ನವದೆಹಲಿ:ಎಐಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ ದಕ್ಕಲಿದೆ ಎಂಬ ಬಗ್ಗೆ ಕ್ಷಣ ಕ್ಷಣಕ್ಕೂ ಕುತೂಹಲ ಉಂಟಾಗಿದೆ. ರಾಹುಲ್​ ಗಾಂಧಿಯವರು ತಾವು ಅಧ್ಯಕ್ಷರಾಗುವುದೇ ಇಲ್ಲ ಎಂದು ಹೇಳಿರುವ ಹಿನ್ನೆಲೆಯಲ್ಲಿ ಎರಡು ದಶಕಗಳ ಬಳಿಕ ಗಾಂಧಿಯೇತರರು ಅಧ್ಯಕ್ಷ ಹುದ್ದೆ ಏರುವ ಎಲ್ಲಾ ಸಾಧ್ಯತೆಗಳು ಈವರೆಗೆ ಕಂಡುಬಂದಿದೆ. ಇದಾಗಲೇ ಅಧ್ಯಕ್ಷ ಸ್ಥಾನದಿಂದಾಗಿ ರಾಜಸ್ಥಾನದಲ್ಲಿ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟು ಕೂಡ ಶಮನಗೊಂಡಿದೆ.
ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ತಾವು ಸ್ಪರ್ಧಿಸುವುದಿಲ್ಲ ಎಂದು ನಿನ್ನೆ (ಗುರುವಾರ) ಹೇಳುವ ಮೂಲಕ ಸಂಸದರಾಗಿರುವ ಶಶಿ ತರೂರ್​ ಮತ್ತು ದಿಗ್ವಿಜಯ ಸಿಂಗ್​ ಅವರಿಗೆ ದಾರಿ ಸುಗಮ ಮಾಡಿಕೊಟ್ಟಿದ್ದರು. ಆದರೆ ಇದೀಗ ಮತ್ತಷ್ಟು ಕುತೂಹಲದ ಬೆಳವಣಿಗೆ ನಡೆದಿದೆ.
ಅದೇನೆಂದರೆ ಅಧ್ಯಕ್ಷ ಸ್ಥಾನದ ಬಹು ಆಕಾಂಕ್ಷಿಯಾಗಿದ್ದ ದಿಗ್ವಿಜಯ ಸಿಂಗ್​ ಸ್ಪರ್ಧೆಯಿಂದ ಹೊರಕ್ಕೆ ಉಳಿದಿದ್ದಾರೆ. ತಾವು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗೆ ಆಗಿದ್ದೇ ಆದರೆ ಶಶಿ ತರೂರ್​ ಅವರು ಅಧ್ಯಕ್ಷರಾಗುವುದು ಬಹುತೇಕ ಖಚಿತವೇ ಆಗಿತ್ತು. ಆದರೆ ಇಲ್ಲೊಂದು ಟ್ವಿಸ್ಟ್​ ಉಂಟಾಗಿದೆ. ಅದೇನೆಂದರೆ ದಿಗ್ವಿಜಯ ಸಿಂಗ್​ ಹೊರ ಹೋಗುತ್ತಿದ್ದಂತೆಯೇ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆಗೆ ಮುಂದಾಗಿದ್ದಾರೆ!
ಕಾಂಗ್ರೆಸ್​ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿ ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಿದ್ದರಿಂದ ದಿಗ್ವಿಜಯ ಸಿಂಗ್ ಅವರು ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಅವರು ಹಿಂದೆ ಸರಿಯುತ್ತಿದ್ದಂತೆಯೇ ಖರ್ಗೆ ನಾಮಪತ್ರ ಸಲ್ಲಿಕೆಗೆ ತಯಾರಿ ನಡೆಸಿರುವುದಾಗಿ ತಿಳಿದುಬಂದಿದೆ.
ಅಕ್ಟೋಬರ್ 17 ರಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಶೀಘ್ರದಲ್ಲೇ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಾಜಿ ಸಚಿವ ಕೆ.ಎನ್​.ತ್ರಿಪಾಠಿ ಅವರೂ ನಾಮಪತ್ರ ಸಲ್ಲಿಸಿದ್ದಾರೆ. ಈ ನಡುವೆಯೇ, ಶಶಿ ತರೂರ್​ ಅವರು ಇಂದು ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮುನ್ನ ರಾಜ್​ಘಾಟ್​ಗೆ ತೆರಳಿ ಗಾಂಧಿ ಪ್ರತಿಮೆಗೆ ನಮನ ಸಲ್ಲಿಸಿದರು.(ಏಜೆನ್ಸೀಸ್​)
ರಾಜಸ್ಥಾನ ಬಿಕ್ಕಟ್ಟು ಅಂತ್ಯ: ಅಧ್ಯಕ್ಷ ಸ್ಥಾನದ ಸ್ಪರ್ಧೆಗೆ ಗೆಹ್ಲೋಟ್​ ಬೈ ಬೈ- ಶಶಿ, ಸಿಂಗ್​ ನಡುವೆ ಫೈಟ್
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:fifteen + seven =
Remember me
