ನವದೆಹಲಿ:ಸ್ಟ್ಯಾಂಡ್-ಅಪ್​ ಕಮೇಡಿಯನ್​ ಆಗಿರುವ, ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ್​ ಅವರಿಗೆ ಹೃದಯಾಘಾತ ಉಂಟಾಗಿದೆ. ಅವರನ್ನು ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಸದ್ಯ ಪಾರಾಗಿದ್ದಾರೆ ಎನ್ನಲಾಗಿದೆ.
ರಾಜು ಅವರು ಉತ್ತರ ಪ್ರದೇಶದ ಕಾನ್ಪುರ ಮೂಲದವರಾಗಿದ್ದು, ಉತ್ತರ ಪ್ರದೇಶ ಚಲನಚಿತ್ರ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸದ್ಯ ದೆಹಲಿಯಲ್ಲಿ ಇವರು ವಾಸ್ತವ್ಯ ಹೂಡಿದ್ದಾರೆ. ದೆಹಲಿಯ ಜಿಮ್​​​ನಲ್ಲಿ ವರ್ಕ್​​ಔಟ್ ಮಾಡ್ತಿದ್ದಾಗ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ. ಹೃದಯಾಘಾತವಾದಾಗ, ಅವರು ಥ್ರೆಡ್ ಮಿಲ್‌ನಲ್ಲಿ ವರ್ಕ್​ಔಟ್​ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ರಾಜು ಶ್ರೀವಾಸ್ತವ್ ಅವರಿಗೆ ಈಗ 59 ವರ್ಷ ವಯಸ್ಸು. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಜಿಮ್​​ನಲ್ಲಿ ದೈಹಿಕ ಕಸರತ್ತು ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದರು. ತಕ್ಷಣವೇ ಏಮ್ಸ್‌ಗೆ​ ಕರೆತರಲಾಗಿತ್ತು. ಡಾ.ನಿತೀಶ್ ನ್ಯಾಯ್ ನೇತೃತ್ವದ ಹೃದ್ರೋಗ ಮತ್ತು ತುರ್ತು ವಿಭಾಗದ ಎಐಐಎಂಎಸ್ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ ಎಂದು ರಾಜು ಅವರ ಸಹೋದರ ಆಶಿಶ್ ಶ್ರೀವಾಸ್ತವ್​ ಮಾಹಿತಿ ನೀಡಿದ್ದಾರೆ.
ರಾಜು ಶ್ರೀವಾಸ್ತವ್ ಅವರು ತಮ್ಮ ಸರಳ ಮತ್ತು ವಿಶಿಷ್ಟ ಶೈಲಿಯಿಂದ ಎಲ್ಲರನ್ನೂ ನಗಿಸುವಲ್ಲಿ ನಿಸ್ಸೀಮರು. ದೇಶದ ಅತ್ಯುತ್ತಮ ಹಾಸ್ಯನಟರಲ್ಲಿ ಒಬ್ಬರು ಎಂದು ಗುರುತಿಸಿಕೊಂಡಿದ್ದಾರೆ. ಅವರು ಅನೇಕ ಚಲನಚಿತ್ರಗಳನ್ನು ಸಹ ಕಾಣಿಸಿಕೊಂಡಿದ್ದಾರೆ. ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್‌ ಕಾರ್ಯಕ್ರಮದಿಂದಲೇ ಅವರು ಪ್ರಸಿದ್ಧಿ ಪಡೆದಿದ್ದಾರೆ.(ಏಜೆನ್ಸೀಸ್​)
VIDEO: ಮತ್ತೊಮ್ಮೆ ಬೆಚ್ಚಿಬಿದ್ದ ಪುಲ್ವಾಮಾ; ತಪ್ಪಿತು ಭಾರಿ ದುರಂತ- 30 ಕೆ.ಜಿ ಸ್ಫೋಟಕ ವಶಕ್ಕೆ

ದೈಹಿಕ ಸಂಪರ್ಕ ಬೆಳೆಸಿ, ಧರ್ಮ ಬೇರೆ-ಮದ್ವೆ ಬೇಡ ಎಂದ ಯುವಕ ಪೀಸ್​ ಪೀಸ್​: ಮೃತದೇಹ ಸೂಟ್​ಕೇಸ್​ನಲ್ಲಿ!

ತನ್ನದೇ ಮದ್ವೆಗೆ ಮದುಮಗಳು ಹೋಗಿದ್ದೇ ತಪ್ಪಾಗೋಯ್ತು! ಕೆಲ ಮುಸ್ಲಿಂ ಮುಖಂಡರ ಕಿಡಿ- ಕ್ಷಮೆಗೆ ಆಗ್ರಹ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − six =
Remember me
