ಗಾಜಿಯಾಬಾದ್​:ಗಾಜಿಯಾಬಾದ್​ನ ಮುರಾದ್​ನಗರದ ಸ್ಮಶಾನದ ಮೇಲ್ಭಾವಣಿ ಕುಸಿದು 16 ಮಂದಿ ಮೃತಪಟ್ಟಿರುವ ಘಟನೆ ಮೊನ್ನೆ ನಡೆದಿತ್ತು. ಸಂಬಂಧಿಯ ಅಂತ್ಯಸಂಸ್ಕಾರ ಮಾಡಲು ಬಂದಿದ್ದ ಇವರೆಲ್ಲರೂ ಮೇಲ್ಭಾವಣಿಯಡಿಗೆ ಸಿಲುಕಿ ಮೃತಪಟ್ಟಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿರ್ಲಕ್ಷ್ಯ, ಕರ್ತವ್ಯ ಲೋಪ ಆರೋಪದ ಮೇಲೆ ಕಿರಿಯ ಎಂಜಿನಿಯರ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮೃತರ ಕುಟುಂಬಕ್ಕೆ ಉತ್ತರ ಪ್ರದೇಶ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಜತೆಗೆ ಕುಟುಂಬದ ಅರ್ಹ ಸದಸ್ಯರಿಗೆ ಉದ್ಯೋಗ ಭರವಸೆಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಘೋಷಿಸಿದ್ದಾರೆ.
ಉಖಲಾರ್ಸಿ ಗ್ರಾಮದ ವ್ಯಕ್ತಿಯೊಬ್ಬ ಮೃತನಾಗಿದ್ದ. ಆತನ ಅಂತ್ಯಸಂಸ್ಕಾರ ನಡೆಸಲೆಂದು ಸಂಬಂಧಿಕರು ಭಾನುವಾರ ಬೆಳಗ್ಗೆ ಶವಾಗಾರಕ್ಕೆ ಬಂದಿದ್ದಾರೆ. ಅಂತ್ಯಕ್ರಿಯೆ ನಡೆಸುವ ವೇಳೆಯಲ್ಲಿ ಜೋರಾಗಿ ಮಳೆ ಸುರಿದಿದೆ. ಆ ಹಿನ್ನೆಲೆಯಲ್ಲಿ ಎಲ್ಲರೂ ಅಲ್ಲಿನ ಛಾವಣಿಯ ಒಳಗೆ ಸೇರಿಕೊಂಡಿದ್ದಾರೆ. ಈ ವೇಳೆ ಛಾವಣಿ ಕುಸಿದುಬಿದ್ದಿತ್ತು.
ಛಾವಣಿಯ ಅಡಿ ಕನಿಷ್ಠ 24 ಮಂದಿ ಇದ್ದರು.ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ. ಕಳಪೆ ಗುಣಮಟ್ಟದ ವಸ್ತುಗಳನ್ನು ಬಳಸಿರುವುದರಿಂದ ಹೀಗಾಗಿದೆ ಎಂದು ಆರೋಪ ಕೇಳಿಬಂದಿದ್ದರ ಹಿನ್ನೆಲೆಯಲ್ಲಿ ಇಂಜಿನಿಯರ್​ ಸೇರಿದಂತೆ ಮೂರು ಮಂದಿಯನ್ನು ನಿನ್ನೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಕಟ್ಟಡ ಕುಸಿತದ ನಂತರ ನಡೆದಿರುವ ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಇಲ್ಲಿದೆ ನೋಡಿ: ಕೃಪೆ ಎಬಿಪಿ ನ್ಯೂಸ್​ (abp news)

ಕಗ್ಗತ್ತಲಿನಲಿ ಮಂಗಳೂರಿನ ದಾರಿಮೇಲೆ ಕಂಡುಬಂದ ‘ಭೂತ’: ವಿಡಿಯೋ ವೈರಲ್​

‘ಭಗವದ್ಗೀತೆ ಹಿಡಿದವರಿಗೆ ವೋಟ್​ ಹಾಕ್ತೀರೊ, ಬೈಬಲ್​ ಹಿಡಿದವರಿಗೊ? ಆಯ್ಕೆ ನಿಮಗೆ ಬಿಟ್ಟಿದ್ದು…’

ಹುಟ್ಟುಹಬ್ಬಕ್ಕೆಂದು ದುಬೈನಿಂದ ಬಂದು ಪೊಲೀಸ್​ ಕೇಸ್​ನಲ್ಲಿ ಸಿಲುಕಿಕೊಂಡ ಸಲ್ಮಾನ್​ ಸಹೋದರರು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen + fifteen =
Remember me
