ಪಣಜಿ:ಕಾಂಗ್ರೆಸ್‌ನ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ, ಗಾಂಧಿ ಕುಟುಂಬಕ್ಕೆ ಬಹಳ ನಿಷ್ಠರಾಗಿದ್ದ ಕ್ಯಾಪ್ಟನ್ ಸತೀಶ್ ಶರ್ಮಾ ನಿಧನರಾಗಿದ್ದಾರೆ. ಇವರಿಗೆ 76 ವರ್ಷ ವಯಸ್ಸಾಗಿತ್ತು.
ಕೆಲವು ಸಮಯದಿಂದ ಕ್ಯಾನ್ಸರ್ ಹಾಗೂ ಇತರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಶರ್ಮಾ ಅವರು ನಿನ್ನೆ ರಾತ್ರಿ ಗೋವಾದಲ್ಲಿ ನಿಧನರಾಗಿದ್ದಾರೆ. ಪತ್ನಿ, ಮಗ ಹಾಗೂ ಮಗಳನ್ನು ಅವರು ಅಗಲಿದ್ದಾರೆ.
ಮೂರು ಬಾರಿ ಲೋಕಸಭೆ ಸಂಸದರಾಗಿದ್ದ ಸತೀಶ್ ಶರ್ಮಾ ಅಮೇಥಿ ಮತ್ತು ರಾಯ್‌ಬರೇಲಿ ಕ್ಷೇತ್ರಗಳಿಂದ ಸ್ಪರ್ಧಿಸಿದ್ದರು. 1993 ರಿಂದ 1996ರ ಅವಧಿಯಲ್ಲಿ ಪಿ.ವಿ. ನರಸಿಂಹರಾವ್ ಸರ್ಕಾರದಲ್ಲಿ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರಾಗಿದ್ದರು.
1947ರ ಅಕ್ಟೋಬರ್ 11ರಂದು ಆಂಧ್ರಪ್ರದೇಶದ ಸಿಕಂದರಾಬಾದ್‌ನಲ್ಲಿ ಇವರು ಜನಿಸಿದ್ದರು. 1983ರಲ್ಲಿ ರಾಜಕೀಯ ಸೇರಿದ್ದರು. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಒತ್ತಾಯದ ಮೇರೆಗೆ ಇವರು ರಾಜಕೀಯ ಪ್ರವೇಶ ಮಾಡಿದ್ದರು. ಇದಕ್ಕೂ ಮುನ್ನ ಅವರು ವೃತ್ತಿಪರ ಕಮರ್ಷಿಯಲ್ ಪೈಲಟ್ ಆಗಿದ್ದರು. ಗಾಂಧಿ ಕುಟುಂಬಕ್ಕೆ ತುಂಬಾ ನಿಷ್ಠರಾಗಿದ್ದ ಶರ್ಮಾ ಅವರನ್ನು ರಾಜಕೀಯ ಕ್ಷೇತ್ರದ ಪರಿಚಯ ಮಾಡಿಸಿದ್ದು ರಾಜೀವ್‌ ಗಾಂಧಿಯವರು.
ರಾಜೀವ್ ಗಾಂಧಿ ಹತ್ಯೆ ಬಳಿಕ 1991ರಲ್ಲಿ ಅಮೇಥಿಯಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. 1998ರಿಂದ 2004ರವರೆಗೂ ಅವರು ರಾಯ್ ಬರೇಲಿ ಸಂಸದರಾಗಿದ್ದರು. ಬಳಿಕ ತಮ್ಮ ಕ್ಷೇತ್ರವನ್ನು ಸೋನಿಯಾ ಗಾಂಧಿಗಾಗಿ ಬಿಟ್ಟುಕೊಟ್ಟಿದ್ದರು. 2004ರ ಜುಲೈನಿಂದ 2016ರವರೆಗೂ ಮಧ್ಯಪ್ರದೇಶ, ಉತ್ತರಾಖಂಡ ಮತ್ತು ಉತ್ತರ ಪ್ರದೇಶಗಳಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು.
ಶಾಲೆಯ ಮೇಲೆ ಬಂದೂಕುಧಾರಿಗಳಿಂದ ದಾಳಿ- 40 ಮಂದಿ ಶಿಕ್ಷಕರು, ವಿದ್ಯಾರ್ಥಿಗಳ ಅಪಹರಣ!

ಈಕೆಗೆ ನೇಣು ಹಾಕಲು ಸಿದ್ಧವಾಗಿದೆ ಮಥುರಾ ಜೈಲು- ಸ್ವಾತಂತ್ರ್ಯಾನಂತರದ ಮೊದಲ ಗಲ್ಲುಶಿಕ್ಷೆಗೊಳಗಾಗುವ ಹೆಣ್ಣೀಕೆ!

ನಡುರಸ್ತೆಯಲ್ಲಿಯೇ ವಕೀಲ ದಂಪತಿಯ ಬರ್ಬರ ಹತ್ಯೆ: ವಿಡಿಯೋದಲ್ಲಿ ಭಯಾನಕ ದೃಶ್ಯ ದಾಖಲು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:18 + 3 =
Remember me
