ಸಂತ್ರಸ್ತರಿಗೆ ನೆರವು ಹಾಗೂ ಆರೋಗ್ಯ ಸೇವೆ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜತೆಗೆ, ಮೃತರ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದ್ದಾರೆ.
ಕಳೆದ ಮಂಗಳವಾರವಷ್ಟೇ ಭಡೋಹಿಯ ಗೋಪಿಗಂಜ್ ಪ್ರದೇಶದಲ್ಲಿ ನಿಂತಿದ್ದ ಟ್ರಕ್ ಗೆ ಆಂಬುಲೆನ್ಸ್ ಡಿಕ್ಕಿ ಹೊಡೆದು ಐವರು ಮೃತಪಟ್ಟಿದ್ದರು. ನಸುಕಿನಲ್ಲಿ ದಟ್ಟ ಮಂಜು ಆವರಿಸುವ ಕಾರಣ, ಎದುರು ಬರುತ್ತಿರುವ ವಾಹನಗಳು ಕಾಣಿಸುವುದಿಲ್ಲ. ಇದರ ಜತೆಗೆ ಓವರ್​ಟೇಕ್​ ಮಾಡುವುದು ಅಥವಾ ಅತಿ ವೇಗದಲ್ಲಿ ಚಾಲನೆ ಮಾಡುವುದರಿಂದ ಇಂಥ ಅವಘಡಗಳು ಸಂಭವಿಸುತ್ತಿವೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರತಿಭಟನೆ ಬೆನ್ನಲ್ಲೇ ದೆಹಲಿಯಲ್ಲಿ ಸ್ಫೋಟ: ಆಟೋದಲ್ಲಿ ಬಂದು ಕೃತ್ಯ! ಸಿಸಿಟಿವಿಯಲ್ಲಿ ಸಿಕ್ತು ಸುಳಿವು

ಅವನಿಗೆ ಅರ್ಪಿಸಿಕೊಂಡಿರುವೆ, ಮನೆಯವರಿಗೆ ತಿಳಿದರೆ ಕೊಂದೇ ಬಿಡುತ್ತಾರೆ, ಓಡಿ ಹೋಗಲೆ?

ವೀರ್ಯ ಉತ್ಪತ್ತಿಯಾಗದಿದ್ದರೆ ವೆರಿಕೋಸ್​ ಕೂಡ ಕಾರಣವಾಗಿರಬಹುದು, ನೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − one =
Remember me
