ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿ.ಎ.ಎ) ವಿರೋಧಿಸಿ ಪ್ರತಿಭಟನೆಯ ಹೆಸರಿನಲ್ಲಿ ಪ್ರಚೋದಾತ್ಮಕ ಹೇಳಿಕೆ ನೀಡಿರುವ ಆರೋಪದ ಮೇಲೆ ಬಂಧಿಯಾಗಿರುವ ಸಾಮಾಜಿಕ ಕಾರ್ಯಕರ್ತ ಅಖಿಲ್ ಗೊಗೋಯ್ ಅವರಿಗೆ ಜಾಮೀನು ನೀಡಲು ಸುಪ್ರೀಂಕೋರ್ಟ್​ ನಿರಾಕರಿಸಿದೆ.
ಅಸ್ಸಾಂನಲ್ಲಿ ನಡೆದ ಪ್ರತಿಭಟನೆಯಲ್ಲಿ ಇವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಜಾಮೀನು ನೀಡಲಾಗದ ಎಂದು ನ್ಯಾಯಮೂರ್ತಿಗಳಾದ ಎನ್.ವಿ.ರಮಣ, ಸೂರ್ಯ ಕಾಂತ್ ಮತ್ತು ಅನಿರುದ್ಧ ಬೋಸ್ ಅವರಿದ್ದ ಪೀಠ ಹೇಳಿದೆ.
ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಇವರ ಪಾತ್ರವಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) ಆರೋಪಿಸಿತ್ತು. ಈ ಆರೋಪದ ಮೇಲೆ ಇವರನ್ನು ಬಂಧಿಸಲಾಗಿದೆ. 2019ರ ಡಿಸೆಂಬರ್​ನಿಂದ ಇವರು ಬಂಧನದಲ್ಲಿದ್ದಾರೆ. ಜಾಮೀನು ಕೋರಿ ಇವರು ಈ ಹಿಂದೆ ಗೋಹಾಟಿ ಹೈಕೋರ್ಟ್​ ಮೊರೆ ಹೋಗಿದ್ದರು.
ಆದರೆ ಇದು ಗಂಭೀರವಾಗಿರುವ ಆರೋಪ ಇರುವ ಹಿನ್ನೆಲೆಯಲ್ಲಿ ಜಾಮೀನು ನೀಡಲಾಗದು ಎಂದು ಹೈಕೋರ್ಟ್​ ಹೇಳಿತ್ತು. ಇದನ್ನು ಅವರು ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ಈಗಲೂ ಅವರಿಗೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.
ಕೆಲವು ಕಡೆಗಳಲ್ಲಿ ಪ್ರತಿಭಟನೆ ಹಿಂಸೆಯ ರೂಪ ಪಡೆದದ್ದು ನಿಜ. ಪ್ರತಿಭಟನೆಯ ಹೆಸರಿನಲ್ಲಿ ಕೆಲವು ಕಿಡಿಗೇಡಿಗಳು ಕೃತ್ಯ ಮಾಡಿದ್ದೂ ನಿಜ. ಆದರೆ ಇದರಲ್ಲಿ ಗೊಗೋಯ್​ ಅವರ ಪಾತ್ರವಿಲ್ಲ. ಇವರನ್ನು ವಿನಾಕಾರಣ ಬಂಧಿಸಲಾಗಿದೆ ಎಂದು ಅವರ ಪರ ವಕೀಲರು ವಾದಿಸಿದರು. ಆದರೆ ಈ ಹಂತದಲ್ಲಿ ಈ ಅರ್ಜಿಯನ್ನು ಮಾನ್ಯ ಮಾಡಲು ಆಗದು ಎಂದು ಕೋರ್ಟ್​ ಹೇಳಿದೆ.
ರೈತ ಮುಖಂಡರಿಂದ ಜೀವಕ್ಕೆ ಅಪಾಯವಿದೆ- ಹಿಂಸಾಚಾರದ ಕುರಿತು ನಟ ದೀಪ್​ ಸಿಧು ಹೇಳಿರುವ ಮಾಹಿತಿ ಇಲ್ಲಿದೆ…

ರೈತರ ವಿಷಯದಲ್ಲಿ ಮೋದಿ ವಿರುದ್ಧ ಹೇಳಿಕೆ ನೀಡಿದ್ದ ಕೆನಡಾ ಪ್ರಧಾನಿ ಮಾಡಿಕೊಂಡರೊಂದು ಕಳಕಳಿಯ ಮನವಿ…

ಕಾರಿನ ಹ್ಯಾಂಡ್​ಬ್ರೇಕ್​ ಹಾಕದೇ ಮೂತ್ರವಿಸರ್ಜನೆಗೆ ಹೋದ ಚಾಲಕ- ನಾಲ್ವರ ದುರ್ಮರಣ

ಮುದ್ದು ಕಂದನ ಜೀವ ಉಳಿಸಲು ₹6 ಕೋಟಿ ಜಿಎಸ್​ಟಿ ಮನ್ನಾ ಮಾಡಿದ ಪ್ರಧಾನಿ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
