ಬೆಂಗಳೂರು:ಚಾಮರಾಜನಗರದಲ್ಲಿ ಅಮ್ಲಜನಕ ಕೊರತೆಯಿಂದ 24 ಸೋಂಕಿತರ ಸಾವಿಗೆ ಹೈಕೋರ್ಟ್‌ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ಕುರಿತಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ಪಡಿಸಿರುವ ಕೋರ್ಟ್‌, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಆಕ್ಸಿಜನ್ ಪೂರೈಸಲು ಕೇಂದ್ರ ಸರ್ಕಾರದ ಮೀನಮೇಷ ಎಣಿಸುತ್ತಿರುವುದಕ್ಕೆ ಕೇಂದ್ರದ ವಿರುದ್ಧ ನ್ಯಾಯಮೂರ್ತಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರ ನಿರ್ಧಾರ ಪ್ರಕಟಿಸುವವರೆಗೂ ನಾವು ಕಾಯಬೇಕಾ ಎಂದು ಕೇಂದ್ರದ ಪರ ವಕೀಲರನ್ನು ಪ್ರಶ್ನಿಸಿದೆ.
ಕರ್ನಾಟಕದ ಪಾಲಿನ ಆಕ್ಸಿಜನ್ ಕೋಟಾ ಹೆಚ್ಚಿಸುತ್ತಿರೋ ಇಲ್ಲವೋ? ಕಡಿಮೆ ಆಕ್ಸಿಜನ್ ಬಳಕೆ ಇರುವ ಕಡೆ ಹೆಚ್ಚು ಕೊಡುತ್ತಿದ್ದೀರಿ, ಇನ್ನು ಎಷ್ಟು ಮಂದಿ ಆಕ್ಸಿಜನ್ ಇಲ್ಲದೆ ಸಾಯಬೇಕು ಎಂದು ತರಾಟೆಗೆ ತೆಗೆದುಕೊಂಡಿದೆ. ಇಂದೇ ರಾಜ್ಯಕ್ಕೆ ಆಕ್ಸಿಜನ್ ಪೂರೈಸುವಂತೆ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಚಾಮರಾಜನಗರದ ಸಾವಿನ ಕುರಿತಾಗಿ ನಿವೃತ್ತ ನ್ಯಾಯಮೂರ್ತಿಗಳಿಂದ ನ್ಯಾಯಾಂಗ ತನಿಖೆ ನಡೆಸುವ ಬಗ್ಗೆ ಸರಕಾರದ ನಿಲುವನ್ನು ಕೋರ್ಟ್‌ ಕೇಳಿದೆ.
ಆಕ್ಸಿಜನ್‌ ಕೊರತೆಯಿಂದ ಚಾಮರಾಜನಗರದ ಆಸ್ಪತ್ರೆಯಲ್ಲಿ ಸೋಂಕಿತರು ಮೃತಪಟ್ಟಿರುವ ಬಗ್ಗೆ ಮಾಧ್ಯಮಗಳಲ್ಲಿ ಬಂದಿರುವ ವರದಿಯನ್ನು ಆಧರಿಸಿ ಕೋರ್ಟ್‌ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ.
ಇನ್ನೂ 10 ಆಸ್ಪತ್ರೆಗಳಿಗೆ ಆಕ್ಸಿಜನ್ ಕೊರತೆಯಿದೆ, ಈ ಬಗ್ಗೆ ಆಸ್ಪತ್ರೆಗಳು ಸರ್ಕಾರಕ್ಕೆ ಪತ್ರ ಬರೆದಿದೆ ಎಂದು ಹೈಕೋರ್ಟ್ ವಕೀಲ ಕ್ಲಿಫ್ಟನ್ ರೊಜಾರಿಯೋ ಮಾಹಿತಿ ನೀಡಿದರು.ನಡೆಸಿ ತೀರ್ಮಾನ ತೆಗೆದುಕೊಳ್ಳಲು ಕಾಲಾವಕಾಶ ಬೇಕು. ನಾಳೆ ಮಧ್ಯಾಹ್ನದವರೆಗೂ ಕಾಲಾವಕಾಶ ನೀಡಿ ಎಂದು ಕೇಂದ್ರದ ಪರ ವಕೀಲರು ಕೇಳಿಕೊಂಡರು.
ಆಕ್ಸಿಜನ್ ಪೂರೈಕೆ ಸಂಬಂಧ ನಾಳೆ ಬೆಳಗ್ಗೆ 10.30 ರೊಳಗೆ ನಿರ್ಧಾರ ಪ್ರಕಟಿಸುವಂತೆ ಸೂಚನೆ ನೀಡಿದ ಹೈಕೋರ್ಟ್‌, ಕೇಂದ್ರ ಸರ್ಕಾರಕ್ಕೆ ಗಡುವು ನೀಡಿದೆ. ನಿರ್ಧಾರ ಪ್ರಕಟವಾಗದೇ ಹೋದರೆ ನಾವೇ ಖುದ್ದಾಗಿ ಕೇಂದ್ರಕ್ಕೆ ನಿರ್ದೇಶನ ನೀಡಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದೆ.
ಚಾಮರಾಜನಗರ ಆಕ್ಸಿಜನ್​ ದುರಂತ: ರಹಸ್ಯ ಬಿಚ್ಚಿಟ್ಟ ಅಧಿಕಾರಿಗಳ ವಾಟ್ಸ್​ಆ್ಯಪ್​ ಗ್ರೂಪ್​ ಚಾಟಿಂಗ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 6 =
Remember me
