ಗುಂಟೂರು :ಕಾರೊಂದು ಕೆರೆಗೆ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಯರ್ರಬಾಲೆಂ ತಿರುವುನಲ್ಲಿ ನಡೆದಿದೆ.ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದಿದ್ದು, ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟವರನ್ನು ಸಾಯಿ, ಶ್ರೀನಿವಾಸ್, ನರೇಂದ್ರಕುಮಾರ್ ಹಾಗೂ ತೇಜರಾಮ್‌ಜಿ ಎಂದು ಗುರುತಿಸಲಾಗಿದೆ.
ಕಾರು ಕೆರೆಗೆ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ಕಾರಿನ ಗಾಜುಗಳನ್ನು ಒಡೆದು ಅದರೊಳಗಿದ್ದ ನಾಲ್ವರನ್ನು ಹೊರ ತೆಗೆದಿದ್ದಾರೆ. ಸಂಪೂರ್ಣ ನೀರು ತುಂಬಿದ್ದರಿಂದ ಅವರನ್ನು ಹೊರಕ್ಕೆ ತೆಗೆಯುವುದು ಬಹಳ ಕಷ್ಟವಾಯಿತು. ಹರಸಾಹಸಪಟ್ಟು ಹೊರಕ್ಕೆ ತೆಗೆದರೂ ಅದಾಗಲೇ ಎಲ್ಲರೂ ಮೃತಪಟ್ಟಿದ್ದರು.
ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಸಾಯಿ, ಶ್ರೀನಿವಾಸ್, ನರೇಂದ್ರ ಕುಮಾರ್ ಅವರು ಮಂಗಳಗಿರಿ ಮೂಲದವರಾಗಿದ್ದರೆ, ತೇಜರಾಮ್‌ಜಿ ಯರ್ರಬಾಲೆಂನವರು ಎನ್ನಲಾಗಿದೆ.
VIDEO: ಆನ್‌ಲೈನ್‌ ಮದ್ವೆ ಹಳೆಯದಾಯ್ತು- ಈಗ ಬಂತು ಮೆಟಾವರ್ಸ್: ಭಾರತದ ಪ್ರಪ್ರಥಮ ವಿವಾಹ ಇಲ್ಲಿದೆ ನೋಡಿ…

ನಮ್ಮ ತಂದೆಯ ಸ್ವಯಾರ್ಜಿತ ಆಸ್ತಿ ಮಗಳಿಗೆ ಕೊಡಲು ಇಷ್ಟವಿಲ್ಲ, ಮಗನೊಬ್ಬನೇ ಪಡೆಯಬಹುದೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 1 =
Remember me
