ನವದೆಹಲಿ:ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಅವಕಾಶ ನೀಡಬೇಕು ಎಂದು ಕೆನಡಾ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡಿಯೋ ಹೇಳಿದ್ದು ಇದೀಗ ಭಾರತದಲ್ಲಿ ಸಂಚಲನ ಮೂಡಿಸಿದೆ.
ಪ್ರತಿಭಟಿಸುವ ಹಕ್ಕನ್ನು ಜನರಿಗೆ ನೀಡಬೇಕು. ಶಾಂತಿಯುತವಾಗಿ ಪ್ರತಿಭಟನೆ ನಡೆಯಬೇಕು. ಭಾರತದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಅವರಿಗೆ ಅವಕಾಶ ನೀಡಬೇಕು ಎಂದು ಪ್ರಧಾನಿ ಹೇಳಿರುವ ಮಾತು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗುತ್ತಿದ್ದು, ಹಲವಾರು ಮಂದಿ ಕೆನಡಾ ಪ್ರಧಾನಿಯಲ್ಲಿ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.
ಮೊದಲು ಈ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಭಾರತ, ಪ್ರಜಾಪ್ರಭುತ್ವ ರಾಷ್ಟ್ರದ ಆಂತರಿಕ ವ್ಯವಹಾರಗಳಿಗೆ ಸಂಬಂಧಿಸಿದ್ದಾಗಿರುವ ಕಾರಣ, ಇದಕ್ಕೆ ಒಂದು ವಿಷಯದ ಬಗ್ಗೆ ಅರ್ಧಂಬರ್ಧ ತಿಳಿದು ಈ ರೀತಿ ಹೇಳಿಕೆ ನೀಡುವುದು ಸಮಂಜಸವಲ್ಲ ಎಂದಿದೆ.
ರಾಜಕೀಯ ಉದ್ದೇಶಗಳಿಗಾಗಿ ರಾಜತಾಂತ್ರಿಕ ಸಂಭಾಷಣೆಗಳನ್ನು ಬಳಸಿಕೊಳ್ಳಬಾರದು. ಕೆನಡಾ ಪ್ರಧಾನಿ ಈ ರೀತಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾತ್ಸವ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆನಡಾ ಪಿಎಂ ಹೇಳಿದ್ದೇನು:ಭಾರತದ ರೈತರ ಪ್ರತಿಭಟನೆ ಮಧ್ಯೆ ಪ್ರವೇಶಿಸಿದ ಕೆನಡಾ ಪ್ರಧಾನಿ
ರಾಜಕೀಯ ಉದ್ದೇಶಗಳಿಗಾಗಿ ರಾಜತಾಂತ್ರಿಕ ಸಂಭಾಷಣೆಗಳನ್ನು ತಪ್ಪಾಗಿ ನಿರೂಪಿಸುವುದು ಸರಿಯಲ್ಲ. ಭಾರತ ಒಂದು ಪ್ರಜಾತಾಂತ್ರಿಕ ದೇಶವಾಗಿದ್ದು, ಇಲ್ಲಿ ಸರ್ಕಾರಗಳೊಂದಿಗೆ ಸಮಾಜದ ವಿವಿಧ ವರ್ಗಗಳ ಭಿನ್ನಾಭಿಪ್ರಾಯ ಸಹಜ ಪ್ರಕ್ರಿಯೆ. ರೈತರ ಪ್ರತಿಭಟನೆ ಕೂಡ ಇಂಥದ್ದೇ ಭಿನ್ನ ನಿಲುವಿನ ಭಾಗವಾಗಿದ್ದು, ಭಾರತ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಶಕ್ತವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಟ್ರೂಡೊ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶಿವಸೇನೆ ಸಂಸದರಾದ ಪ್ರಿಯಾಂಕಾ ಚತುರ್ವೇದಿ “ರೈತರ ಬಗ್ಗೆ ನಿಮ್ಮ ಕಾಳಜಿಯಿಂದ ಖುಷಿಯಾಗಿದೆ. ಆದರೆ ಭಾರತದ ಆಂತರಿಕ ಸಮಸ್ಯೆ ಮತ್ತೊಂದು ರಾಷ್ಟ್ರದ ರಾಜಕೀಯಕ್ಕೆ ಮೇವು ಅಲ್ಲ. ನಾವು ಯಾವಾಗಲೂ ಇತರ ರಾಷ್ಟ್ರಗಳ ಸೌಜನ್ಯವನ್ನು ಗೌರವಿಸುತ್ತೇವೆ” ಎಂದು ಹೇಳಿದರು. ಇದೇ ವೇಳೆ ಈ ಬಿಕ್ಕಟ್ಟನ್ನು ಆದಷ್ಟು ಬೇಗ ಪರಿಹರಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವರು ಮನವಿ ಮಾಡಿದರು. ಬೇರೆ ದೇಶಗಳಿಗೆ ಈ ವಿಷಯ ಆಹಾರ ಆಗುವುದು ಬೇಡ ಎಂದಿದ್ದಾರೆ.
ಅದೇ ಇನ್ನೊಂದೆಡೆ ಕೆನಡಾ ಪ್ರಧಾನಿ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಟ್ರೋಲ್​ ಆಗುತ್ತಿತ್ತು ಭಾರತದ ಆಂತರಿಕ ವಿಚಾರಗಳಲ್ಲಿ ನೀವ್ಯಾಕೆ ಮೂಗು ತೂರಿಸುತ್ತಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ನಿಮ್ಮ ದೇಶದಲ್ಲಿಯೇ ಮಾಡುವುದು ಬೇಕಾದಷ್ಟಿದೆ. ಮೊದಲು ಅವುಗಳನ್ನು ಸರಿ ಮಾಡಿ, ಆಮೇಲೆ ಬೇರೆ ದೇಶದಲ್ಲಿ ಏನಾಗುತ್ತಿದೆ ಎಂಬ ಬಗ್ಗೆ ಟೀಕೆ ಮಾಡಿ ಎಂದು ಕಮೆಂಟಿಗರು ಟ್ರೋಲ್​ ಮಾಡುತ್ತಿದ್ದಾರೆ.
ಬೇರೆ ದೇಶಗಳ ಬಗ್ಗೆ ಅಧಿಕಪ್ರಸಂಗತನದ ಮಾತು ಬೇಡ. ಅರ್ಧಂಬರ್ಧ ವಿಷಯ ತಿಳಿದು ಈ ರೀತಿ ಮಾತನಾಡುವುದು ಒಂದು ದೇಶದ ಪ್ರಧಾನಿಗೆ ಶೋಭೆ ತರುವುದಿಲ್ಲ ಎಂದು ಇನ್ನೊಂದಿಷ್ಟು ಮಂದಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಕೆಲವು ಟ್ವೀಟ್​ಗಳು ಇಲ್ಲಿವೆ ನೋಡಿ..
Our government won’t even reply to Trudeau. He was snubbed brutally when he came to India. A junior minister greeted him at the airport, PM Modi didn’t meet for two days since his arrival and he didn’t go with him to Gujarat either.
He is a non-existent geopolitical entity.
— Vinayak (@vinayak_jain)December 1, 2020

https://twitter.com/RaiSahab20/status/1333684244325961728
LOL Justin Trudeau is talking about Indian Farmer Protest. Goes to show how many Canadian PRs has the MSP funded.
— Gabbbar (@GabbbarSingh)December 1, 2020

https://twitter.com/RaiSahab20/status/1333684244325961728
ಅಮ್ಮಾ ಗ್ಯಾಂಗ್​ರೇಪ್​ ಆಯ್ತು ಎಂದ್ಳು 14ರ ಬಾಲೆ: ಸತ್ಯ ಗೊತ್ತಾಗಿ ಮೂರ್ಛೆಹೋದ ಪಾಲಕರು!


ಅಮ್ಮಾ ಗ್ಯಾಂಗ್​ರೇಪ್​ ಆಯ್ತು ಎಂದ್ಳು 14ರ ಬಾಲೆ: ಸತ್ಯ ಗೊತ್ತಾಗಿ ಮೂರ್ಛೆಹೋದ ಪಾಲಕರು!

ಮನೆಯಲ್ಲೇ ಮಗಳ ಭಯೋತ್ಪಾದನಾ ಚಟುವಟಿಕೆ – ಜೆಎನ್​ಯು ವಿದ್ಯಾರ್ಥಿನಿ ಅಪ್ಪ ಬಿಚ್ಚಿಟ್ಟ ಕರಾಳ ಕಥೆ…

ಬಿಜೆಪಿ ನಾಯಕರಿಗೆ ವಂಚಿಸಲು ಯತ್ನಿಸಿ ಸಿಕ್ಕಿಬಿದ್ದ ಅಮಿತ್​ ಷಾ ‘ಸೋದರಳಿಯ’

ಹೆಲ್ಮೆಟ್​ ಹಾಕಿದ್ರೂ ಇನ್ಮುಂದೆ ಕಟ್ಟಬೇಕಾಗಬಹುದು ದಂಡ! ಏಕೆ ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − two =
Remember me
