ನವದೆಹಲಿ:ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಹಿರಿಯ ಕಾಂಗ್ರೆಸ್ ನಾಯಕಿ, ಮಾಜಿ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ಗೆ ಅಧ್ಯಕ್ಷೆ ಬಿಗ್‌ ಶಾಕ್‌ ನಿಡಿದ್ದಾರೆ. ಇವರು ಅಸ್ಸಾಂನ ಸಿಲ್‌ಚಾರ್‌ ಮೂಲದವರು.ರಾಜೀನಾಮೆಗೆ ಯಾವುದೇ ಸ್ಪಷ್ಟ ಕಾರಣವನ್ನು ನೀಡದ ಸುಷ್ಮಿತಾ, ರಾಜೀನಾಮೆಯನ್ನು ಪಕ್ಷದ ಹಂಗಾಮಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಜೊತೆಗಿನ ನನ್ನ ಮೂರು ದಶಕಗಳ ಸುದೀರ್ಘ ಒಡನಾಟವನ್ನು ನಾನು ಗೌರವಿಸುತ್ತೇನೆ. ನನ್ನ ಸ್ಮರಣೀಯ ಪ್ರಯಾಣದ ಭಾಗವಾಗಿರುವ ಪಕ್ಷ, ಅದರ ಎಲ್ಲಾ ನಾಯಕರು, ಸದಸ್ಯರು ಮತ್ತು ಕಾರ್ಯಕರ್ತರಿಗೆ ಧನ್ಯವಾದ ಹೇಳಲು ನಾನು ಈ ಅವಕಾಶವನ್ನು ಬಳಸಿಕೊಳ್ಳುತ್ತೇನೆ ಎಂದು ರಾಜೀನಾಮೆ ಪತ್ರದಲ್ಲಿ ಸೋನಿಯಾ ಗಾಂಧಿಗೆ ಬರೆದಿದ್ದಾರೆ.ಇದೇ ವೇಳೆ ಪಕ್ಷದ ಎಲ್ಲಾ ವಾಟ್ಸ್‌ಆ್ಯಪ್‌ ಗ್ರೂಪ್‌ಗಳನ್ನು ಎಕ್ಸಿಟ್‌ ಆಗಿರುವ ಸುಷ್ಮಿತಾ, ಟ್ವಿಟರ್ ಪ್ರೊಫೈಲ್ ಬದಲಿಸಿ ಕಾಂಗ್ರೆಸ್ ಮಾಜಿ ಸದಸ್ಯೆ ಎಂದು ಬದಲಿಸಿದ್ದಾರೆ.ಇದೇ ವೇಳೆ ಇವರು ತೃಣಮೂಲ ಕಾಂಗ್ರೆಸ್‌ (ಟಿಎಂಸಿ ) ಸೇರ್ಪಡೆಯಾಗುವ ಬಗ್ಗೆ ಸುದ್ದಿಯಾಗುತ್ತಿದೆ. ಸದ್ಯದಲ್ಲಿಯೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಕೋಲ್ಕತಾದಲ್ಲಿ ಭೇಟಿಯಾಗಲಿರುವ ಸುಷ್ಮಿತಾ ಈ ಮೂಲಕ ಟಿಎಂಸಿ ಪಕ್ಷ ಸೇರಲಿದ್ದಾರೆ ಎನ್ನಲಾಗಿದೆ.
VIDEO: ‘ಮೇಡಂರಿ… ಮೊದ್ಲು 10 ಲಕ್ಷ ಕೊಟ್ಟು ಚುಚ್ಚಿ… ಹೆಚ್ಚೂಕಮ್ಮಿ ಆದ್ರೆ ನೀವೇ ಜವಾಬ್ದಾರರು ಎಂದು ಬರೆದ್ಕೊಡ್ತೀರಾ?
ಭೂಕಂಪಕ್ಕೆ ಮೃತ್ಯಕೂಪವಾದ ಹೈಟಿ: ಬೀದಿಬೀದಿಗಳಲ್ಲಿ ಹೆಣಗಳ ರಾಶಿ- ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಳ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 9 =
Remember me
